Homeಮುಖಪುಟಯುವತಿ ಆತ್ಮಹತ್ಯೆ ಪ್ರಕರಣ: ಮಹಾರಾಷ್ಟ್ರ ಅರಣ್ಯ ಸಚಿವನ ರಾಜೀನಾಮೆ

ಯುವತಿ ಆತ್ಮಹತ್ಯೆ ಪ್ರಕರಣ: ಮಹಾರಾಷ್ಟ್ರ ಅರಣ್ಯ ಸಚಿವನ ರಾಜೀನಾಮೆ

'ಕೊಳಕು ರಾಜಕೀಯ'ದಿಂದಾಗಿ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದು ಅರಣ್ಯ ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ.

- Advertisement -
- Advertisement -

ಪುಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 23 ವರ್ಷದ ಯುವತಿ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಥೋಡ್‌ಗೂ ಈ ಪ್ರಕರಣಕ್ಕೂ ಸಂಬಂಧವಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದರಿಂದ, ಸಚಿವ ಸಂಜಯ್ ರಾಥೋಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

“ಕೊಳಕು ರಾಜಕೀಯ” ದಿಂದಾಗಿ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದು ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ’ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಕಳೆದ ವಾರ ತಿಳಿಸಿದ್ದಾರೆ.

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸುತ್ತಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

“ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು” ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.

“ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಆದರೆ ಏನೂ ಆಗುತ್ತಿಲ್ಲ. ಮಾಧ್ಯಮ ವರದಿಗಳು ಹೊರಬರದಿದ್ದರೆ ಏನೂ ಆಗುತ್ತಿರಲಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ” ಎಂದು ಫಡ್ನವಿಸ್ ಕಳೆದ ವಾರ ಹೇಳಿದ್ದರು.

ಕಳೆದ ವಾರ ಅರಣ್ಯ ಸಚಿವ ಸಂಜಯ್ ರಾಥೋಡ್ ವಿರುದ್ಧ ಬಿಜೆಪಿಯ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. ಆದರೆ ಯುವತಿಯ ಸಾವಿನ ಬಗ್ಗೆ ಆಕೆಯ ಕುಟುಂಬ ದೂರು ನೀಡಿಲ್ಲ.

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...