Homeಮುಖಪುಟಮಣಿಪುರ ಹಿಂಸಾಚಾರ: ತನಿಖೆಗೆ 53 ಅಧಿಕಾರಿಗಳ ತಂಡ ನೇಮಿಸಿದ ಸಿಬಿಐ

ಮಣಿಪುರ ಹಿಂಸಾಚಾರ: ತನಿಖೆಗೆ 53 ಅಧಿಕಾರಿಗಳ ತಂಡ ನೇಮಿಸಿದ ಸಿಬಿಐ

- Advertisement -
- Advertisement -

ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ ಬುಧವಾರ 29 ಮಹಿಳೆಯರು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂವರು ಡಿಐಜಿಗಳಾದ ಲವ್ಲಿ ಕಟಿಯಾರ್, ನಿರ್ಮಲಾ ದೇವಿ ಮತ್ತು ಮೋಹಿತ್ ಗುಪ್ತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ವೀರ್ ಅವರನ್ನು ಒಳಗೊಂಡ ತಂಡವು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ನೀಡಲಿದ್ದು, ಅವರು ಒಟ್ಟಾರೆ ತನಿಖೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ.

ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯ ಮಹಿಳಾ ಅಧಿಕಾರಿಗಳನ್ನು ಏಕಕಾಲದಲ್ಲಿ ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

 ಸಿಬಿಐ ತನಿಖೆ ನಡೆಸುತ್ತಿರುವ ಈ ಹಲವು ಪ್ರಕರಣಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ತನಿಖೆಗೆ ಒಳಪಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ, ಇದನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿ ತನಿಖೆ ಮಾಡಲಿದ್ದಾರೆ.

ಇಬ್ಬರು ಮಹಿಳಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಆರು ಮಹಿಳಾ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ  53 ಸದಸ್ಯರ ತಂಡವನ್ನು ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ.

ಇನ್ನು 16  ಇನ್ಸ್‌ಪೆಕ್ಟರ್‌ಗಳು ಮತ್ತು 10 ಸಬ್‌ ಇನ್‌ಸ್ಪೆಕ್ಟರ್‌ಗಳು ಸಹ ತಂಡದ ಭಾಗವಾಗಲಿದ್ದಾರೆ.ಸಾಮಾನ್ಯವಾಗಿ ಇಷ್ಟು ದೊಡ್ಡ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಿದಾಗ,  ಅಧಿಕಾರಿಗಳನ್ನು ನಿಯೋಜಿಸಲು  ಸಿಬಿಐ ಸಂಸ್ಥೆಯು ಇತರ ರಾಜ್ಯದ ಮೇಲೆ ಕೂಡ ಅವಲಂಬಿತವಾಗಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದ ಪ್ರಕರಣದಲ್ಲಿ, ತನಿಖೆಯಲ್ಲಿ ಪಕ್ಷಪಾತದ ಆರೋಪಗಳನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳ ಸಹಭಾಗಿತ್ವ  ಕಡಿಮೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಈಗಾಗಲೇ ಎಂಟು ಪ್ರಕರಣಗಳನ್ನು ದಾಖಲಿಸಿದೆ, ಮೇ 4 ರಂದು ಮಹಿಳೆಯ ಬೆತ್ತಲೆ ಮಾಡಿದ ಪ್ರಕರಣ ಕೂಡ ಇದರಲ್ಲಿ ಸೇರಿದೆ.ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಇನ್ನೂ ಒಂಬತ್ತು ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐ ಸಿದ್ಧವಾಗಿದೆ.  ಈ ಮೂಲಕ ಒಟ್ಟು 17 ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ದ.ಕನ್ನಡ: ಜಾನುವಾರು ಸಾಗಾಟ ಮಾಡುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ, ಕೊಲೆಗೆ ಯತ್ನಿಸಿದ ಸಂಘಪರಿವಾರದ ಕಾರ್ಯಕರ್ತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...