Homeಮುಖಪುಟಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

ಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ 2023 (ನಾರಿ ಶಕ್ತಿ ವಂದನ ಅಧಿನಿಯಂ)ರ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನ.10) ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ನ್ಯಾಯಪೀಠವು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದೆ.

ಮುಂದಿನ ಜನಗಣತಿ ನಡೆದು, ಕ್ಷೇತ್ರ ಪುನರ್‌ವಿಂಗಡನೆ ಪೂರ್ಣಗೊಂಡ ಬಳಿಕವಷ್ಟೇ ಮಹಿಳೆಯರ ಮೀಸಲಾತಿ ಕಾನೂನು ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಈ ಕುರಿತು ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ, “ಮೀಸಲಾತಿ ಅನುಷ್ಠಾನವನ್ನು ಜನಗಣತಿಗೆ ಅವಲಂಬಿತವಾಗಿ ಮಾಡುವುದರಲ್ಲಿ ಯಾವುದೇ ತಾರ್ಕಿಕತೆ ಇಲ್ಲ. ಏಕೆಂದರೆ, ಜನಗಣತಿ ಇನ್ನೂ ಪ್ರಾರಂಭಗೊಂಡಿಲ್ಲ. ಯಾವಾಗ ಪ್ರಾರಂಭವಾಗಲಿದೆ ಎಂದೂ ಹೇಳಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಕಾನೂನಿನ ಜಾರಿ ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಉತ್ತರಿಸಿದ ವಕೀಲ, ನಾವು ಅದರ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಇನ್ನೂ ಪ್ರಾರಂಭಗೊಳ್ಳದ ಜನಗಣತಿಗೆ ಮೀಸಲಾತಿಯನ್ನು ಅವಲಂಬನೆ ಮಾಡಿರುವುದಷ್ಟೇ ನಮ್ಮ ಕಳಕಳಿ. ಏಕೆಂದರೆ, ಜನಗಣತಿ ಯಾವಾಗ ಪ್ರಾರಂಭಗೊಳ್ಳುತ್ತದೆ ಎಂಬ ಸ್ಪಷ್ಟತೆ ಇಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ನೀವು ಯಾವಾಗ ಜನಗಣತಿ ಪ್ರಾರಂಭಿಸುತ್ತೀರಿ ಎಂದಷ್ಟೇ ನಾವು ಕೇಳಬಹುದು. ಬಹುಷ ಅವರು ವೈಜ್ಞಾನಿಕ ದತ್ತಾಂಶ ಆಧರಿಸಿ ಮೀಸಲಾತಿ ಜಾರಿಗೊಳಿಸಲು ಅದನ್ನು ಜನಗಣತಿಗೆ ಅವಲಂಬನೆ ಮಾಡಿರಬಹುದು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ, ಸಂಸತ್ತು ಈಗಾಗಲೇ ಅನುಮೋದನೇ ನೀಡಿರುವ ಕಾನೂನನ್ನು ಯಾವುದೇ ವೈಜ್ಞಾನಿಕ ದತ್ತಾಂಶಗಳಿಲ್ಲದೆ ಮಾಡಿರಲು ಸಾಧ್ಯವಿಲ್ಲ. ಪ್ರಸ್ತಾವಿತ ಮೀಸಲಾತಿ ಪ್ರಮಾಣ ನಿರ್ಧರಿಸುವ ಮೊದಲು ಅವರು ದೃಢವಾದ ವೈಜ್ಞಾನಿಕ ಅಥವಾ ಸತ್ಯಾಂಶ ಆಧಾರಿತ ದತ್ತಾಂಶಗಳನ್ನು ನೋಡಿಕೊಂಡಿದ್ದಾರೆ ಎಂದು ಊಹಿಸಬೇಕು. ಆದ್ದರಿಂದ, ಕಾನೂನು ಮಾಡುವ ಸಮಯದಲ್ಲಿ ಸರಿಯಾದ ಸಾಕ್ಷ್ಯಗಳು ಇದ್ದವು ಎಂದು ನಾವು ಭಾವಿಸಬೇಕು ಎಂದು ಹೇಳಿದ್ದಾರೆ.

ವಾದ ಆಲಿಸುವ ವೇಳೆ “ದೇಶದ ಎಲ್ಲಾ ನಾಗರಿಕರು ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಅರ್ಹರು ಎಂದು ಸಂವಿಧಾನದ ಪೀಠಿಕೆ ಹೇಳುತ್ತದೆ. ದೇಶದ ಅತಿದೊಡ್ಡ ಅಲ್ಪಸಂಖ್ಯಾತರು ಮಹಿಳೆಯರು. ಮಹಿಳೆಯರ ಸಂಖ್ಯೆ ಶೇಕಡ 48ರಷ್ಟಿದೆ. ಮಹಿಳೆಯರಿಗೆ ರಾಜಕೀಯ ಸಮಾನತೆ ದೊರಕಿಸಿಕೊಡಲು ಈ ಮೀಸಲಾತಿ ಅಗತ್ಯವಿದೆ ಎಂದು ನ್ಯಾ. ನಾಗರತ್ನ ಮೌಖಿಕವಾಗಿ ಹೇಳಿದ್ದಾರೆ” ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ವಾದ ಆಲಿಸಿದ ನ್ಯಾಯಾಲಯವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶಿಸಿದೆ ಎಂದು ತಿಳಿಸಿದೆ.

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಸಂವಿಧಾನದ 334ಎ(1) ವಿಧಿಯಲ್ಲಿ ಇರುವ ‘ಜನಗಣತಿ ನಡೆಸಿ ಕ್ಷೇತ್ರ ಪುನರ್‌ವಿಂಗಡನೆ ಮಾಡಿದ ನಂತರ’ ಎಂಬ ಷರತ್ತನ್ನು ಆರಂಭದಿಂದಲೇ ಅಸಾಂವಿಧಾನಿಕ (void-ab-initio) ಎಂದು ಘೋಷಿಸಬೇಕು ಮತ್ತು ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ವಕೀಲ ವರುಣ್ ಠಾಕೂರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಮೀಸಲಾತಿಗೆ ಸಂಬಂಧಿಸಿದ ಹಲವಾರು ಹಿಂದಿನ ಸಾಂವಿಧಾನಿಕ ತಿದ್ದುಪಡಿಗಳನ್ನು ಯಾವುದೇ ಜನಗಣತಿ ಅಥವಾ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯ ಪೂರ್ಣಗೊಳಿಸುವಿಕೆಗೆ ಅವಲಂಭಿಸದೆ ತಕ್ಷಣವೇ ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ. ಭಾರತದ ಜನಸಂಖ್ಯೆಯ ಸುಮಾರು 50 ಶೇಕಡದಷ್ಟಿರುವ ಮಹಿಳೆಯರ ಪ್ರಾತಿನಿಧ್ಯ ಶಾಸಕಾಂಗ ಸಂಸ್ಥೆಗಳಲ್ಲಿ ಕೇವಲ 4 ಶೇಕಡ ಇದೆ. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡುವ ಉದ್ದೇಶಕ್ಕೆ ಇಂತಹ ನಿಬಂಧನೆಗಳು ‘ಅಡಚಣೆ’ಯಾಗುತ್ತದೆ ಎಂದು ಹೇಳಲಾಗಿದೆ.

ರಾಷ್ಟ್ರಪತಿಗಳು ಒಪ್ಪಿಗೆ ನೀಡುವ ಮೊದಲೇ ಮಸೂದೆಯನ್ನು ಪ್ರಶ್ನಿಸಿ ಇದೇ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ನಿಷ್ಪ್ರಯೋಜಕವೆಂದು ನ್ಯಾಯಾಲಯ ವಜಾಗೊಳಿಸಿತ್ತು.

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...