Homeಮುಖಪುಟಮಹಿಳಾ ಕೇಂದ್ರಿತ ಕಾನೂನುಗಳ ದುರುಪಯೋಗ ಆರೋಪ - ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್

ಮಹಿಳಾ ಕೇಂದ್ರಿತ ಕಾನೂನುಗಳ ದುರುಪಯೋಗ ಆರೋಪ – ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 2, 3, 4 ಮತ್ತು 8ಎ ಗಳನ್ನು ಅಸಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಈ ನೀಡಿದ ತನ್ನ ಆದೇಶದಲ್ಲಿ ಅರ್ಜಿದಾರರು ಈ ವಿಷಯದ ಬಗ್ಗೆ ಸಂಸತ್ತಿಗೆ ತಿಳಿಸುವಂತೆ ಕೇಳಿಕೊಂಡಿದೆ.ಮಹಿಳಾ ಕೇಂದ್ರಿತ

“ಕ್ಷಮಿಸಿ. ನಮಗೆ ಇದು ಇಷ್ಟವಿಲ್ಲ. ಅರ್ಜಿಯನ್ನು ವಜಾಗೊಳಿಸಲಾಗಿದೆ. ಈ ಬಗ್ಗೆ ಹೋಗಿ ಸಂಸತ್ತಿಗೆ ತಿಳಿಸಿ” ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಸೋಮವಾರ ತನ್ನ ಆದೇಶದಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಕಾನೂನುಗಳು ಪುರುಷರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಅರ್ಜಿದಾರರಾದ ಸಿಂಗ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ. “ನಾನು ಸಾರ್ವಜನಿಕ ಮನೋಭಾವದ ವ್ಯಕ್ತಿಯಾಗಿದ್ದು, ಈ ಕಾನೂನುಗಳು ಅಮಾನ್ಯವಾಗಿವೆ. ದಯವಿಟ್ಟು ಸೂಕ್ತ ನಿರ್ದೇಶನಗಳು ಅಥವಾ ಆದೇಶಗಳನ್ನು ನೀಡಿ” ಎಂದು ಅವರು ಹೇಳಿದ್ದಾರೆ.

ಅರ್ಜಿಯಲ್ಲಿ ಯಾವುದೇ ಅರ್ಹತೆಯನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಸುಪ್ರಿಂಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.

ವರದಕ್ಷಿಣೆ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಲ್ಲಿ (ಐಪಿಸಿ) ಮಹಿಳೆಯರ ಮೇಲಿನ ಕ್ರೌರ್ಯದ ನಿಬಂಧನೆಗೆ ಸಂಬಂಧಿಸಿದ ಕಾನೂನುಗಳ ಸಿಂಧುತ್ವವನ್ನು ಪ್ರಶ್ನಿಸಿರುವ ಸಿಂಗ್, ಈ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸುಳ್ಳು ದೂರುಗಳನ್ನು ದಾಖಲಿಸುವ ಮಹಿಳೆಯರು ಮಾಡುವ ದೌರ್ಜನ್ಯಗಳ ವಿರುದ್ಧ ಪುರುಷರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮತ್ತು ಇತರ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು. ಮಹಿಳಾ ಕೇಂದ್ರಿತ

1961ರ ವರದಕ್ಷಿಣೆ ನಿಷೇಧ ಕಾಯ್ದೆಯು ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತದೆ ಮತ್ತು 2005ರ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆಯ ನಿಬಂಧನೆಗಳನ್ನು ಮಹಿಳಾ ಕೇಂದ್ರಿತ ಮತ್ತು ಪುರುಷರ ವಿರುದ್ಧ ತಾರತಮ್ಯ ಎಂದು ಅವರು ಸಲ್ಲಿಸಿರುವ ಪಿಐಎಲ್‌ನಲ್ಲಿ ಟೀಕಿದ್ದಾರೆ. ಸಿಂಗ್ ಅವರು ಭಾರತದ ಪ್ರಧಾನಿ, ಭಾರತ ಒಕ್ಕೂಟ (ಯುಒಐ) ಮತ್ತು ಗೃಹ ವ್ಯವಹಾರ ಸಚಿವಾಲಯ (ಎಂಎಚ್‌ಎ) ಅವರನ್ನು ತಮ್ಮ ಪಿಐಎಲ್‌ಗೆ ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

ಇದನ್ನೂಓದಿ:  ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...