Homeಮುಖಪುಟನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ನಾಳೆ ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಜನವರಿ 18 ಅನ್ನು (ಸೋಮವಾರ) ರೈತ ಮಹಿಳಾ ದಿನಾಚರಣೆ ಆಚರಿಸಲು ನಿರ್ಧರಿಸಿವೆ.

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬಿರುಸು ನೀಡುವ ಹಿನ್ನಲೆಯಲ್ಲಿ ಸೋಮವಾರ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.

ಕಳೆದ 54 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ನಾಳೆ ಹೋರಾಟ ನಡೆಸಲಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಭಾಗವಹಿಸುತ್ತಿದ್ದಾರೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, ’ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ’ ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ ’ನಾಳೆ ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ’ ಎಂದರು.


ಇದನ್ನೂ ಓದಿ; ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ...

0
"ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ...