Homeಮುಖಪುಟರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದು ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಇಂದು (ಜನವರಿ 18) ರೈತ ಮಹಿಳಾ ದಿನಾಚರಣೆ ಆಚರಿಸುತ್ತಿದ್ದು, ದೆಹಲಿಯ ಟಿಕ್ರಿ ಗಡಿಯಲ್ಲಿ ಅಂತರಾಷ್ಟ್ರೀಯ ಹಣಕಾಸು ನಿಧಿ (IMF), ವಿಶ್ವ ವ್ಯಾಪಾರ ಸಂಘಟನೆ (WTO) ಮತ್ತು ವಿಶ್ವ ಬ್ಯಾಂಕಿನ ಪ್ರತಿಕೃತಿಗಳನ್ನು ಸುಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಈ ಕುರಿತ ವೀಡಿಯೋವೊಂದನ್ನು ಕರ್ನಾಟಕದ AICCTU ಟ್ವೀಟ್ ಮಾಡಿದೆ.

 

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದೇ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ರೈತ ಹೋರಾಟವನ್ನು ಬೆಂಬಲಿಸಿ #WomenFarmersAgainstFarmLaws ಎನ್ನುವ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಇದನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ವುಮೆನ್ ಕಲೆಕ್ಟೀವ್ ಟ್ವೀಟ್ ಮಾಡಿ, “ಭಾರತದ ರೈತ ಮಹಿಳೆಯರೊಂದಿಗೆ ಒಗ್ಗಟ್ಟನಿಂದ ನಿಂತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಮಂದೀಪ್ ಜಸ್ಸಿ ಟ್ವೀಟ್ ಮಾಡಿ, “ಇಂದು ನಮ್ಮ ತಾಯಂದಿರು ಮತ್ತು ಸಹೋದರಿಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನ ಕೊಡುಗೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಸರ್ದಾರ್ ರಜಿಂದರ್ ಸಿಂಗ್ ಟ್ವೀಟ್ ಮಾಡಿ, “ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧದ ಈ ಯುದ್ಧದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಯನ್ನು ಸಂಭ್ರಮಿಸೋಣ. ಮಹಿಳಾ ಕಿಸಾನ್ ದಿವಸ್ ಆಚರಿಸೋಣ” ಎಂದು ಬರೆದುಕೊಂಡಿದ್ದಾರೆ.

“ದೆಹಲಿ ಗಡಿಯಲ್ಲಿರುವ 5 ಪ್ರತಿಭಟನಾ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಮತ್ತು ನೈರ್ಮಲ್ಯದ ಕೊರತೆಯು ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. #WomenFarmersAgainstFarmlaws #MahilaKisanDiwas #Tractor2Twitter” ಎಂದು ಟ್ವೀಟ್ ಮಾಡಲಾಗಿದೆ.

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ಇಂದು ಹೋರಾಟ ನಡೆಸುತ್ತಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು (ಎಐಎಂಎಸ್ಎಸ್) ಭಾಗವಹಿಸಿವೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, “ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ” ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ “ಇಂದು ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ” ಎಂದರು.

ರೈತ ಮಹಿಳಾ ದಿನದ ಕುರಿತು ದೆಹಲಿಯ ಸಿಂಘು ಗಡಿಯಲ್ಲಿನ ಹೋರಾಟಗಾರ್ತಿಯ ಮಾತುಗಳನ್ನು ಇಲ್ಲಿ ಕೇಳಿ…


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...