Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಶಾಸಕ ರೇವಣ್ಣ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ನನ್ನ ತಾಯಿಯನ್ನು ಅಪಹರಿಸಲಾಗಿದೆ ಎಂದು ಆಕೆಯ ಪುತ್ರ ರಾಜು ಮೇ.2ರಂದು ನೀಡಿದ ದೂರು ಆಧರಿಸಿ ಸತೀಶ್ ಬಾಬಣ್ಣನನ್ನು ಅಂದು ರಾತ್ರಿಯೇ ಮೈಸೂರಿನ ಕೆಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಕೆಆರ್‌ ನಗರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ಕಾಲ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮನೆ ಕೆಲಸದ ಮಹಿಳೆಯನ್ನು ಬಲವಂತವಾಗಿ ಲೈಂಗಿಕ ಕ್ರಿಯೆಗೆ ಒಳಪಡಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ಏಪ್ರಿಲ್ 29ರಂದು ಶಾಸಕ ಹೆಚ್‌.ಡಿ ರೇವಣ್ಣ ಅವರ ಸೂಚನೆ ಮೇರೆಗೆ ಸತೀಶ್ ಬಾಬಣ್ಣ ಮಹಿಳೆಯನ್ನು ಸುಳ್ಳು ಹೇಳಿ ರೇವಣ್ಣ ಮನೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮಹಿಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಮೇ 2ರಂದು ಮಹಿಳೆಯ ಮಗ ರಾಜು ಪೊಲೀಸರಿಗೆ ದೂರು ನೀಡಿ ತಾಯಿಯನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿದ್ದರು.

ರಾಜು ನೀಡಿದ ದೂರಿನಲ್ಲಿ ಏನಿತ್ತು?

ನನ್ನ ತಂದೆಗೆ ಮೂವರು ಮಕ್ಕಳು, ನನ್ನ ತಾಯಿ ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಎಚ್‌ಡಿ ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ನಮಗೆ ಪರಿಚಯಸ್ಥರಾಗದ್ದ ಸತೀಶ್ ಎಂಬವರು ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು  ಕರೆದುಕೊಂಡು ಬಂದಿದ್ದಾರೆ. ನನ್ನ ತಂದೆ ಮತ್ತು ತಾಯಿಗೆ ಪೊಲೀಸ್ ಬಂದರೆ ಏನೂ ಹೇಳಬೇಡಿ, ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 29ರಂದು 9ಗಂಟೆಗೆ ಮತ್ತೆ ಬಂದ ಸತೀಶ್, ನಿಮ್ಮ ತಾಯಿ ಪೊಲೀಸ್‌ನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಸತೀಶ್ ಅವರು ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ.1ರಂದು ನಮ್ಮ ತಾಯಿಯ ವಿಡಿಯೋ ಬಗ್ಗೆ ಸ್ನೇಹಿತರು ನನಗೆ ಮಾಹಿತಿ ನೀಡಿದ್ದಾರೆ. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ, ಆದರೆ ಹಲ್ಲೆ ಪ್ರಕರಣವೊಂದರಲ್ಲಿ ನಿಮ್ಮ ತಾಯಿ ಆರೋಪಿ ಎಂದು ಸುಳ್ಳು ಹೇಳಿದ್ದಾರೆ. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ, ನನ್ನ ತಾಯಿಯ ಜೀವಕ್ಕೆ ಅಪಾಯವಿದೆ, ಆದ್ದರಿಂದ ನನ್ನ ತಾಯಿಯನ್ನು ಪತ್ತೆ ಮಾಡಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ಹೆಚ್‌. ಡಿ ರೇವಣ್ಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...