Homeಕರ್ನಾಟಕವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

ವರ್ಷಕ್ಕೆ 6 ಮುಟ್ಟಿನ ರಜೆ ಜಾರಿ ಮಾಡಲಿರುವ ರಾಜ್ಯ ಸರ್ಕಾರ: ವರದಿ

- Advertisement -
- Advertisement -

ರಾಜ್ಯದ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಇರುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪರಿಚಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ. ಮಹಿಳೆಯರಿಗೆ ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಬೆನ್ನಿಗೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಈ ಬಗ್ಗೆ ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದ್ದು, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ರಜೆಯ ಒಪ್ಪಿಗೆಗಾಗಿ ಅದನ್ನು ಶಾಸಕಾಂಗದ ಮುಂದೆ ಇಡಲಾಗುವುದು” ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.ಮುಟ್ಟಿನ ರಜೆ

ಇದನ್ನೂ ಓದಿ:ಸಿಖ್ಖರ ವಿರುದ್ಧ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಛತ್ತೀಸ್‌ಗಢದಲ್ಲಿ ಮೂರು FIR 

ಸರ್ಕಾರವು ಈ ಕ್ರಮವನ್ನು ಮೊದಲು ಖಾಸಗಿ ವಲಯಕ್ಕೆ ಪರಿಚಯಿಸಲು ಯೋಜಿಸಿದ್ದು, ಅದನ್ನು ನೀತಿ ಮಾಡಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಮಾಡಲು ಯೋಜಿಸಿದೆ ಎಂದು ಅವರು ಹೇಳಿದ್ದಾರೆ. ಈ ವಿಷಯದ ಬಗ್ಗೆ ಒಂದು ನೀತಿ ಇರಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ.

ಈ ವರ್ಷದ ಜುಲೈನಲ್ಲಿ, ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆಯ ಬಗ್ಗೆ ಮಾದರಿ ನೀತಿಯನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವು ಕೇಳಿತ್ತು. ಉದ್ಯೋಗದಾತರು ಅಂತಹ ರಜೆಯನ್ನು ನೀಡುವುದನ್ನು ಕಡ್ಡಾಯಗೊಳಿಸುವುದು ಮಹಿಳೆಯರಿಗೆ ಅವರ ಉದ್ಯೋಗಗಳಲ್ಲಿ ಭಾಗವಹಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ಅದು ಹೇಳಿತ್ತು.

ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೂಡಾ ಕರ್ನಾಟಕದಲ್ಲಿ ಮುಟ್ಟಿನ ರಜೆಯನ್ನು ಪರಿಚಯಿಸುವ ಪ್ರಸ್ತಾಪದ ಬಗ್ಗೆ ಮಾಧ್ಯಮದ ಜೊತೆಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಅದನ್ನು ತರಲು ಯೋಜಿಸಿದ್ದರು. ಆದರೆ ಅದನ್ನು ಮೊದಲು ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪರಿಶೀಲಿಸುತ್ತದೆ. ಅದರ ನಂತರ, ಇದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಚಲಿಸುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, IT-BT, ಆರೋಗ್ಯ, ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆಗಳು ಮತ್ತು ಇತರ ಸಂಬಂಧಿತ ವಲಯಗಳ ಜೊತೆಗೆ ಕೂಡಾ ಸಲಹೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, “ನಮ್ಮ ಉದ್ಯೋಗಿಗಳಲ್ಲಿ ಮಹಿಳೆಯರು ಗಮನಾರ್ಹವಾಗಿ ಇದ್ದಾರೆ. ಅವರ ಅಗತ್ಯತೆಗಳು ಪುರುಷರಿಗಿಂತ ಭಿನ್ನವಾಗಿವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವೇದನಾಶೀಲವಾಗಿರುವ ಸರ್ಕಾರವಾಗಿ ಈ ಅಗತ್ಯಗಳಿಗೆ ನಾವು ಈ ಸಮಸ್ಯೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳುತ್ತಿದ್ದೇವೆ. ಮಹಿಳೆಯರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಬಿಹಾರ ಹೊರಹೊಮ್ಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ರಜೆಯನ್ನು ಮಹಿಳೆಯರಿಗೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ಸರ್ಕಾರಗಳು ಮಹಿಳೆಯರಿಗೆ ಮುಟ್ಟಿನ ರಜೆಯನ್ನು ನೀಡುತ್ತವೆ. ಜಾಗತಿಕವಾಗಿ, ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ.

ವಿಡಿಯೊ ನೊಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...