Homeಕರ್ನಾಟಕಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ; ಸಿದ್ದರಾಮಯ್ಯ

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ; ಸಿದ್ದರಾಮಯ್ಯ

- Advertisement -
- Advertisement -

ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, “ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು” ಎಂದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, “ಪ್ರಕರಣದಲ್ಲಿ ಯಾರು ತಪ್ಪಿತಸ್ಥರಿದ್ದಾರೋ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಹಲ್ಲೆಗೊಳಗಾದ ಮಹಿಳೆಯ ಮನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಆರೋಪಿಗಳು ಮಹಿಳೆ ಮೇಲೆ ಬಡಿಗೆಯಿಂದ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದರು. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಮಹಿಳೆಯನ್ನು ರಕ್ಷಿಸಿ ಜಿಲ್ಲಾಸ್ಪತ್ರಗೆ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈಗಾಗಲೇ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು 9 ಜನರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇನ್ನಿಬ್ಬರು ತಲೆ ಮರೆಸಿಕೊಂಡಿದ್ದು, ಅವರನ್ನು ಪೊಲೀಸರು ಬಂಧಿಸಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು “ಎಂದು ತಿಳಿಸಿದ್ದಾರೆ.

“ದುಂಡಪ್ಪ (ಅಶೋಕ್) (24) ಮತ್ತು ಪ್ರಿಯಾಂಕಾ (18), ಇಬ್ಬರೂ ನಾಯಕ್ ಸಮುದಾಯದವರು. ಪರಸ್ಪರ ಪ್ರೀತಿಸುತ್ತಿದ್ದರು. ಸೋಮವಾರ ಯುವತಿಯ ಮದುವೆ ನಡೆಯಬೇಕಿತ್ತು. ಆದರೆ, ಭಾನುವಾರ ರಾತ್ರಿ 12:30ರ ಸುಮಾರಿಗೆ ಅವರಿಬ್ಬರು ಪರಾರಿಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವತಿಯ ಸಂಬಂಧಿಕರು, ರಾತ್ರೋರಾತ್ರಿ ಯುವಕನ ಮನೆಗೆ ನುಗ್ಗಿ ಮನೆಯನ್ನು ಧ್ವಂಸ ಮಾಡಿದ್ದಾರೆ. ಯುವಕ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ. ನಮಗೆ ಈ ಬೆಳಿಗ್ಗೆ 4 ಗಂಟೆಯ ಹೊತ್ತಿಗೆ ಈ ಬಗ್ಗೆ ಮಾಹಿತಿ ಬಂದಿತ್ತು. ನಮ್ಮ ಪಿಎಸ್‌ಐ ತಕ್ಷಣ ಸ್ಥಳಕ್ಕೆ ತೆರಳಿ ಹಲ್ಲೆಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ಸಂಬಂಧ ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು 7 ಜನರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ತಲೆ ಮರೆಸಿಕೊಂಡಿದ್ದಾರೆ” ಎಂದು ಬೆಳಗಾವಿ ಕಮಿಷನರ್‌ ಸಿದ್ದರಾಮಪ್ಪ ಮಾಹಿತಿ ನೀಡಿದ್ದಾರೆ.

ಏನಿದು ಪ್ರಕರಣ?

ಬೆಳಗಾವಿ ಹೊರ ವಲಯದ ವಂಟಮೂರಿ ಗ್ರಾಮದ ನಾಯಕ್‌ ಸಮುದಾಯಕ್ಕೆ ಸೇರಿದ ದುಂಡಪ್ಪ (24) ಮತ್ತು ಪ್ರಿಯಾಂಕಾ (18)ಪರಸ್ಪರ ಪ್ರೀತಿಸುತಿದ್ದರು. ಭಾನುವಾರ ರಾತ್ರಿ ಇಬ್ಬರು ಮನೆ ಬಿಟ್ಟು ಓಡಿ ಹೋಗಿದ್ದಾರೆ. ಇದರಿಂದ ಕೋಪಗೊಂಡ ಯುವತಿಯ ಸಂಬಂಧಿಕರು, ಯುವಕನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಯುವಕನ ತಾಯಿ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : ‘ಕೈ ನಾಯಕರೊಬ್ಬರು ಬಿಜೆಪಿ ನಾಯಕರನ್ನು ಸಂಪರ್ಕಿಸಿದ್ದಾರೆ; ಮುಂದೆ ಏನಾದರೂ ಆಗಬಹುದು’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...