Homeಮುಖಪುಟಪಶ್ಚಿಮ ಬಂಗಾಳ | ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಆರೋಪ

ಪಶ್ಚಿಮ ಬಂಗಾಳ | ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ಮೇದಿನಿಪುರ ಕಾಲೇಜಿನ ವಿದ್ಯಾರ್ಥಿನಿಯರು ಮಾರ್ಚ್ 3 ರಂದು ತಮ್ಮ ಕ್ಯಾಂಪಸ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಸ್ಥಳೀಯ ಪೊಲೀಸರಿಂದ ಕಸ್ಟಡಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿಗಳು ಕಲ್ಕತ್ತಾ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಪೊಲೀಸರು ಅವರ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಮಾರ್ಚ್ 1ರಂದು ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ರಾಜ್ಯಾದ್ಯಂತದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ತರಗತಿ ಬಹಿಷ್ಕರಿಸಿ ಪ್ರತಿಭಟಿಸುವಂತೆ ಕರೆ ನೀಡಿತ್ತು.

ಅದರಂತೆ, ರಾಜ್ಯಾದ್ಯಂತ ಅನೇಕ ಕಾಲೇಜುಗಳಲ್ಲಿ ಪ್ರತಿಭಟನೆ ನಡೆದಿತ್ತು. ಅವುಗಳಲ್ಲಿ ಮೇದಿನಿಪುರ ಕಾಲೇಜಿನ ವಿದ್ಯಾರ್ಥಿನಿಯರ ಪ್ರತಿಭಟನೆಯೂ ಒಂದು. ರಾಜ್ಯಾದ್ಯಂತ ಹಲವೆಡೆಗಳಲ್ಲಿ ಪ್ರತಿಭಟನೆ ವೇಳೆ ರಾಜಕೀಯ ಘರ್ಷಣೆಗಳು ನಡೆದಿತ್ತು.

ಪ್ರತಿಭಟನೆ ಬಳಿಕ ಯಾವುದೇ ಸರಿಯಾದ ಕಾರಣ ನೀಡದೆ, ಸೂಕ್ತ ಪ್ರಕ್ರಿಯೆ ಇಲ್ಲದೆ ನಮ್ಮನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೇದಿನಿಪುರ ಕಾಲೇಜಿನ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡಲಾಗಿದೆ ಎಂದು ಸುಚರಿತ ದಾಸ್ ಎಂಬ ವಿದ್ಯಾರ್ಥಿನಿ ಪತ್ರಕರ್ತರಿಗೆ ತಿಳಿಸಿದ್ದಾರೆ.

“ಅವರು ನನ್ನನ್ನು ಉದ್ದೇಶಿಸಿ ಲೈಂಗಿಕ ಹೇಳಿಕೆಗಳನ್ನು ನೀಡಿದ್ದಾರೆ. ಮೌಖಿಕವಾಗಿ ನಿಂದಿಸಿದ್ದಾರೆ. ಪೊಲೀಸರು ಆಡಳಿತ ಪಕ್ಷದ ತೋಳುಗಳಾಗಿ ಮಾರ್ಪಟ್ಟಿದ್ದಾರೆ. ಅವರಿಗೆ ಸ್ವಾತಂತ್ರ್ಯದಿಂದ ಪಕ್ಷಪಾತವಿಲ್ಲದೆ ಕೆಲಸ ಮಾಡಲು ಆಗುತ್ತಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಸುಚರಿತ ದಾಸ್ ಮತ್ತು ಅವರ ಗೆಳೆಯರು ಪ್ರತಿಭಟನೆ ನಡೆಸುತ್ತಿದ್ದಾಗ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೂಂಡಾಗಳು ಹಲವಾರು ವಿದ್ಯಾರ್ಥಿನಿಯರಿಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಟಿಎಂಸಿ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳುವ ಬದಲು, ಸ್ಥಳೀಯ ಪೊಲೀಸರು ವಿದ್ಯಾರ್ಥಿನಿಯರನ್ನು ಹಿಂಸಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಹಲವು ಗಂಟೆಗಳ ಚಿತ್ರಹಿಂಸೆಯ ನಂತರ, ಮಾರ್ಚ್ 4ರಂದು ಬೆಳಗಿನ ಜಾವ 2:30ಕ್ಕೆ ಸುಚರಿತ ದಾಸ್ ಅವರು ಅಂತಿಮವಾಗಿ ಬಿಡುಗಡೆ ಮಾಡಲಾಯಿತು” ಎಂದು ಪಶ್ಚಿಮ ಬಂಗಾಳದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ದೇಬಂಜನ್ ಡೇ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಪಶ್ಚಿಮ ಮೇದಿನಿಪುರದ ಪೊಲೀಸ್ ವರಿಷ್ಠಾಧಿಕಾರಿ ದೃತಿಮಾನ್ ಸರ್ಕಾರ್ ಪೊಲೀಸರ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದಾರೆ. “ಎಡಪಂಥೀಯ ವಿದ್ಯಾರ್ಥಿ ಸಂಘಟನೆಯವರು ವಿಷಯವನ್ನು ದೊಡ್ಡದು ಮಾಡಲು ಪ್ರಯತ್ನಿಸುತ್ತಿದ್ದಾರೆ. ‘ನಮಗೆ ಒಳ್ಳೆಯ ವಿಷಯ ಸಿಕ್ಕಿದೆ. ಪೊಲೀಸರ ಮೇಲೆ ಒತ್ತಡ ಹೇರಿ ಇದನ್ನು ಕೋರ್ಟ್‌ಗೆ ಕೊಂಡೊಯ್ಯಬೇಕು’ ಎಂದು ಅದರ ಜಿಲ್ಲಾ ಕಾರ್ಯದರ್ಶಿ ಹೇಳಿರುವ ವೈರಲ್ ವಿಡಿಯೋ ನಮಗೆ ದೊರೆತಿದೆ” ಎಂದಿದ್ದಾರೆ.

ಮೇದಿನಿಪುರ ಕಾಲೇಜಿನ ವಿದ್ಯಾರ್ಥಿಗಳು ಕಸ್ಟಡಿ ಪೊಲೀಸ್ ಚಿತ್ರಹಿಂಸೆಯ ವಿರುದ್ಧ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರು ಶೀಘ್ರದಲ್ಲೇ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಆದರೆ, ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ.

ಈ ಹಿಂದೆ, ಮಾರ್ಚ್ 1ರ ಪ್ರತಿಭಟನೆಯ ಸಮಯದಲ್ಲಿ ‘ಪೊಲೀಸರ ನಿಷ್ಕ್ರಿಯತೆ’ ಮತ್ತು ‘ತಟಸ್ಥವಲ್ಲದ ನಿಲುವು’ ಬಗ್ಗೆ ಆರೋಪಿಸಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು ಸಲ್ಲಿಸಲಾಗಿತ್ತು.

550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...