Homeಕರ್ನಾಟಕಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

- Advertisement -
- Advertisement -

ಮೋದಿ ಸರ್ಕಾರದಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ಮಹಿಳೆಯರು. ಹತ್ರಾಸ್, ಉನ್ನಾವೋ, ಬಿಲ್ಕೀಸ್‌ ಬಾನೋ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಲ್ಲಿ ಇಂದಿಗೂ ನ್ಯಾಯ ಸಿಕ್ಕಿಲ್ಲ. ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ‘ಮಹಿಳೆಯರು ಇರುವುದೇ ಬೋಗಿಸಲಿಕ್ಕೆ’ ಎಂಬ ಮನುಸ್ಮೃತಿಯ ತತ್ವದ ಮೇಲೆ ಮೋದಿ ಸರ್ಕಾರವಿದೆ ಎಂದು ಮಹಿಳಾ ಸಂಘಟನೆಗಳ ನಾಯಕಿ ಮೀನಾಕ್ಷಿ ಬಾಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ ಜನರ ಮಹಾಧರಣಿಯಲ್ಲಿ ಮಾತನಾಡಿದ ಅವರು, “ಕೃಷಿಯಲ್ಲಿ ಮಹಿಳೆಯರ ದುಡಿಮೆ ಹೆಚ್ಚಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯ ಶ್ರಮವಿದೆ. ಕುಟುಂಬದ ನೊಗವನ್ನು ಮಹಿಳೆಯರು ಹೊತ್ತಿದ್ದಾರೆ” ಎಂದರು.

“ಮಹಿಳೆಯರು ನೋವನ್ನು ಅನುಭವಿಸಿಯೂ, ಜಗತ್ತನ್ನು ಸಂಬಾಳಿಸಿಕೊಂಡು ಬಂದಿದ್ದಾರೆ. ಪುರುಷರಿಗಿಂತ ಹೆಚ್ಚು ದುಡಿಯುವವರು ಮಹಿಳೆಯರು. ದುಡಿಯುವ ವರ್ಗದ ವಿಮೋಚನೆಯೊಂದಿಗೆ ಮಹಿಳೆಯರ ವಿಮೋಚನೆಯಾಗುತ್ತದೆ. ಮಹಿಳೆಯನ್ನು ಭೋಗದ ವಸ್ತುವೆಂದು ಮನುಸ್ಮೃತಿ ಹೇಳುತ್ತದೆ. ಮನುಸ್ಮೃತಿಯೇ ಮೋದಿ ಸರ್ಕಾರದ ಜೀವಾಳ” ಎಂದು ತಿಳಿಸಿದರು.

“ಹೆಣ್ಣು ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುವಾದ ಹೇಳುತ್ತದೆ. ಹೆಣ್ಣನ್ನು ಗಂಡು ರಕ್ಷಿಸುತ್ತಾನೆ ಎಂದು ಹೇಳುತ್ತದೆ. ಹಾಗಾದರೆ, ಮಹಿಳೆಗೆ ರಕ್ಷಣೆ ಎಲ್ಲಿದೆ. ಎಲ್ಲೆಡೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಮೋದಿ ಸರ್ಕಾರ ಅತ್ಯಾಚಾರಿಗಳನ್ನು ರಕ್ಷಿಸುತ್ತಿದೆ. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬ್ರಿಜ್ ಭೂಷಣ್‌ ಸಿಂಗ್‌ನನ್ನು ಸರ್ಕಾರ ರಕ್ಷಿಸುತ್ತಿದೆ” ಎಂದು ಕಿಡಿಕಾರಿದರು.

“ಮಹಿಳಾ ಮಿಸಲಾತಿ ಮಸೂದೆಯನ್ನು ಅಂಗೀಕರಿಸಿ, ಮಹಿಳೆಯರ ಮತ ಪಡೆಯಲು ಮೋದಿ ಸರ್ಕಾರ ಹವಣಿಸುತ್ತಿದೆ. ಆದರೆ, ಅವರ ಕಾಯ್ದೆ ಆಟಕ್ಕುಂಟು-ಲೆಕ್ಕಕ್ಕಿಲ್ಲ ಎಂಬಂತಿದೆ. ಕಾಯ್ದೆಯನ್ನು ಜಾರಿಗೆ ತರಲು ಕನಿಷ್ಠ 10 ವರ್ಷ ಸತಾಯಿಸುತ್ತಾರೆ. ಅವರ ಹುನ್ನಾರ ಏನೆಂಬುದು ನಮಗೆ ಗೊತ್ತಿಲ್ಲವೆಂದು ಸರ್ಕಾರ ಭಾವಿಸಿದೆ. ಮಹಿಳೆಯರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರ ಆಟ ದೇಶದ ಮಹಿಳೆಯರ ಮುಂದೆ ನಡೆಯುವುದಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಅರಿತುಕೊಳ್ಳಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಹಾಧರಣಿ| ಕೇಂದ್ರದ ಒತ್ತಡದಿಂದ ರಾಜ್ಯದಲ್ಲಿ ಕೃಷಿ ನೀತಿಗಳು ಜಾರಿಗೆ ಬಂದಿವೆ: ಯಶವಂತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...