Homeಮುಖಪುಟಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಬೀದಿಗಿಳಿದ ಮಹಿಳೆಯರು

- Advertisement -
“ಭೀತಿ ಮತ್ತು ದ್ವೇಷದ ವಿರುದ್ಧ ಮಹಿಳೆಯರು” ಎಂಬ ಘೋಷವಾಕ್ಯದಡಿ ಏಪ್ರಿಲ್ 04ರಂದು ದೇಶಾದ್ಯಂತ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ಐದು ವರ್ಷದಲ್ಲಿ ಮೋದಿ ಸರ್ಕಾರದ ತಂದ ಫಾಸಿವಾದ ಮತ್ತು ನವ ಉದಾರೀಕರಣದ ನೀತಿಗಳು ಮಹಿಳೆಯರು ಮತ್ತು ಅಂಚಿಗೆ ತಳಲ್ಪಟ್ಟವರ ಮೇಲೆ ಭಾರೀ ದುಷ್ಪರಿಣಾಮಗಳನ್ನು ಬೀರಿದ್ದು, ಈ ಬಾರಿ ನಮ್ಮ ಸಮುದಾಯಗಳ ಬದಲಾವಣೆಗಾಗಿ ಮತ ಚಲಾಯಿಸೋಣ ಎಂದು ಸಂಕಲ್ಪ ಮಾಡಿದ್ದಾರೆ.
ಮಹಿಳೆ ಮತ್ತು ಅಂಚಿಕೆ ದೂಡಲ್ಪಟ್ಟ ಸಮುದಾಯಗಳ ನಡಿಗೆ (ವುಮೆನ್ಸ್ ಮಾರ್ಚ್ – ವುಮೆನ್ ವೋಟ್ ಫಾರ್ ಚೇಂಜ್) ಹೆಸರಿನಲ್ಲಿ ಇಂದು ದೇಶಾದ್ಯಂತ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಕಾರ್ಯಕ್ರಮಗಳು ನಡೆದಿದ್ದು ಲಕ್ಷಾಂತರ ಮಹಿಳೆಯರು ಪಾಲ್ಗೊಂಡಿದ್ದಾರೆ. ಆ ಮೂಲಕ ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ನಿರ್ಣಯ ಕೈಗೊಂಡಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಅದರಲ್ಲೂ ಮುಸ್ಲಿಮರು, ದಲಿತರು ಮತ್ತು ಕ್ರೈಸ್ತರ ವಿರುದ್ಧ ಸುಳ್ಳು ಎನ್‍ಕೌಂಟರ್‍ಗಳು, ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೇ ಭಯ ಮತ್ತು ಅಸುರಕ್ಷತೆಯ ವಾತವಾರಣ ನಿರ್ಮಿಸಿರುವುದು, ಅದರೊಟ್ಟಿಗೆ ಟ್ರಾನ್ಸ್ ಜನರಿಗೆ ಪ್ರಜೆಯ ಸ್ಥಾನಮಾನ ನೀಡದೆ ಟ್ರಾನ್ಸ್ ಪೋಬಿಯಾ ಬೆಳೆಸುವ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಮಹಿಳಾ ಸಬಲೀಕರಣ ಮತ್ತು ಭೇಟಿ ಬಚಾವೋ ಎಂಬ ಖಾಲಿ ಮತ್ತು ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಭಾರತದ ಮಹಿಳೆಯರು ದನಿ ಎತ್ತಿ ಪ್ರಶ್ನೆಗಳನ್ನು ಕೇಳಬೇಕಾಗಿದೆ, ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರವು ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಘನತೆಯುಕ್ತ ಕೆಲಸವಾಗಲಿ, ಅಥವಾ ವೇತನವಾಗಲಿ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
ನಿರುದ್ಯೋಗವೂ 45 ವರ್ಷಗಳಲ್ಲಿ ಅತಿ ಹೆಚ್ಚಾಗಿದೆ ಏಕೆ? ರೈತರು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಏಕೆ? ಏಕಮುಖಿಯಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತಾ ಮೀಸಲಾತಿಯನ್ನು ತಳಸಮುದಾಯಗಳಿಂದ ಕಿತ್ತುಕೊಳ್ಳುತ್ತಿರುವುದು ಏಕೆ? ದೇವಸ್ಥಾನಗಳಿಗೆ ಮಹಿಳೆಯರಿಗೆ ಪ್ರವೇಶ ಏಕಿಲ್ಲ? ಕಥುವಾ ಮತ್ತು ಉನಾವ್ ಜಿಲ್ಲೆಗಳಲ್ಲಿ ನಡೆದ ಅತ್ಯಾಚಾರಗಳನ್ನು ಆಳುತ್ತಿರುವ ಬಿಜೆಪಿ ಸರ್ಕಾರವು ಏಕೆ ಸಮರ್ಥಿಸಿಕೊಂಡಿದೆ? ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನೀತಿಗಳನ್ನು ಜಾರಿ ಮಾಡುತ್ತಿರುವುದೇಕೆ? ಎಂಬ ಪ್ರಶ್ನೆಗಳನ್ನು ನಾವು ಕೇಳುತ್ತಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು, ಯೋಜನಾ ಕಾರ್ಮಿಕರುಗಳ ಮತ್ತು ಗುತ್ತಿಗೆ ಕಾರ್ಮಿಕರ ಖಾಯಮಾತಿಯಾಗಲಿ ಅಥವಾ ಕನಿಷ್ಠ ವೇತನವಾಗಲಿ ಸರ್ಕಾರಗಳು ಏಕೆ ಪೂರೈಸುತ್ತಿಲ್ಲ? ಮಲದ ಗುಂಡಿಗಳಲ್ಲಿ ಪೌರಕಾರ್ಮಿಕರು ಸತ್ತರು ಅವರಿಗೆ ಏನು ಮಾಡಿಲ್ಲ? ಮಧ್ಯ ನಿಷೇಧಕ್ಕಾಗಿ ಮಹಿಳೆಯರ ಪಾದಯಾತ್ರೆಗೆ ಏಕೆ ಸ್ಪಂದಿಸಲಿಲ್ಲ? ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶರನ್ನು ಹತ್ಯೆ ಮಾಡಿದ್ದಲ್ಲದೆ, ಟ್ರೋಲ್ ಮಾಡಿ ಚಾರಿತ್ರ್ಯವಧೆ ಮಾಡುತ್ತಿರುವ ಪಕ್ಷ ಯಾವುದು? ಮಹಿಳಾ ಹೋರಾಟಗಾರರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಅತ್ಯಾಚಾರ ಎಸೆಗುವಂತಹ ಟೀಕೆಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಯಾವ ಪಕ್ಷ ಪ್ರೋತ್ಸಾಹಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮನುವಾದಿ, ಕೋಮುವಾದಿ ಮತ್ತು ಜಾತಿವಾದಿ ಶಕ್ತಿಗಳನ್ನು ಸೋಲಿಸುವ ದಿಕ್ಕಿನಲ್ಲಿ ನಮ್ಮ ಮತವನ್ನು ಹಾಕಬೇಕಾಗಿರುವ ಸಂದರ್ಭವು ಈಗ ಬಂದಿರುತ್ತದೆ! ನಮ್ಮ ಮತವನ್ನು ಜಾತ್ಯಾತೀತತೆಯನ್ನು, ಸಮಾನತೆಯನ್ನು ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮತ ಚಲಾಯಿಸೋಣ. ನಮ್ಮ ಮಾನವೀಯತೆಯನ್ನು ಮರಳಿ ತರಲು ನಾವು ಮತ ಚಲಾಯಿಸೋಣ, ನೆನಪಿಡಿ ಇಂದು ಪಣಕ್ಕೆ ಒಡ್ಡಿರುವುದು ಪ್ರಜಾಪ್ರಭುತ್ವ ಮಾತ್ರವಲ್ಲ, ಮಾನವೀಯತೆಯೂ ಸಹ ಎಂದು ಘೋಷಿಸಿದ್ದಾರೆ.
ನೂರಾರು ಮಹಿಳಾ ಮತ್ತು ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ನಡಿಗೆ – ಬೆಂಗಳೂರು ಸಹ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ನೂರಾರು ಮಹಿಳೆಯರು, ಪ್ರಜ್ಞಾವಂತರು ಭಾಗವಹಿಸಿ ದನಿ ಎತ್ತಿದ್ದಾರೆ. ಚಿತ್ರನಿರ್ದೇಶಕಿ ಕವಿತಾ ಲಂಕೇಶ್, ಅಕೈ ಪದ್ಮಶಾಲಿ ಮುಂತಾದವರು ನೇತೃತ್ವ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...