Homeಕರ್ನಾಟಕಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಭಾಪತಿಗಳಿಗೆ ಮಹಿಳಾ ಆಯೋಗದಿಂದ...

ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಭಾಪತಿಗಳಿಗೆ ಮಹಿಳಾ ಆಯೋಗದಿಂದ ಪತ್ರ

- Advertisement -
- Advertisement -

ಬೆಳಗಾವಿಯ ಸುವರ್ಣ ವಿಧಾನಸೌಧದದಲ್ಲಿ ನಡೆದ ಚಳಿಗಾಲ ಅಧಿವೇಶನದ ವಿಧಾನಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿದ ಅವಾಚ್ಯ ಪದದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

“ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಬ್ದಾರಿ ಸ್ಥಾನದಲ್ಲಿ ಇರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಸಚಿವೆಯೊಬ್ಬರನ್ನು ಅತಿ ಕೀಳು ಮಟ್ಟದಲ್ಲಿ ಅಸಂವಿಧಾನಿಕ ಪದ ಬಳಕೆ ಮಾಡಿ ನಿಂದಿಸಿದ್ದಾರೆ. ಇದು ನಾಡಿನ ಇಡೀ ಹೆಣ್ಣು ಕುಲಕ್ಕೆ ಹಾಗೂ ಅವರ ಭಾವನೆಗಳಿಗೆ ಮಾಡಿದ ಅಪಮಾನ. ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಬೆಳಗಾವಿಯ ಸುವರ್ಣ ಸೌಧದ ಸದನದಲ್ಲೆ ಸಚಿವರಾದ ಲಕ್ಷ್ಮಿ ಹೆಬ್ಬಾಲ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಎಮ್‌ಎಲ್‌ಸಿ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡುವಂತೆ ಶುಕ್ರವಾರ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಬಂಧನದ ಪ್ರಕ್ರಿಯೆ ಪಾಲಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಹೇಳಿರುವ ಕೋರ್ಟ್, ಪ್ರಕರಣದ ವಿಚಾರಣೆಯಲ್ಲಿ ಮುಂದೂಡಿದೆ. ಸಚಿವೆ ಲಕ್ಷ್ಮಿ

ಷರತ್ತು ಬದ್ಧ ಬಿಡುಗಡೆಗೆ ಹೈಕೋರ್ಟ್ ಅದೇಶ ನೀಡಿದ್ದು, ಪ್ರಕರಣದಲ್ಲಿ ಸಹರಿಸುವಂತೆ ಹೇಳಿದೆ. ಅವರ ಬಂಧನಕ್ಕೂ ಮೊದಲು ನೋಟಿಸ್ ನೀಡಬಹುದಿತ್ತು ಎಂದು ಹೇಳಿರುವ ಕೋರ್ಟ್, ಅವರು ಈಗ ಎಲ್ಲಿದ್ದಾರೊ ಅಲ್ಲಿಂದಲೆ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದರು. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದರು. ಸಚಿವೆ ಲಕ್ಷ್ಮಿ

ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ ಎಂದು ವರದಿಯಾಗಿತ್ತು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರೆಲ್ಲರೂ ಸದನದಲ್ಲಿ ಕಿಡಿ ಕಾರಿದ್ದಾರೆ. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಸಭಾಪತಿ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.

ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದ್ದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ; ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...