Homeಮುಖಪುಟಅಂತರಾಷ್ಟ್ರೀಯ ಮಹಿಳಾ ದಿನ: ಕೃಷಿ ಕಾಯ್ದೆಗಳ ವಿರುದ್ಧ ಬೀದಿಗಿಳಿದ ಲಕ್ಷಾಂತರ ಮಹಿಳೆಯರು!

ಅಂತರಾಷ್ಟ್ರೀಯ ಮಹಿಳಾ ದಿನ: ಕೃಷಿ ಕಾಯ್ದೆಗಳ ವಿರುದ್ಧ ಬೀದಿಗಿಳಿದ ಲಕ್ಷಾಂತರ ಮಹಿಳೆಯರು!

- Advertisement -
- Advertisement -

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಲಕ್ಷಾಂತರ ಮಹಿಳೆಯರು ದೆಹಲಿಯ ಗಡಿಗಳಲ್ಲಿ ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.

ದೆಹಲಿಯ ಟಿಕ್ರಿ ಗಡಿಯಲ್ಲಿ ಜಮಾಯಿಸಿದ ಸಾವಿರಾರು ಮಹಿಳೆಯರು ವೇದಿಕೆಯನ್ನು ಆಕ್ರಮಿಸಿಕೊಂಡರು. ಇಂದು ಮಹಿಳಾ ದಿನಾಚರಣೆಯ ಅಂಗವಾಗಿ ವೇದಿಕೆಯನ್ನು ಸಂಪೂರ್ಣವಾಗಿ ಮಹಿಳೆಯರಿಗೆ ಮೀಸಲಿಡಲಾಗಿತ್ತು. ಕೆಲ ಪುರುಷರು ನಾವು ವೇದಿಕೆಯಲ್ಲಿ ಮಾತನಾಡುತ್ತೇವೆ ಎಂದು ಕೇಳಿದಾಗ ಅಲ್ಲಿದ್ದ ಪುರುಷರೇ ‘ಇಂದು ಮಹಿಳಾ ದಿನ.. ವೇದಿಕೆ ಪೂರ್ತಿ ಮಹಿಳೆಯರಿಗೆ ಮೀಸಲಾಗಿದೆ ಎಂದು ಹೇಳುತ್ತಿದ್ದುದ್ದು ಸಾಮಾನ್ಯವಾಗಿತ್ತು’ ಎಂದು ಪತ್ರಕರ್ತ ಸಂದೀಪ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಹರಿಯಾಣದ ಟಿಕ್ರಿ ಗಡಿ ಬಳಿಯ ಬಹದ್ದೂರ್‌ಗರ್‌ನ ಪಕೋರಾ ಚೌಕ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಮಹಿಳೆಯರು ಒಟ್ಟುಗೂಡಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ಉಗ್ರಾಣ್ ಆಯೋಜಿಸಿದ್ದ ಈ ರ್ಯಾಲಿಯಲ್ಲಿ ಪಂಜಾಬ್‌ ಮತ್ತು ಹರಿಯಾಣದ ಮಹಿಳೆಯರು ಸೇರಿ ಇಡೀ ಕಾರ್ಯಕ್ರಮವನ್ನು ಮುನ್ನಡೆಸುತ್ತಿದ್ದಾರೆ. ಎಲ್ಲಾ ಭಾಷಣಕಾರರು ಮಹಿಳೆಯರೇ ಆಗಿದ್ದು, ಸಾವಿರಾರು ಪುರುಷರು ಸಹ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

“ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‘ಬಹುದೊಡ್ಡ ಆದರೆ ಇದುವರೆಗೂ ಗುರುತಿಸಲಾಗದ’ ಕೃಷಿ ಸಮುದಾಯದ ಭಾಗವಾಗಿರುವ ಎಲ್ಲ ಧೈರ್ಯಶಾಲಿ ಮಹಿಳೆಯರಿಗೆ ಸಮರ್ಪಿಸಲಾಗುವುದು. ಇಂದು ವೇದಿಕೆಯನ್ನು ಮಹಿಳೆಯರಿಂದ ನಿರ್ವಹಿಸಲಾಗುವುದು ಮತ್ತು ಅವರ ಗೌರವಾರ್ಥವಾಗಿ ಸಿಂಘು ಗಡಿಯಲ್ಲಿ ಸಣ್ಣ ಮೆರವಣಿಗೆಯನ್ನು ಆಯೋಜಿಸಲಾಗುವುದು.
#WeSaluteWomenFarmers” ಎಂದು ಸಂಯುಕ್ತಾ ಕಿಸಾನ್ ಮೋರ್ಚಾ ಟ್ವೀಟ್ ಮಾಡಿದೆ.

ಟಿಕ್ರಿ ಗಡಿಯಲ್ಲಿ ನೂರಾರು ಮಹಿಳೆಯರು ಮೆರವಣಿಗೆ ನಡೆಸುವ ಮೂಲಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೆ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸಿದರು.


ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ; ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...