Homeಮುಖಪುಟಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

ಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

- Advertisement -
- Advertisement -

ಲಾಕ್ ಡೌನ್ ನಿಂದ ಕೆಲಸವಿಲ್ಲ, ಕೂಲಿ ಇಲ್ಲ, ಹಣವಿಲ್ಲ ಏನ್ ಮಾಡೋದು? ಕೇವಲ ಪಡಿತರ ದಾನ್ಯಗಳನ್ನು ನೀಡಿದರೆ ಸಾಕೇ? ಹಾಲು, ತರಕಾರಿಗೆ ಹಣ ಬೇಡವೇ, ನಮ್ಮ ಏರಿಯಾದ ಸೀಲ್‌ಡೌನ್‌ ತೆರವುಗೊಳಿಸಿ ಎಂದು ಪ್ರಶ್ನಿಸಿದ ನೂರಾರು ಮಹಿಳೆಯರು ಮನೆಗಳಿಂದ ಹೊರಬಂದು ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಪ್ರಸಂಗ ತುಮಕೂರಿನಲ್ಲಿ ನಡೆದಿದೆ.

ನಗರದ ಪೂರ್ ಹೌಸ್  ಕಾಲೋನಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಪಿಎಚ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಸೋಂಕಿತ ವ್ಯಕ್ತಿ ಇದೀಗ ಗುಣಮುಖನಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದು ಕಾಲೋನಿಯಲ್ಲಿ ಕ್ವಾರಂಟೈನ್ ನಲ್ಲಿಟ್ಟಿದ್ದ ಎಲ್ಲರಿಗೂ ನೆಗೆಟೀವ್ ಬಂದಿದೆ. ಹೀಗಾಗಿ ಲಾಕ್ ಡೌನ್ ತೆರವುಗೊಳಿಸಿ ಕೆಲಸ ಮಾಡಲು ಅವಕಾಶ ಕೊಡುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದರು.

10ನೇ ವಾರ್ಡ್ ಸೇರಿದಂತೆ ಎಲ್ಲೆಡೆಯೂ ಮೇ 1 ರಿಂದ ಹಾಲು ನಿಲ್ಲಿಸಲಾಗಿದೆ. ಕಾರ್ಪೋರೇಟರ್ ತಮ್ಮ ಸ್ವಂತ ಹಣದಲ್ಲೂ ಕೆಲ ದಿನಗಳು ಹಾಲು ವಿತರಣೆ ಮಾಡಿದರು. ಮನೆಯಲ್ಲಿ ಮಕ್ಕಳಿದ್ದಾರೆ. ಅವರಿಗೆ ಹಾಲು ಇಲ್ಲದೆ ಸುಮ್ಮನಿರಿಸಲು ಆಗುತ್ತಿಲ್ಲ. ಮೊದಲು ಗಂಡಸರಿಗೆ ಕೆಲಸ ಕೊಡಿ. ಅವರು ದುಡಿದು ತಂದು ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ. ಮನೆಯಲ್ಲಿ ತರಕಾರಿ, ಹಾಲಿಗೂ ದುಡ್ಡಿಲ್ಲ ಎಂದು ನೊಂದ ಮಹಿಳೆಯರು ದೂರಿದರು.

‌ಇದರಿಂದ ಕೆರಳಿದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನವೀನ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದಾರೆ. ನೀವು ಗುಂಪುಗೂಡಲು ಅವಕಾಶ ಕೊಟ್ಟಿದ್ಯಾರು? ಒಬ್ಬರಿಗೆ ಪಾಸಿಟಿವ್‌ ಬಂದರೂ ನೀವೆಲ್ಲರೂ ಜವಾಬ್ದಾರರಾಗುತ್ತೀರಿ. ನಿಮಗೇನು ಬೇಕು ನನಗೆ ಹೇಳಿ ಕೊಡಿಸುತ್ತೇನೆ ಎಂದು ಧಮಕಿ ಹಾಕಿದ್ದಾರೆ. ಆದರೆ ಮಹಿಳೆಯರು ಕೇಳುವ ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರ ಇರಲಿಲ್ಲ. ಆಗ ಪೊಲೀಸರು ನೀವು ದಿಢೀರ್ ಪ್ರತಿಭಟನೆ ಮಾಡುತ್ತಿದ್ದೀರಿ. ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಬೆದಿರಿಸುವ ತಂತ್ರ ಮಾಡಿದರು. ಆದರೂ ಮಹಿಳೆಯರು ತಮ್ಮ ನೋವನ್ನು ತೋಡಿಕೊಂಡರು. ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡರು. ಹಾಗಾಗಿ ಪೊಲೀಸರು ಕೂಡ ಮೌನಕ್ಕೆ ಶರಣಾದರು.

ಈ ಕುರಿತು ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್, “ತುಮಕೂರು ನಗರದೆಲ್ಲಡೆ ಲಾಕ್ ಡೌನ್ ಸಡಿಲಗೊಳಿಸಲಾಗಿದೆ. ಎಂ.ಜಿ.ರಸ್ತೆಯಲ್ಲಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೂ ಪಿ.ಎಚ್.ಕಾಲೋನಿಯನ್ನು ಸೀಲ್ ಡೌನ್ ಮಾಡಿ ತಾರತಮ್ಯ ಮಾಡಲಾಗುತ್ತಿದೆ. ಹಾಗಾಗಿ ಮಹಿಳೆಯರು ಪ್ರತಿಭಟಿಸುವ ಅನಿವಾರ್ಯತೆ ಎದುರಾಗಿದೆ” ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಪಿ ಎಚ್ ಕಾಲೋನಿಯಲ್ಲಿ ವಾಸಿಸುವ ಕುಟುಂಬಗಳಿಗೆ ರೆಡ್ ಕ್ರಾಸ್ ನಿಂದ ಬಂದಿರುವ ಬೇಳೆ ಮತ್ತು ಆಹಾರದ ಕಿಟ್ ಗಳನ್ನು ಕೊಡುತ್ತೇನೆಂದು ಖಚಿತ ಭರವಸೆ ನೀಡಿದ್ದರು. ಆದರೆ ಈಗ ಮೌನ ವಹಿಸಿದ್ದಾರೆ. ಬೇರೆಯವರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ, ಇಲ್ಲಿನ ಜನರನ್ನು ಕತ್ತಲೆಯಲ್ಲಿಡಲಾಗಿದೆ. ಈಗ ಪಿ.ಎಚ್. ಕಾಲೋನಿಯಲ್ಲಿ ಸೋಂಕಿತರು ಇಲ್ಲ. ಹೀಗಾಗಿ ಅವರಿಗೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ಕಳೆದ 14 ದಿನಗಳಿಂದ ತುಮಕೂರು ನಗರದಲ್ಲಿ ಒಂದೂ ಕೊರೊನ ಸೋಂಕಿತ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ದೈಹಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವ್ಯಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...