Homeಮುಖಪುಟಮಹಿಳಾ ಮೀಸಲಾತಿ ಬಿಲ್‌; ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ಮಹಿಳಾ ಮೀಸಲಾತಿ ಬಿಲ್‌; ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲು ಸಾಧ್ಯವಾಗುವ ‘ನಾರಿ ಶಕ್ತಿ ವಂದನ್ ಕಾಯಿದೆ-2023’ನ್ನು ತಕ್ಷಣವೇ ಜಾರಿಗೆ ತರುವಂತೆ ಕೋರಿ ಕಾಂಗ್ರೆಸ್ ಮುಖಂಡರೊಬ್ಬರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ.

ಈ ಕುರಿತು ಸಮಗ್ರ ಉತ್ತರವನ್ನು ಸಲ್ಲಿಸಲು ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ಬೇಕು ಎಂದು ಸರಕಾರದ ಪರ ವಕೀಲ ಕನು ಅಗರವಾಲ್ ಹೇಳಿದ ನಂತರ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಕೇಂದ್ರಕ್ಕೆ 2 ವಾರಗಳ ಕಾಲಾವಕಾಶ ನೀಡಿದೆ.

ಅರ್ಜಿದಾರ ಜಯಾ ಠಾಕೂರ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಸ್ ಸಿಂಗ್, ಸಾರ್ವತ್ರಿಕ ಚುನಾವಣೆಗೂ ಮುನ್ನ ಕಾನೂನು ಜಾರಿಯಾಗುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಯಾಲಯವು ಈ ಹಂತದಲ್ಲಿ ನಿರ್ದೇಶನವನ್ನು ರವಾನಿಸಲು ಸಾಧ್ಯವಿಲ್ಲ, ಕೇಂದ್ರದಿಂದ ಪ್ರತಿಕ್ರಿಯಿಸುವಂತೆ ಕೇಳಲಾಗಿದೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಷಯದ ಬಗ್ಗೆ ಅರ್ಜಿ ಸಲ್ಲಿಸಲು ಬಯಸುವುದಾಗಿ ಹೇಳಿದಾಗ, ಪೀಠವು ಅವರ ಮನವಿಯು ಹೊಸ ವಿಷಯವಾಗಿರುವುದರಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಇರುವ ಪೀಠದ ಎದುರು ಅರ್ಜಿ ಸಲ್ಲಿಸುವಂತೆ ಸೂಚಿಸಿದರು. ಈ ಕುರಿತ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.

ಜನವರಿ 16 ರಂದು ಕೇಂದ್ರದ ಪರವಾಗಿ ಹಾಜರಾಗಬೇಕಾದ ವಕೀಲರು ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜನವರಿ 22ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತ್ತು.

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲ್ಲಿ  ಅಂಗೀಕಾರಗೊಂಡಿತ್ತು. ಇದರ ಅನ್ವಯ ಮುಂದಿನ 15 ವರ್ಷಗಳವರೆಗೆ ಕಾಯ್ದೆ ಜಾರಿಯಲ್ಲಿರಲಿದೆ. ಇದನ್ನು ಅಗತ್ಯವಿದ್ದಲ್ಲಿ ಈ ಅವಧಿಯನ್ನು ವಿಸ್ತರಿಸುವ ಅಧಿಕಾರ ಸಂಸತ್ತಿಗೆ ಇದೆ. ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಹಿಳೆಯರಿಗೆ ಒಳ ಮೀಸಲಾತಿ ನೀಡುವ ಜೊತೆಗೆ ಹಿಂದುಳಿದ ವರ್ಗಗಳಿಗೂ ಮೀಸಲಾತಿ ವಿಸ್ತರಿಸುವಂತೆ ಒತ್ತಾಯಿಸಿದ್ದರು.

ನವೆಂಬರ್ 3, 2023 ರಂದು ಸುಪ್ರೀಂಕೋರ್ಟ್‌ ಮಹಿಳಾ ಮೀಸಲಾತಿ ಕಾನೂನು ಜನಗಣತಿಯ ನಂತರ ಜಾರಿಗೆ ಬರಲಿದೆ ಎಂದು ಹೇಳುವುದು ಬಹಳ ಕಷ್ಟದ ವಿಚಾರ ಎಂದು ಹೇಳಿತ್ತು. ಮಾಹಿತಿ ಪ್ರಕಾರ ಲೋಕಸಭೆಯಲ್ಲಿ ಒಟ್ಟು ಮಹಿಳಾ ಸಂಸದರ ಸಂಖ್ಯೆ ಶೇ 15ರಷ್ಟಿದ್ದಾರೆ. ಹಲವು ರಾಜ್ಯಗಳ ವಿಧಾನಸಭೆಯಲ್ಲಿ ಈ ಸಂಖ್ಯೆ ಶೇ 10ಕ್ಕಿಂತಲೂ ಕಡಿಮೆ ಎನ್ನುವುದನ್ನು ಅಂಕಿ-ಅಂಶಗಳು ತೋರಿಸುತ್ತದೆ.

ಮಸೂದೆಯು ಲೋಕಸಭೆ ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡುತ್ತದೆ, ಆದರೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ತುಗಳಲ್ಲಿ ಈ ಮೀಸಲಾತಿ ಇರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಮೀಸಲಾದ ಮೂರನೇ ಒಂದು ಭಾಗದಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ ಸೇರಿ ಹಲವು ಅಂಶಗಳನ್ನು ಬಿಲ್‌ ಹೊಂದಿದೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯದಲ್ಲಿ ಮಹಿಳೆಯರು ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಸರ್ಕಾರ ಹೇಳಿದೆ. ಪ್ರಸ್ತಾವಿತ ಮಸೂದೆಯು ಸುಮಾರು 27 ವರ್ಷಗಳಿಂದ ಬಾಕಿ ಉಳಿದಿತ್ತು.

ಇದನ್ನು ಓದಿ: ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...