Homeಕರ್ನಾಟಕಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

ಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

- Advertisement -
- Advertisement -

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲಾಗುವುದು” ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿರುವುದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟವಾಗುತ್ತದೆ ಎಂಬ ಲೆಕ್ಕಾಚಾರಗಳಿಗೆ ಅವಕಾಶ ಒದಗಿಸಿದೆ.

2013, 2018ರಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆದಿದ್ದವು. ಈಗ 5.21 ಕೋಟಿಗೂ ಹೆಚ್ಚು ಮತದಾರರಿದ್ದು, ಗಮನಾರ್ಹ ಸಂಖ್ಯೆಯ ಮತದಾರರು ಮೇ 10 ರಂದು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ರಂದು ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಕೊನೆಯ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮನವಿ ಮಾಡಿದ್ದ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್‌ನ ನಿಯೋಗ, “ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಕೋರಿದ್ದರು. ಆದರೆ ಪ್ರಸ್ತುತ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಹೊಂದಿರುವ ಬಿಜೆಪಿಗೆ ಈ ನಿರ್ಧಾರ ಹೆಚ್ಚು ಅನುಕೂಲ ಮಾಡಿಕೊಡುವುದಿಲ್ಲ ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಮೊದಲ ಹಂತದ ಚುನಾವಣೆಯಲ್ಲಿ ಋಣಾತ್ಮಕ ಬೆಳವಣಿಗೆಗಳು ಕಂಡುಬಂದರೆ, ಎರಡನೇ ಹಂತದಲ್ಲಿ ಆ ನಷ್ಟವನ್ನು ಸರಿದೂಗಿಸಲು ಅವಕಾಶ ದೊರಕುತ್ತಿತ್ತು ಎಂಬ ಅಂಶದತ್ತ ವರದಿ ಗಮನ ಹರಿಸಿದೆ.

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಉದಾಹರಣೆಯೊಂದನ್ನು ಉಲ್ಲೇಖಿಸುತ್ತಾ, “1985ರಲ್ಲಿ ಮೊದಲ ಹಂತದ ಮತದಾನ ಮುಗಿದ ಬಳಿಕ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೆ ಆಡಳಿತಾರೂಢ ಜನತಾ ಪಕ್ಷ ಹಿನ್ನಡೆ ಅನುಭವಿಸುತ್ತಿದೆ ಎಂಬ ಗುಪ್ತಚರ ಮಾಹಿತಿ ಸಿಕ್ಕಿತ್ತು. ಹೆಚ್ಚುವರಿ ಪ್ರಣಾಳಿಕೆಯಲ್ಲಿ ಪಕ್ಷವು ಪ್ರತಿ ಕೆಜಿಗೆ 2 ರೂ. ಅಕ್ಕಿ, ಪ್ರತಿ ಘಟಕಕ್ಕೆ 25 ರೂ.ಗಳಲ್ಲಿ ಸೀರೆ, ಧೋತಿ ಸೆಟ್‌ ನೀಡುವುದಾಗಿ ಘೋಷಿಸಿತ್ತು. ಅಂತಿಮವಾಗಿ ಪಕ್ಷ 139 ವಿಧಾನಸಭಾ ಸ್ಥಾನಗಳನ್ನು ಗೆದ್ದುಕೊಂಡಿತು” ಎಂದು ನೆನಪಿಸಿಕೊಂಡಿದ್ದಾರೆ.

ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಉಗ್ರಪ್ಪ, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಇದರಿಂದ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯು ದಕ್ಷಿಣ ಭಾರತದಲ್ಲಿ ಹಿಡಿತ ಸಾಧಿಸಲು ಕರ್ನಾಟಕ ರಾಜ್ಯವನ್ನು ಹೆಬ್ಬಾಗಿಲಿನಂತೆ ನೋಡುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿಯನ್ನು ತಗ್ಗಿಸಲು ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ನಂಬಿ ಕೂತಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸುವ ನಿರ್ಧಾರದಿಂದ ಪ್ರಧಾನಿಯವರ ಮೇಲೆ ಹೆಚ್ಚಿನ ಭಾರ ಹಾಕಲು ಕಷ್ಟವಾಗಬಹುದು.

“ಎರಡು ಹಂತಗಳಲ್ಲಿ ಮತದಾನ ನಡೆದಿದ್ದರೆ ಮೋದಿ ಅವರು ವ್ಯಾಪಕ ಪ್ರಚಾರ ನಡೆಸುತ್ತಿದ್ದರು. ಅದು ಹೆಚ್ಚಿನ ಪರಿಣಾಮಗಳಿಗೆ ಕಾರಣವಾಗುತ್ತಿತ್ತು” ಎಂದು ಮತ್ತೊಬ್ಬ ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಜೆಡಿಎಸ್‌ಗೂ ಅನುಕೂಲವಿಲ್ಲ

ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಷ್ಟೇ ಸ್ಟಾರ್‌ ಪ್ರಚಾರಕರು. ಹೀಗಾಗಿ ಒಂದೇ ಹಂತದ ಮತದಾನವು ಜೆಡಿಎಸ್‌ಗೂ ಪ್ರತಿಕೂಲವಾಗಬಹುದು. ಇದನ್ನು ಸರಿದೂಗಿಸುವ ಭಾಗವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕುಮಾರಸ್ವಾಮಿ ಅವರ ಆಹ್ವಾನದ ಮೇರೆಗೆ ಆಯ್ದ ಸ್ಥಾನಗಳಲ್ಲಿ ಜೆಡಿಎಸ್ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕೂಡ ಚುನಾವಣಾ ಆಯೋಗದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಮೇ 10 ರಂದು ಒಂದೇ ಹಂತದಲ್ಲಿ ನಡೆಸಲು ಭಾರತ ಚುನಾವಣಾ ಆಯೋಗ (ಇಸಿಐ) ಕೈಗೊಂಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಇದು ಅಕ್ರಮ ಹಣ ಮತ್ತು ಬಲ ಪ್ರಯೋಗಕ್ಕೆ ಕಡಿವಾಣ ಹಾಕಲು ಸಹಾಯ ಮಾಡುತ್ತದೆ. ನಿಷ್ಪಕ್ಷಪಾತ ಚುನಾವಣೆ ನಡೆಸುವಂತೆ ನಾನು ಆಯೋಗಕ್ಕೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...