Homeಮುಖಪುಟಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲ, ರಾಷ್ಟ್ರಪತಿಗೆ ಸಮಯ ನಿಗದಿಪಡಿಸಿದ ಬಗ್ಗೆ ಮಹತ್ವದ ವಿಚಾರಣೆ

- Advertisement -
- Advertisement -

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್ ಬುಧವಾರ (ಆ.20) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ  ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8ರ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಾಲಯಕ್ಕೆ ಮಾಡಿದ ಉಲ್ಲೇಖದ ಕುರಿತು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರ ಪೀಠವು ವಾದಗಳನ್ನು ಆಲಿಸುತ್ತಿದೆ.

ರಾಷ್ಟ್ರಪತಿಯ ಉಲ್ಲೇಖದ ಕುರಿತು ಜುಲೈ 22ರಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಂವಿಧಾನದ 200ನೇ ವಿಧಿಯ ಪ್ರಕಾರ ಮಸೂದೆಗಳಿಗೆ ಒಪ್ಪಿಗೆ ನೀಡುವ ವಿಷಯದಲ್ಲಿ ರಾಜ್ಯಪಾಲರಿಗೆ ನಾಲ್ಕು ಆಯ್ಕೆಗಳಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಮಸೂದೆಗಳಿಗೆ ಒಪ್ಪಿಗೆ ನೀಡುವುದು, ಒಪ್ಪಿಗೆಯನ್ನು ತಡೆಹಿಡಿಯುವುದು, ರಾಷ್ಟ್ರಪತಿಯ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವುದು ಅಥವಾ ಮಸೂದೆಯನ್ನು ವಿಧಾನಸಭೆಗೆ ಹಿಂತಿರುಗಿಸುವುದು ಈ ನಾಲ್ಕು ಆಯ್ಕೆಗಳು ಎಂದು ತುಷಾರ್ ಮೆಹ್ತಾ ಪೀಠದ ಮುಂದೆ ವಿವರಿಸಿದ್ದಾರೆ.

ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯುತ್ತಿರುವುದಾಗಿ ತಿಳಿಸಿದರೆ, ಮಸೂದೆ ಅಲ್ಲಿಗೆ ‘ಸತ್ತುಹೋಯಿತು’ ಎಂದರ್ಥ. ಒಪ್ಪಿಗೆಯನ್ನು ತಡೆಹಿಡಿಯಲಾಗಿದ್ದರೆ, ರಾಜ್ಯಪಾಲರು ಮಸೂದೆಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸಬೇಕಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನಿಮ್ಮ ಪ್ರಕಾರ, ತಡೆಹಿಡಿಯುವುದು ಎಂದರೆ ಮಸೂದೆ ಅಂಗೀಕಾರವಾಗುತ್ತದೆ ಎಂದರ್ಥವೇ?” ಎಂದು ಕೇಳಿದ್ದಾರೆ. “ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸದಿದ್ದರೆ ಅವರು ಅದನ್ನು ದೀರ್ಘ ಅವಧಿಯವರೆಗೆ ತಡೆ ಹಿಡಿಯಬಹುದು” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, “ಸಂವಿಧಾನವೇ ರಾಜ್ಯಪಾಲರಿಗೆ ಆ ವಿವೇಚನೆಯನ್ನು ನೀಡಿದೆ” ಎಂದಿದ್ದಾರೆ.

“ಹಾಗಾದರೆ ರಾಜ್ಯಪಾಲರಿಗೆ ಸಂಪೂರ್ಣ ಅಧಿಕಾರ ನೀಡದಂತೆ ಆಗುವುದಿಲ್ಲವೇ? ಎಂದು ಮರು ಪ್ರಶ್ನೆ ಹಾಕಿದ ಮುಖ್ಯ ನ್ಯಾಯಾಧೀಶರು, “ಬಹುಮತದಿಂದ ಆಯ್ಕೆಯಾದ ಸರ್ಕಾರ ರಾಜ್ಯಪಾಲರ ಇಚ್ಛೆ ಮತ್ತು ಕಲ್ಪನೆಗೆ ಒಳಪಡುವಂತಾಗುವುದಿಲ್ಲವೆ? ಎಂದು ಕೇಳಿದ್ದಾರೆ.

ರಾಜ್ಯಪಾಲರು ಯಾವುದೇ ಸಂದರ್ಭದಲ್ಲಿ ಮಸೂದೆಯ ಕುರಿತು ತಮ್ಮ ನಿರ್ಧಾರವನ್ನು ‘ಘೋಷಿಸಬೇಕು’ ಅಥವಾ ತಿಳಿಸಬೇಕು. ಕಾರಣವನ್ನು ನೀಡದೆ ಒಪ್ಪಿಗೆಯನ್ನು ತಡೆಹಿಡಿಯಬಾರದು ಎಂದ ಹೇಳಿದ ಪೀಠ. ಇಲ್ಲಿ ‘ತಡೆಹಿಡಿಯುವಿಕೆ’ ಪ್ರಮುಖ ಅಂಶವಾಗಿದೆ. ಅದು ತಾತ್ಕಾಲಿಕವೇ, ಶಾಶ್ವತವೇ ಎಂದು ನೋಡಬೇಕು ಎಂದಿದೆ.

ರಾಜ್ಯಪಾಲರು ಒಪ್ಪಿಗೆಯನ್ನು ಯಾವಾಗ ತಡೆಹಿಡಿಯುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸಾಲಿಸಿಟರ್ ಜನರಲ್, ಮಸೂದೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಅಥವಾ ಅಪೇಕ್ಷಣೀಯವಲ್ಲದ ನಿಬಂಧನೆಗಳನ್ನು ಹೊಂದಿರುವಾಗ ತಡೆಹಿಡಿಯಲಾಗುತ್ತದೆ ಎಂದಿದ್ದಾರೆ.

ತಡೆಹಿಡಿಯುವ ಅಧಿಕಾರವನ್ನು ವಿರಳವಾಗಿ ಬಳಸಬೇಕು ಮತ್ತು ಮೊದಲ ಹಂತದಲ್ಲಿ ಮಾತ್ರ ಬಳಸಬೇಕು ಏಕೆಂದರೆ ಅದು ಮಸೂದೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ತುಷಾರ್ ಮೆಹ್ತಾ ವಿವರಿಸಿದ್ಧಾರೆ.

ಮುಂದುವರಿದು, “ರಾಜ್ಯಪಾಲರು ಕೇವಲ ಒಬ್ಬರು ಪೋಸ್ಟ್‌ಮ್ಯಾನ್ ಅಲ್ಲ. ಅವರು ರಾಷ್ಟ್ರಪತಿಗಳಿಂದ ನೇಮಕಗೊಂಡ ಭಾರತ ಒಕ್ಕೂಟವನ್ನು ಪ್ರತಿನಿಧಿಸುತ್ತಾರೆ. ರಾಷ್ಟ್ರಪತಿಯನ್ನು ಇಡೀ ರಾಷ್ಟ್ರವು ಸಂಪೂರ್ಣ ಚುನಾವಣೆಯ ಮೂಲಕ ಆಯ್ಕೆ ಮಾಡುತ್ತದೆ. ಅದು ಪ್ರಜಾಪ್ರಭುತ್ವದ ಅಭಿವ್ಯಕ್ತಿಯ ಒಂದು ಮಾರ್ಗವಾಗಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿದಾಗಲೂ, ‘ರಾಜಕೀಯ ಪ್ರಕ್ರಿಯೆಯು’ ಅವರ ಬಾಗಿಲನ್ನು ತಟ್ಟಬಹುದು ಮತ್ತು ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ವಾಪಸ್ ಕಳುಹಿಸಬಹುದು” ಎಂದು ನ್ಯಾಯಾಲಯ ತಿಳಿಸಿದೆ.

“ನಾನು ಮಸೂದೆಯನ್ನು ತಡೆ ಹಿಡಿದಿದ್ದೇನೆ. ಇಲ್ಲಿಗೆ ಈ ವಿಷಯ ಮುಗಿಯಿತು” ಮೊದಲನೇ ಬಾರಿಗೆ ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಹೇಳಿದ್ದಾರೆ.

ಗುರುವಾರವೂ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಹಲವಾರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳದೆ, ನಂತರ ಅವುಗಳನ್ನು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಕ್ಕಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ರಾಜ್ಯಪಾಲರು ಮಸೂದೆಗಳನ್ನು ಸಮಂಜಸವಾದ ಸಮಯದೊಳಗೆ ನಿರ್ಧರಿಸಬೇಕು. ಸಂವಿಧಾನದ ವಿಧಿ 200ರ ಅಡಿಯಲ್ಲಿ ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅದೇ ರೀತಿ, ರಾಷ್ಟ್ರಪತಿಗಳು ಸಂವಿಧಾನದ ವಿಧಿ  201ರ ಅಡಿಯಲ್ಲಿ ಮೂರು ತಿಂಗಳೊಳಗೆ ಮಸೂದೆಗಳ ಕುರಿತು ನಿರ್ಧರಿಸಬೇಕು. ಅದಕ್ಕಿಂತ ಹೆಚ್ಚಿನ ವಿಳಂಬವನ್ನು ವಿವರಿಸಬೇಕು. ರಾಜ್ಯ ಸರ್ಕಾರಕ್ಕೆ ತಿಳಿಸಬೇಕು ಎಂದಿತ್ತು.

ಆದೇಶ ನೀಡುವ ವೇಳೆ ದೀರ್ಘಾವಧಿಯ ನಿಷ್ಕ್ರಿಯತೆಯ ಪ್ರಕರಣಗಳಲ್ಲಿ ‘ಪರಿಗಣಿತ ಒಪ್ಪಿಗೆ’ ಎಂಬ ಪರಿಕಲ್ಪನೆಯನ್ನು ಸುಪ್ರೀಂ ಕೋರ್ಟ್ ಪರಿಚಯಿಸಿತ್ತು. ಬಾಕಿ ಇದ್ದ ಮಸೂದೆಗಳು ಅನುಮೋದನೆಗೊಂಡಿವೆ ಎಂದಿತ್ತು.

ಮೇ ತಿಂಗಳಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 8ರ ತೀರ್ಪಿಗೆ ಸಂಬಂಧಿಸಿದಂತೆ ಸಂವಿಧಾನದ 143(1) ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ಕೆಲವು ಉಲ್ಲೇಖಗಳನ್ನು ಮಾಡಿದ್ದರು.

143(1) ನೇ ವಿಧಿಯು ರಾಷ್ಟ್ರಪತಿಗಳು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ನ್ಯಾಯಾಲಯದ ಅಭಿಪ್ರಾಯ ಮತ್ತು ಸಲಹೆಯನ್ನು ಕೇಳಲು ಅವಕಾಶ ನೀಡುತ್ತದೆ.

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...