Homeಕರ್ನಾಟಕಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಸಿದ್ಧ ಇದ್ದೀರಾ?: ಎಚ್‌ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಸಿದ್ಧ ಇದ್ದೀರಾ?: ಎಚ್‌ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕುಮಾರಸ್ವಾಮಿಯವರೇ, ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಹೆಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ? ಎಂದು ಕೇಳಿದ್ದಾರೆ.

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ-ಟೀಮ್’ ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ ಎಂದಿದ್ದಾರೆ.

ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ. ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು – ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ನಡುವೆ ವಾಕ್ಸಮರ ನಡೆಯುತ್ತಿದೆ. ಆಪರೇಷನ್‌ ಕಮಲಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಅರ್ಥದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...