Homeಮುಖಪುಟಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಿಂದಾಗಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ. ಬಿಜೆಪಿ ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುತ್ತಿದೆ ಎಂದಿರುವ ಸಿಎಂ ಮಮತಾ ಬ್ಯಾನರ್ಜಿ, ನಾನು ಭಾರತವನ್ನು ತಾಲಿಬಾನ್ ಅಥವಾ ಪಾಕಿಸ್ತಾನವಾಗಲು ಬಿಡುವುದಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಸಿಎಂ ಮಮತಾ ಬ್ಯಾನರ್ಜಿ ಮಸೀದಿಗೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದ್ದ ಬಿಜೆಪಿ, ಮಮತಾ ಬ್ಯಾನರ್ಜಿ ಮಸೀದಿಗೆ ಧಿಡೀರ್‌ ಭೇಟಿ ನೀಡಿ, ಎಲ್ಲರನ್ನೂ ಓಲೈಸುವ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಡಿಯೊ ತುಣುಕನ್ನು ವೈರಲ್ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಾನು ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದಾಗ ಬಿಜೆಪಿಯವರಿಗೆ ಸಮಸ್ಯೆ ಉಂಟಾಗುತ್ತದೆ. ವಿಧಾನಸಭಾ ಚುನಾವಣೆಗೆ ಮುನ್ನವೂ ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ಪಿತೂರಿ ನಡೆಸಲಾಯಿತು. ಟಿಎಂಸಿ ಗೆದ್ದರೆ ಮಿನಿ ಪಾಕಿಸ್ತಾನ ಆಗುತ್ತದೆ ಎಂದರು. ಈಗ  ಮತ್ತೆ ಭವಾನಿಪುರದಲ್ಲಿ ಧರ್ಮದ ಬಣ್ಣ ಬಳಿಯುತ್ತಿದ್ದಾರೆ. ಆದರೆ, ನಾನು ಭಾರತವನ್ನು ತಾಲಿಬಾನ್ ಅಥವಾ ಪಾಕಿಸ್ತಾನವಾಗಲು ಬಿಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಭವಾನಿಪುರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗದ ನೋಟಿಸ್

ಭವಾನಿಪುರದ ಬಂಗಾಳಿ ಸಮುದಾಯದವರಲ್ಲದ ಮತದಾರರು, ಒಟ್ಟು 40% ರಷ್ಟಿದ್ದಾರೆ. ಇವರ ಮತಗಳನ್ನು ಪಡೆಯಲು ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪ್ರಯತ್ನಿಸುತ್ತಿವೆ.

ಸಿಖ್ ಮತದಾರರ ಬೆಂಬಲವನ್ನು ಪಡೆಯಲು ಮಮತಾ ಬ್ಯಾನರ್ಜಿ ಬುಧವಾರ ಭವಾನಿಪುರದ ಗುರುದ್ವಾರಕ್ಕೆ ಭೇಟಿ ನೀಡಿದ್ದರು. ಜೊತೆಗೆ ಗುರುವಾರ ಭವಾನಿಪುರದ ಲೇಡೀಸ್ ಪಾರ್ಕ್‌ನಲ್ಲಿ ಗುಜರಾತಿ ಮತದಾರರೊಂದಿಗೆ ಸಂವಾದ ನಡೆಸಿದ್ದರು.

 

ಇತ್ತ, ಮಾದರಿ ನೀತಿ ಸಂಹಿತೆ ಮತ್ತು ಕೊರೊನಾ ನಿಯಮಾವಳಿಗಳ ಉಲ್ಲಂಘನೆಗಾಗಿ ಚುನಾವಣಾ ಆಯೋಗದಿಮದ ನೋಟಿಸ್ ಪಡೆದಿರುವ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್, “ಗುರುದ್ವಾರಕ್ಕೆ ಭೇಟಿ ನೀಡಿದಾಗ ಮಮತಾ ಬ್ಯಾನರ್ಜಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಮತ್ತು ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕೇಂದ್ರದಿಂದ ಕಿತ್ತೊಗೆಯುವಂತೆ ವಿಪಕ್ಷಗಳನ್ನು  ಒತ್ತಾಯಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ನಾವು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು  ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...