Homeಮುಖಪುಟರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

ರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

- Advertisement -
- Advertisement -

ಸರ್ಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಉಪವಾಸ ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಪುನರುಚ್ಚರಿಸಿದ್ದಾರೆ. ತಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹದ 64ನೇ ದಿನವಾದ ಇಂದು (ಜ.28) ಅವರು ಈ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 12ರಂದು ರೈತರ ಪ್ರತಿಭಟನೆ 2.0ದ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ದೇಶದ ವಿವಿಧ ಭಾಗಗಳಿಂದ ರೈತರು ಖಾನೌರಿ ಗಡಿಗೆ (ಪಂಜಾಬ್ ಮತ್ತು ಹರಿಯಾಣ ಗಡಿ) ಬರುವಂತೆ ದಲ್ಲೆವಾಲ್ ಆಹ್ವಾನಿಸಿದ್ದಾರೆ.

ಜನವರಿ 4ರಂದು ನಡೆದ ಕಿಸಾನ್ ಮಹಾಪಂಚಾಯತ್ ನಂತರ ಮೊದಲ ಬಾರಿಗೆ ಇಂದು ಖಾನೌರಿ ಗಡಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, “ನಮ್ಮ ಪ್ರತಿಭಟನೆಯ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಫೆಬ್ರವರಿ 12ರಂದು ದೇಶದ ವಿವಿಧ ಭಾಗಗಳಿಂದ ರೈತ ಸಮುದಾಯವು ಖಾನೌರಿ ಗಡಿಗೆ ಆಗಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಬೃಹತ್ ಸಭೆಯು ನನಗೆ ಪುನರುಜ್ಜೀವನ ನೀಡಲಿದೆ ಮತ್ತು ಮಾತುಕತೆಗಾಗಿ ಕೇಂದ್ರ ಸರ್ಕಾರದ ನಿಯೋಗದೊಂದಿಗೆ ಸಭೆಯಲ್ಲಿ ಭೌತಿಕವಾಗಿ ಉಪಸ್ಥಿತರಿರುವಂತೆ ನನಗೆ ಶಕ್ತಿಯನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಫೆಬ್ರವರಿ 14ರಂದು ಸರ್ಕಾರ ಮಾತುಕತೆಗೆ ಮುಂದಾದ ನಂತರ ವೈದ್ಯಕೀಯ ನೆರವು ಪಡೆಯಲು ಮಾತ್ರ ಒಪ್ಪಿಕೊಂಡಿದ್ದೇನೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಪ್ರಸ್ತುತ ನನ್ನ ಆರೋಗ್ಯ ಸ್ಥಿತಿಯಿಂದಾಗಿ ಚಂಡೀಗಢಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲು ಸಾಧ್ಯವಾಗುತ್ತಿಲ್ಲ. ನಾನು ಸಾಕಷ್ಟು ಫಿಟ್ ಆಗಿದ್ದರೆ, ಚಂಡೀಗಢದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುತ್ತೇನೆ. ಇಲ್ಲದಿದ್ದರೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಮಿತಿಯ ಮುಂದೆ ಹಾಜರಾಗುತ್ತೇನೆ” ಎಂದಿದ್ದಾರೆ.

ಮೋಗಾದಲ್ಲಿ ನಡೆದ ರೈತ ಮಹಾಪಂಚಾಯತ್ ನಂತರ ಎಸ್‌ಕೆಎಂ ನಾಯಕರು ಒಗ್ಗಟ್ಟಿನ ನಿರ್ಣಯದೊಂದಿಗೆ ಖಾನೌರಿಗೆ ಬಂದಿದ್ದಾರೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಐಕ್ಯರಂಗ ರಚನೆಗೆ ಇಷ್ಟು ಸಮಯ ಏಕೆ ತೆಗೆದುಕೊಳ್ಳುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಹಲವಾರು ಸುತ್ತಿನ ಸಭೆಗಳು ನಡೆಯುತ್ತಿವೆ. ನಾನು ಸಭೆಗಳಿಗೆ ಹೋಗಿಲ್ಲ, ಆದ್ದರಿಂದ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ. ಸರ್ಕಾರದ ನಿಯೋಗವು ಎಸ್‌ಕೆಎಂ ನಾಯಕರೊಂದಿಗೆ ಮಾತುಕತೆ ನಡೆಸಿದೆ. ಆದರೆ, ಅಲ್ಲಿ ಏನು ನಡೆಯುತ್ತಿದೆ ಎಂದು ನನಗೆ ಹೇಳಲಿಲ್ಲ. ಈ ಬಹು ಸಭೆಗಳು ಒಳ್ಳೆಯದಲ್ಲ. ನಾವು ಒಟ್ಟಾಗಿ ಹೋರಾಡಬೇಕು ಎಂಬುವುದು ಸಾರ್ವಜನಿಕರ ಭಾವನೆಯಾಗಿದೆ” ಎಂದು ಇದೇ ವೇಳೆ ರೈತ ನಾಯಕರಿಗೆ ದಲ್ಲೆವಾಲ್ ಕಿವಿಮಾತು ಹೇಳಿದ್ದಾರೆ.

ಇಲ್ಲಿಯವರೆಗೆ ಜನವರಿ 13 ಮತ್ತು ಜನವರಿ 18 ರಂದು ಎಸ್‌ಕೆಎಂ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಡುವೆ ಎರಡು ಸುತ್ತಿನ ಸಭೆಗಳು ನಡೆದಿವೆ. ಇದರಲ್ಲಿ ಎಸ್‌ಕೆಎಂ ನಾಯಕರಾದ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಡಾ. ದರ್ಶನ್ ಪಾಲ್ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರಾದ ಸರ್ವಾನ್ ಸಿಂಗ್ ಪಂಧೇರ್, ಮಂಜಿತ್ ರೈ, ಕಾಕಾ ಸಿಂಗ್ ಕೊಟ್ರಾ ಮತ್ತು ಅಭಿಮನ್ಯು ಕೊಹರ್ ಭಾಗವಹಿಸಿದ್ದರು.

ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...