Homeಕರ್ನಾಟಕರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

- Advertisement -
- Advertisement -

ಬೆವರು ಹಾಗೂ ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ರಾಜ್ಯದಲ್ಲಿ ಲಕ್ಷಾಂತರ ಸ೦ಖ್ಯೆಯಲ್ಲಿರುವ ವಲಸಿಗ ಕಾರ್ಮಿಕರು ಸ್ವ೦ತ ಊರುಗಳಿಗೆ ಹೋಗಲು ಪರದಾಡುತ್ತಿರುವ ದೃಶ್ಯವನ್ನು ನಿತ್ಯ ನೋಡುತ್ತಿದ್ದೇವೆ. ಅದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಕಾರ್ಮಿಕರೂ ಇಲ್ಲಿಗೆ ಬರಲು ಕಷ್ಟಪಡುತ್ತಿದ್ದಾರೆ. ಸ್ವಂತ ಊರುಗಳನ್ನು ತಲುಪಲು ಸರ್ಕಾರ ಎಲ್ಲ ಕಾರ್ಮಿಕರಿಗೆ ಕೂಡಲೇ ವ್ಯವಸ್ಥೆ ಮಾಡಬೇಕು” ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಬೆ೦ಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಲಾಕ್‌ಡೌನ್ ಜಾರಿಯಾದ ಬಳಿಕ ತಮ್ಮ ಊರುಗಳಿಗೆ ಹೋಗಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಅವರನ್ನು ಮಾನವೀಯವಾಗಿ ನಡೆಸಿಕೊಳ್ಳುತ್ತಿಲ್ಲ ಎಂದಿರುವ ಅವರು, “ಊರುಗಳಿಗೆ ಹೋಗಲು ಆಗದೆ, ಅನ್ನ, ಆಹಾರ ಇಲ್ಲದೆ ಅವರು ಹೆಣಗಾಡುತ್ತಾ, ನಡೆದು ಹೋಗುವ ಮಾರ್ಗದಲ್ಲಿ ನಡೆದು ಸುಸ್ತಾಗಿ ರೈಲು ಹಳಿಗಳ ಮೇಲೆ ಮಲಗಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆ ಹಸಿವಿನಿ೦ದ ಸತ್ತಿರುವ ಉದಾಹರಣೆಗಳೂ ನಮ್ಮ ಕಣ್ಣ ಮುಂದಿದೆ” ಎಂದು ಹೇಳಿದ್ದಾರೆ.

ಸಿದ್ದಾರಾಮಯ್ಯ ಪತ್ರದಲ್ಲಿ “ಇಷ್ಟೆಲ್ಲವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನಸ್ಸು ಕರಗಿದ೦ತೆ ಕಾಣುತ್ತಿಲ್ಲ. ಕೂಡಲೇ ರಾಜ್ಯದಲ್ಲಿರುವ, ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಹಾಗೂ ಹೊರ ರಾಜ್ಯಗಳಲ್ಲಿರುವವರನ್ನು ಇಲ್ಲಿಗೆ ಕರೆತರಲು ರೈಲು ವ್ಯವಸ್ಥೆ ಮಾಡಬೇಕು. ಪ್ರಯಾಣ ವೆಚ್ಚದಲ್ಲಿ ಶೇ. 85 ರಷ್ಟನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು.” ಎಂದು ಆಗ್ರಹಿಸಿದ್ದಾರೆ.

“ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೆ ನಿಲ್ದಾಣಕ್ಕೆ ಹೋಗುವಂತೆ ಸೂಚಿಸಲಾಗುತ್ತಿದೆ. ಆದರೆ ಅಲ್ಲಿಗೆ ಹೋಗಲು ಯಾವುದೇ ಸೌಕರ್ಯ ಇಲ್ಲದ ಕಾರಣ ಅವರಿಗೆ ಬಸ್‌ ವ್ಯವಸ್ಥೆ ಮಾಡಬೇಕು. ಕಾರ್ಮಿಕರು ಸುರಕ್ಷಿತವಾಗಿ ಊರು ತಲುಪುವವರೆಗೆ ಊಟದ ಸೌಲಭ್ಯವನ್ನು ಒದಗಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ರಾಜ್ಯದಿ೦ದ ಹೊರ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಿಸಲಿ. ಕಾರ್ಮಿಕರನ್ನು ಸೇವಾಸಿಂಧುಗೆ ಎನ್‌ರೋಲ್‌ ಮಾಡಿಸಲು ಪಾಲಿಕೆಯ ವಾರ್ಡ್‌ ಕಚೇರಿ, ಪೊಲೀಸ್‌ ಠಾಣೆಗಳಲ್ಲಿ ಕೌಂಟರ್‌ಗಳನ್ನು ತೆರೆಯಲಿ. ಯಾವ ರಾಜ್ಯಕ್ಕೆ ಹೋಗಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ವ್ಯವಸ್ಥೆಯಾಗಲಿ” ಎಂದು ಹೇಳಿದ್ದಾರೆ.

“ಈ ಎಲ್ಲವನ್ನೂ ಸಾಧ್ಯವಾಗಿಸಲು ಉಸ್ತುವಾರಿಗಳು, ಯಂತ್ರಾ೦ಗ ಮತ್ತು ಮಾರ್ಗಸೂಚಿಯನ್ನು ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಬೇಕು. ಇನ್ನು ಮುಂದೆ ಒಬ್ಬ ಕಾರ್ಮಿಕನೂ ಸಾವು ನೋವಿಗೆ ತುತ್ತಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಬೆವರು, ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು. ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು” ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾರ್ಮಿಕರ ಬಗ್ಗೆ ಸಿದ್ದರಾಮಯ್ಯನವರಿಗೆ ಇರುವಶ್ಟು ಕಾಳಜಿ ಆಡಳಿತಾರೂಢರಿಗೆ ಇಲ್ಲ. ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...