Homeಮುಖಪುಟಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ...

ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ!

- Advertisement -
- Advertisement -

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಒಂದೇ ದರ ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಅವರಿಗೆ ನೆರವಾಗಲು ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ಹೌದು ಇದು ನಿಜ. ಕಾಂಗ್ರೆಸ್‌ ಪಕ್ಷದಿಂದ ಕೆಎಸ್‌ಆರ್‌ಟಿಸಿ ಎಂಡಿಗೆ ಒಂದು ಕೋಟಿ ರೂಗಳ ಚೆಕ್‌ ಹಸ್ತಾಂತರವಾಗುತ್ತಿದ್ದಂತೆಯೇ ಅತ್ತ ಮುಖ್ಯಮಂತ್ರಿ ಯಡಿಯೂರಪ್ಪನವರು “ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 (ಮಂಗಳವಾರ) ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್‌.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ” ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಕಾರ್ಮಿಕರಿಂದ ಮೂರು ಪಟ್ಟು ಹಣ ವಸೂಲಿಗ ಮುಂದಾಗಿದ್ದ ಸರ್ಕಾರ ಕೂಡಲೇ ಉಚಿತ ಎಂದು ಘೋಷಿಸುವಂತಾಗಿದೆ. ದುಪ್ಪಟ್ಟು ಬಸ್‌ ದರಕ್ಕೆ ಪ್ರಜ್ಞಾವಂತರ, ಕಾರ್ಮಿಕರ, ವಿರೋಧ ಪಕ್ಷಗಳ ತೀವ್ರ ಒತ್ತಡ ಬಂದ ನಂತರ ಅದರಲ್ಲೂ ಕಾಂಗ್ರೆಸ್‌ ಪಕ್ಷ ಒಂದು ಕೋಟಿ ರೂ ನೆರವು ನೀಡಿದ ನಂತರ ಸರ್ಕಾರ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದೆ.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯು ಕೆಎಸ್ಆರ್ಟಿಸಿ ಎಂಡಿಗೆ 1 ಕೋಟಿ ರುಪಾಯಿ ಚೆಕ್ ನೀಡಿದೆ.

Posted by DK Shivakumar on Saturday, May 2, 2020

ಹಲವು ರಾಜ್ಯಗಳು ಬೇರೆ ಬೇರೆ ರಾಜ್ಯಗಳಲ್ಲಿ ಸಿಕ್ಕಿಕೊಂಡಿರುವ ತಮ್ಮ ಕಾರ್ಮಿಕರನ್ನು ಉಚಿತವಾಗಿ ಆಹಾರ ಸೌಲಭ್ಯ ನೀಡಿ ಕರೆಸಿಕೊಳ್ಳುತ್ತಿವೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ಜಿಲ್ಲೆಯಿಂದ ಜಿಲ್ಲೆಗೆ ಮೂರು ಪಟ್ಟು ಹಣ ನಿಗಧಿ ಮಾಡಿ ರಾಜ್ಯ ಸರ್ಕಾರ ಟೀಕೆಗೊಳಗಾಗಿತ್ತು. ಮೊದಲೇ ಈ ಉಚಿತ ಯೋಜನೆ ಘೋಷಿಸಿದ್ದರೆ ಕಾರ್ಮಿಕರು ಸಂತಸದಿಂದ ತಮ್ಮ ಊರುಗಳನ್ನು ಸೇರುತ್ತಿದ್ದರು. ಈಗ ಈಗಾಗಲೇ ಮೂರು ಪಟ್ಟು ಹಣಕೊಟ್ಟು ಕಣ್ಣೀರಾಕುತ್ತ ಊರೂ ಸೇರಿರುವವರು ಸಹ ಈ ಸರ್ಕಾರವನ್ನು ದೂಷಿಸಲಿದ್ದಾರೆ.

ಏನೇ ಆಗಲಿ ಈಗಲಾದರೂ ಎಲ್ಲಾ ಕಾರ್ಮಿಕರು ತಮ್ಮ ತಮ್ಮ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಬೇಕಿದೆ. ಅವರಿಗೆ ಉಚಿತ ಪ್ರಯಾಣದ ಜೊತೆಗೆ ಮುಂದಿನ ಬದುಕಿನ ಬಗೆಗೂ ಸರ್ಕಾರ ಈಗಲೇ ಮುಂಜಾಗ್ರತೆ ವಹಿಸಬೇಕಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is fantastic to st. Publics, help from both side equally. We are all voted one another, in the fast.thay came togetherat this critical moments.
    We thank & remember u for ever

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...