Homeಕರ್ನಾಟಕಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ 'ವಿಸ್ಟ್ರಾನ್' ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಕೆಲಸ ಮಾಡಿಸಿಕೊಂಡು 4 ತಿಂಗಳುಗಳಿಂದ ಸಂಬಳ ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಅಲ್ಲಿನ ಕಾರ್ಮಿಕರು ಬಂಡಾಯವೆದ್ದು ಕಂಪನಿಯ ವಸ್ತುಗಳನ್ನು ಪುಡಿ ಪುಡಿ ಮಾಡಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.

- Advertisement -
- Advertisement -

ಕೋಲಾರ ಬಳಿಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆರಂಭವಾಗಿದ್ದ ದೇಶದ ಏಕೈಕ ಐಫೋನ್ ತಯಾರಿಕ ವಿಸ್ಟ್ರಾನ್‌ನಲ್ಲಿ ಕಾರ್ಮಿಕರು – ಆಡಳಿತ ಮಂಡಳಿಯ ನಡುವಿನ ಜಗಳ ಬೀದಿಗೆ ಬಂದಿದೆ. ನಾಲ್ಕು ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಇಂದು ತಾಳ್ಮೆ ಕಳೆದುಕೊಂಡಿದ್ದು ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 15 ಸಾವಿರ ಜನರಿಗೆ ಉದ್ಯೋಗ ಕೊಡುವುದಾಗಿ ವಿಸ್ಟ್ರಾನ್ ಕಂಪನಿ ಘೋಷಿಸಿತ್ತು. ಆದರೆ ಕಂಪನಿಯ ಖಾಯಂ ಉದ್ಯೋಗಗಳನ್ನು ಬೇರೆ ರಾಜ್ಯದವರಿಗೆ ನೀಡಿ, 12 ಸಾವಿರ ನಾಲ್ಕನೇ ದರ್ಜೆಯ ಗುತ್ತಿಗೆ ಉದ್ಯೋಗಗಳನ್ನು ಮಾತ್ರ ಸ್ಥಳೀಯರಿಗೆ ನೀಡಿದೆ. ಅಲ್ಲದೆ ಕೆಲಸ ಮಾಡಿಸಿಕೊಂಡು 4 ತಿಂಗಳುಗಳಿಂದ ಸಂಬಳ ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಅಲ್ಲಿನ ಕಾರ್ಮಿಕರು ಬಂಡಾಯವೆದ್ದು ಕಂಪನಿಯ ವಸ್ತುಗಳನ್ನು ಪುಡಿ ಪುಡಿ ಮಾಡಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆಯೇ 5 ಗಂಟೆ ಸಮಯದಲ್ಲಿ ನೂರಾರು ಕಾರ್ಮಿಕರು ಕಂಪನಿ ವಸ್ತುಗಳನ್ನು ಒಡೆದು ಹಾಕುವ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿವೆ. ಆಡಳಿತ ಮಂಡಳಿಯ ಸದಸ್ಯರ ಕಾರುಗಳನ್ನು ಜಖಂಗೊಳಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠೀ ಪ್ರಹಾರ ನಡೆಸಿ, ಹಲವು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ, ಪೊಲೀಸ್ ಅಧೀಕ್ಷಕ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.

ಇಷ್ಟು ದೊಡ್ಡ ಕಂಪನಿಯಲ್ಲಿ ದುಡಿಯುವ 12 ಸಾವಿರ ಕಾರ್ಮಿಕರಿಗೆ ಕೇವಲ 8-12 ಸಾವಿರ ರೂ ಸಂಬಳವಿದೆ. ಅದನ್ನು ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಕಾರ್ಮಿಕರು ರೊಚ್ಚಿಗೆದ್ದಿದ್ದಾರೆ. ಘಟನೆ ಬೆಳಿಗ್ಗೆ 5 ಗಂಟೆಗೆ ಆರಂಭವಾದರೂ ಪೊಲೀಸರು ಸ್ಥಳಕ್ಕೆ ಬರುವಲ್ಲಿ 7 ಗಂಟೆ ಆಗಿದೆ. ಅಷ್ಟರಲ್ಲಿ ಕಾರ್ಮಿಕರು ಅಲ್ಲಿಂದ ಚೆಲ್ಲಾಪಿಲ್ಲಿಯಾಗಿದ್ದಾರೆ. ನಂತರ ರಸ್ತೆಯಲ್ಲಿ ಸಿಕ್ಕ ಸಿಕ್ಕ ಬೇರೆ ಕಂಪನಿಯ ಕಾರ್ಮಿಕರನ್ನು, ಸಾಮಾನ್ಯ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿ ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...