Homeಕರ್ನಾಟಕದೊಡ್ಡಿಪಾಳ್ಯ ನರಸಿಂಹ ಮೂರ್ತಿ ಬಂಧನ ಖಂಡಿಸಿ, ಸಿಎಂಗೆ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರ

ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಬಂಧನ ಖಂಡಿಸಿ, ಸಿಎಂಗೆ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರ

- Advertisement -
- Advertisement -

ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿ ಮತ್ತು ಬಿಡುಗಡೆಗೆ ಆಗ್ರಹಿಸಿ ರಾಜ್ಯದ ಹಲವು ಭಾಗಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೂ ಸಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ದೊಡ್ಡಿಪಾಳ್ಯ ಅವರ ಬಂಧನ ಖಂಡಿಸಿ ಬಿಡುಗಡೆಗೆ ಒತ್ತಾಯಿಸಿದೆ. ಅವರ ಪೂರ್ಣ ಹೇಳಿಕೆ ಕೆಳಗಿನಂತಿದೆ.

ಪತ್ರಕತ೯ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸುತ್ತದೆ. ’20 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ರಾಜದ್ರೋಹ ಸೇರಿದಂತೆ, ಕೆಲ ಪ್ರಕರಣಗಳನ್ನು ದಾಖಲಿಸಿ, ಬಂಧಿಸಿರುವುದು ಖಂಡನೀಯ ಮತ್ತು ಸಮರ್ಥನೀಯ ಅಲ್ಲ.

ನರಸಿಂಹ ಮೂತಿ೯ಯವರು ಬೆಂಗಳೂರಿನಲ್ಲಿಯೇ ವಾಸವಾಗಿದ್ದು, ಪತ್ರಕತ೯ರಾಗಿ ಸಕ್ರಿಯವಾಗಿ ಕಾಯ೯ ನಿವ೯ಹಿಸಿದ್ದಾರೆ ಅಲ್ಲದೆ, ಹಲವು ಜನಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಅವರ ಬಂಧನ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹುನ್ನಾರ ಮತ್ತು ಅಕ್ರಮ. ಇದರಿಂದ ಪತ್ರಕರ್ತರು ನಿರ್ಭಯವಾಗಿ, ವೃತ್ತಿಪರವಾಗಿ, ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗದೇ ಆತಂಕದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ಈ ಕೂಡಲೇ ನರಸಿಂಹ ಮೂರ್ತಿ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ, ನ್ಯಾಯ ಸಮ್ಮತ ತನಿಖೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ...

0
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನ ಭೀತಿಯಿಂದ ನಿರಾಳರಾಗಿದ್ದ ಶಾಸಕ ಹೆ.ಚ್‌ಡಿ ರೇವಣ್ಣ ಅವರಿಗೆ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಆತಂಕ ಎದುರಾಗಿದೆ. ಈ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ...