Homeಕರ್ನಾಟಕದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

ದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜಿಸಿದೆ. ಮಂಗಳವಾರ ಕೇರಳದ ಶಾಸಕಿ, ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಅವರು ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆಯ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿದರು.

”ಎಲ್ಲ ಮಹಿಳೆಯರ ಐಕ್ಯತೆ ಚಿರಾಯುವಾಗಲಿ, ನಾವೆಲ್ಲರೂ ಒಂದಾಗಿ ನ್ಯಾಯಕ್ಕಾಗಿ, ಮಾನವ ಹಕ್ಕುಗಳಿಗಾಗಿ ಹೋರಾಡುತ್ತೇವೆ” ಎಂದು ಘೋಷಣೆ ಕೂಗುತ್ತಾ ಕೆಕೆ ಶೈಲಜಾರವರು ಸಮಾವೇಶಕ್ಕೆ ಚಾಲನೆ ನೀಡಿದರು. ‘ಸಂವಿಧಾನವೇ ಉಸಿರು ಬಹುತ್ವವೇ ಬದುಕು’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ ಆರೋಪ; ಕೇರಳದ ಏಷ್ಯಾನೆಟ್ ನ್ಯೂಸ್‌ ಕಚೇರಿ ಮೇಲೆ ಪೊಲೀಸ್ ರೈಡ್‌

ಸಮಾವೇಶ ಉದ್ಘಾಟಿಸಿದ ಬಳಿಕ ಮಾತನಾಡಿದ  ಶೈಲಜಾ ಟೀಚರ್, ”ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹರಣವಾಗುತ್ತಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಧಾರ್ಮಿಕ ಮೂಲಭೂತವಾದಿಗಳು ಶೈಲಜಾ ಟೀಚರ್ ಕಳವಳ

”ಇಂದು ಮನುಸ್ಮೃತಿಯ ಪರವಾದ ಆಡಳಿತ ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ನಿರಂತರವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇಂದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ. ಧಾರ್ಮಿಕ ಮೂಲಭೂತವಾದ ನಮ್ಮ ದೇಶದ ಬಹಳ ದೊಡ್ಡ ಶತ್ರುವಾಗಿದೆ. ಬಿಲ್ಕಿಸ್‌ಬಾನು ಪ್ರಕರಣದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಗುಜರಾತ್‌ ಸರ್ಕಾರ ಇಂತಹ ಕೊಲೆಗಡುಕರು ಮತ್ತು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದ ಮೇಲೆ ಅವರನ್ನು ಉತ್ತಮ ವ್ಯಕ್ತಿಗಳು ಎಂದು ಬಿಡುಗಡೆ ಮಾಡಿದೆ. ಹೀಗಾಗಿ ಅವರು ಇಂದು ಮುಕ್ತವಾಗಿ ಎಲ್ಲೆಡೆ ತಿರುಗಾಡಿಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

”ಭಾರತದಲ್ಲಿ ಇಂದು ಮಕ್ಕಳ ಸಾವುಗಳು, ಶಿಶು ಮರಣ, ಹೆರಿಗೆಯ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿವೆ. ನಿರಂತರ ಹೋರಾಟದ ಫಲವಾಗಿ ಶಿಶು ಮತ್ತು ತಾಯಿ ಮರಣದ ಪ್ರಕರಣಗಳು ಕಡಿಮೆ ಆಗಿವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಊಳಿಗಮಾನ್ಯ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧವಾಗಿ ತಮ್ಮ ಎಲ್ಲ ಬಗೆಯ ಹಕ್ಕುಗಳಿಗಾಗಿ ತಮಗೆ ಬೇಕಾಗಿರುವ ಶಿಕ್ಷಣ, ಮತದಾನ, ಸಮಾನತೆ, ಸಮಾನವಾದ ಅವಕಾಶಗಳ ಹಕ್ಕಿಗಾಗಿ ಮಹಿಳೆಯರು ಹೋರಾಟ ಮಾಡಿದ ಫಲವಾಗಿ ನಾವು ಇಲ್ಲಿ ಸೇರಿ ಚರ್ಚಿಸಲು ಸಾಧ್ಯವಾಗಿದೆ” ಎಂದರು.

”ಆಸ್ತಿ ಉಳ್ಳವರಾಗಿರಲಿ ಅಥವಾ ಇಲ್ಲದವರಾಗಿರಲಿ ಎಲ್ಲ ಮಹಿಳೆಯರು ಸಮಾನವಾಗಿರಬೇಕು. ಸಮಾನವಾದಂತಹ ಹಕ್ಕುಗಳಿರಬೇಕು. ಶಿಕ್ಷಣ, ಉದ್ಯೋಗ ಮತ್ತು ಮತದಾನಕ್ಕೆ ಪ್ರಬಲ ಹೋರಾಟ ನಡೆಯಿತು” ಎಂಬುದನ್ನು ಮರೆಯಲಾಗದು” ಎಂದು ಹೇಳಿದರು.

”ಭಾರತದ ಸಂವಿಧಾನ ಅತ್ಯದ್ಭುತ ಸಂವಿಧಾನವಾಗಿದೆ. ಇಡೀ ಪ್ರಪಂಚದಲ್ಲಿರುವಂತಹ ಅತ್ಯುತ್ತಮ ಪ್ರಜಾತಾಂತ್ರಿಕ ಮೌಲ್ಯಗಳನ್ನು ಇಟ್ಟುಕೊಂಡು ನಮ್ಮ ಸಂವಿಧಾನ ರಚನೆಯಾಗಿದೆ. ಇಂತಹ ಸಂವಿಧಾನ ಇಂದು ಅಪಾಯದಲ್ಲಿದ್ದು ಇದನ್ನು ಸಂರಕ್ಷಣೆ ಮಾಡಬೇಕಾಗಿದೆ” ಎಂದು ಶೈಲಜಾ ಎಚ್ಚರಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವಿದ್ಯಾ ಕುಮಾರಿ ಅವರು, ”ಮಹಿಳೆ ಉನ್ನತ ಉದ್ಯೋಗದಲ್ಲಿದ್ದಾರೆ, ಸಾಧನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಗೌರವ ಸಿಗಬಾರದು. ನಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಗೌರವ ಸಿಗುವಂತಾಗಬೇಕು. ಕುಟುಂಬ ನಿರ್ವಹಣೆ ಎಂಬುದು ಸುಲಭದ ಮಾತಲ್ಲ. ಅದಕ್ಕಾಗಿ ಇಡೀ ಬದುಕನ್ನು ಸವೆಸುವ ಎಲ್ಲ ಮಹಿಳೆಯರನ್ನು ಇಡೀ ಸಮಾಜ ಗೌರವಿಸಬೇಕು. ಆಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ” ಎಂದು ಹೇಳಿದರು.

ಈ ಮೆರವಣಿಗೆ ಉದ್ಘಾಟನೆಗೂ ಮುನ್ನ ಒಕ್ಕೂಟದ ಸಂಗಾತಿಗಳೆಲ್ಲರೂ ಸೇರಿ ‘ತೂರಬೇಡಿ ಗಾಳಿಗೆ ಹೆಣ್ತನದ ಘನತೆ’ ಆಶಯ ಗೀತೆ ಹಾಡಿದರು. ಟೌನ್‌ಹಾಲ್‌ ಸರ್ಕಲ್‌ನಿಂದ ಅಮಾನಿಕೆರೆ ಗಾಜಿನಮನೆಯವರೆಗೂ ವಿದ್ಯಾರ್ಥಿಗಳು, ಮಹಿಳೆಯರು, ಬಾಲ್ಯ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆಯ ವಿರೋಧಿಸಿ ಬರೆದಿದ್ದ ಪ್ಲಕಾರ್ಡ್ಸ್‌ ಹಿಡಿದು ಮೆರವಣಿಗೆ ನಡೆಸಿದರು. ನಾನಾ ಶಾಲಾ ಮಕ್ಕಳು ಕೋಲಾಟ, ನೃತ್ಯದ ಮೂಲಕ ಅರಿವು ಮೂಡಿಸಿದರೆ, ‘ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು ಮೆರವಣಿಗೆ ಹೊರಡುತ್ತಾರೆ’ ಎಂದು ಹಾಡುತ್ತಾ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಜಾಥಾದಲ್ಲಿ ಹಿರಿಯ ಪತ್ರಕರ್ತೆ ಡಾ. ವಿಜಯಾ, ಸಾಮಾಜಿಕ ಹೋರಾಟಗಾರ್ತಿ ಅಕ್ಕೈಪದ್ಮಸಾಲಿ, ಸಾಹಿತಿ ಬಾ ಹ ರಮಾಕುಮಾರಿ, ಕರ್ನಾಟಕ ರಾಜ್ಯ ಮಹಿಳಾ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ಮಹಾಸಭಾದ ಹಂದಿಜೋಗಿ ರಾಮಕ್ಕ, ಪೌರಕಾರ್ಮಿಕ ಸಂಘಟನೆಯ ಶ್ವೇತಾ, ಬೀಡಿ ಕಾರ್ಮಿಕರ ಸಂಘದ ಶಹತಾಜ್‌, ಆಸಿಡ್‌ ವಾರಿಯರ್‌ ಜಯಲಕ್ಷ್ಮಿ ಚಿಕ್ಕನಾಯಕನಹಳ್ಳಿ ಹಾಗೂ ಲಿಂಗಾಂತರಿ ಸಮುದಾಯದ ದೀಪಿಕಾ ಭಾಗಿಯಾಗಿದ್ದರು.

ಇದನ್ನೂ ಓದಿ: ಕೆಲಸದ ಅವಧಿ ಹೆಚ್ಚಳ: ಐತಿಹಾಸಿಕ ಹೋರಾಟದ ಆಶಯ, ಯಶಸ್ಸು ಎರಡನ್ನೂ ಈ ಕಾನೂನು ನುಂಗಿ ಹಾಕಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...