Homeರಂಜನೆಕ್ರೀಡೆವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಬೆಳ್ಳಿ ಗೆದ್ದು ದಾಖಲೆ ನಿರ್ಮಿಸಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಬೆಳ್ಳಿ ಗೆದ್ದು ದಾಖಲೆ ನಿರ್ಮಿಸಿದ ನೀರಜ್ ಚೋಪ್ರಾ

- Advertisement -
- Advertisement -

ಅಮೆರಿಕದ ಒರೇಗಾನ್‌ ರಾಜ್ಯದ ಯುಜೀನ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವ ಮೂಲಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎನಿಸಿಕೊಂಡಿದ್ದಾರೆ.

ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್ ದೂರ ಎಸೆಯುವ ಮೂಲಕ ನೀರಜ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಗ್ರೆನಾಡ ದೇಶದ ಆಂಡರ್ಸನ್ ಪೀಟರ್ಸ್ ಸತತ ಮೂರು ಪ್ರಯತ್ನದಲ್ಲಿ 90 ಮೀಟರ್‌ ಅಧಿಕ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಯತ್ನದಲ್ಲಿ ಪೌಲ್ ಆದರು. ಎರಡನೇ ಪ್ರಯತ್ನದಲ್ಲಿ 82.36 ಮೀಟರ್ ಎಸೆದರು. ಮೂರನೇ ಪ್ರಯತ್ನದಲ್ಲಿ 86.37 ಮೀಟರ್‌ಗೆ ಸೀಮಿತಗೊಂಡರು. ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್ ದೂರ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.

ಈ ಸಾಧನೆಯ ಮೂಲಕ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಜಯಿಸಿದ ಎರಡನೇ ಭಾರತೀಯ ಮತ್ತು ಮೊದಲ ಪುರುಷ ಸ್ಪರ್ಧಿ ಎನಿಸಿದ್ದಾರೆ. ಈ ಮೊದಲು 2003ರಲ್ಲಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಅಂಜುಬಾಬಿ ಜಾರ್ಜ್ ಕಂಚಿನ ಪದಕ ಜಯಿಸಿದ್ದರು.

ಚಿನ್ನದ ಹುಡುಗ ಎಂದು ಕರೆಸಿಕೊಳ್ಳುವ ಬೆಳ್ಳಿ ಪದಕ ವಿಜೇತ ನೀರಜ್‌ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಇದನ್ನೂ ಓದಿ; ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರೆಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...