Homeಮುಖಪುಟವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

- Advertisement -
- Advertisement -

ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ “ಆರೈಕೆಯಲ್ಲಿನ ಅಸಮಾನತೆಯ ಅಂತ್ಯ” (ಕ್ಲೋಸ್ ದಿ ಕೇರ್ ಗ್ಯಾಪ್) ಎಂಬ ಧ್ಯೇಯ ವಾಕ್ಯದೊಂದಿಗೆ 2022ರ ವಿಶ್ವ ಕ್ಯಾನ್ಸರ್ ದಿನವನ್ನು ಇಂದು ಜಾಗತಿಕ ಮಟ್ಟದಲ್ಲಿ ಆಚರಿಸಲಾಗಿದೆ. ಕ್ಲೋಸ್ ದಿ ಕೇರ್ ಗ್ಯಾಪ್ ಅಭಿಯಾನ ಮೂರು ವರ್ಷಗಳ ಅವಧಿಗೆ ನಡೆಯಲಿದೆ.

ಯೂನಿಯನ್ ಫಾರ್ ಇಂಟರ್‌ನ್ಯಾಷನಲ್‌ ಕ್ಯಾನ್ಸರ್ ಕಂಟ್ರೋಲ್ (ಯುಐಸಿಸಿ) ನೇತೃತ್ವದಲ್ಲಿ ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್‌ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಚಿಕಿತ್ಸೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡುತ್ತದೆ.

ಈ ಸಾಲಿನಿಂದ ಮೂರು ವರ್ಷಗಳ ಅವಧಿಯಲ್ಲಿ ‘ಕ್ಲೋಸ್ ದಿ ಕೇರ್ ಗ್ಯಾಪ್’ ಧ್ಯೇಯವಾಕ್ಯದೊಂದಿಗೆ ಜಗತ್ತಿನಾದ್ಯಂತ ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಗುರುತಿಸುವ ಉದ್ದೇಶ ಇಟ್ಟುಕೊಂಡು ಕೆಲಸ ಮಾಡಲಾಗುತ್ತದೆ. ಕೆಲವು ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗಿಗಳಿಗೆ ಅಗತ್ಯ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಜೀವನೋತ್ಸಾಹ ತುಂಬುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡಲಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

ಇತ್ತೀಚಿನ ಅಧ್ಯಯನಗಳ ಪ್ರಕಾರ, ವಿಶ್ವದ ಆರು ಜನರಲ್ಲಿ ಒಬ್ಬರು ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಕ್ಷಯ, ಎಚ್ಐವಿ-ಏಡ್ಸ್ ಮತ್ತು ಮಲೇರಿಯಾದಂಥ ಕಾಯಿಲೆಗಳಿಂದ ಸಂಭವಿಸುವ ಸಾವಿನ ಸಂಖ್ಯೆಗಿಂತ ಕ್ಯಾನ್ಸರ್‌ನಿಂದ ಮೃತಪಡುವವರ ಸಂಖ್ಯೆ ಅಧಿಕವಾಗಿದೆ ಎಂದು ಅಧ್ಯಯನಗಳು ತಿಳಿಸಿವೆ.

ವಿಶ್ವ ಆರೋಗ್ಯ ಸಂಸ್ಥೆ 2020 ರಲ್ಲಿ ಭಾರತದಲ್ಲಿ ನಡೆಸಿರುವ ಅಧ್ಯಯನವೊಂದರ ವರದಿಯ ಮಾಹಿತಿಯಂತೆ ಪ್ರತಿ 10 ಭಾರತೀಯರಲ್ಲಿ ಒಬ್ಬರು ಕ್ಯಾನ್ಸರ್‌ಗೆ ಒಳಗಾಗುತ್ತಾರೆ. ಪ್ರತಿ 15 ಜನರಲ್ಲಿ ಒಬ್ಬರು ಸಾಯುತ್ತಾರೆ ಎಂಬ ಅಂಶ ಬಹಿರಂಗಪಡಿಸಿದೆ. ಭಾರತದಲ್ಲಿ ಅಂದಾಜು 1.35 ಶತಕೋಟಿ ಜನಸಂಖ್ಯೆ ಇದ್ದು, 2018ರಲ್ಲಿ 1.16 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು, 784,800 ಕ್ಯಾನ್ಸರ್ ಸಾವಿನ ಪ್ರಕರಣಗಳು ವರದಿಯಾಗಿವೆ.

ಕ್ಯಾನ್ಸರ್‌ನಿಂದ ಅತಿ ಹೆಚ್ಚು ಸಾವು ಸಂಭವಿಸುವ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನದಲ್ಲಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಭಾರತದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ.12 ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಿದೆ.


ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...