Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...