Homeಅಂತರಾಷ್ಟ್ರೀಯಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು...

ಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಖಂಡನೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಹತ್ಯೆಯನ್ನು ನಿಲ್ಲಿಸುವಂತೆ ಯುಎನ್ ಸೆಕ್ಯುರಿಟಿ ಕೌನ್ಸಿಲ್ (ಯುಎನ್‌ಎಸ್‌ಸಿ) ಮಂಡಿಸಿದ ಕರಡು ನಿರ್ಣಯವನ್ನು ಮತ್ತೊಮ್ಮೆ ವೀಟೋ ಅಧಿಕಾರವನ್ನು ಬಳಕೆ ಮಾಡುವ ಮೂಲಕ ಅಮೆರಿಕ ತಡೆದಿದ್ದು, ಇದಕ್ಕೆ ಮಿತ್ರರಾಷ್ಟ್ರಗಳು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾದ ಖಂಡನೆ ವ್ಯಕ್ತವಾಗಿದೆ.

ಗಾಝಾದಲ್ಲಿ ಕದನ ವಿರಾಮವನ್ನು ಒತ್ತಾಯಿಸುವ ಯುಎನ್‌ಎಸ್‌ಸಿ ಮಂಡಿಸಿದ ಮೂರನೇ ನಿರ್ಣಯವನ್ನು ಕೂಡ ಅಮೆರಿಕ ವಿಟೋ ಅಧಿಕಾರವನ್ನು ಬಳಸಿ ತಡೆದಿದೆ. ಇದು ಅಮೆರಿಕಾದ ಅಮಾನವೀಯ ಕೃತ್ಯ, ಇಸ್ರೇಲ್‌ ನಡೆಸುತ್ತಿರುವ ನರಮೇಧಕ್ಕೆ ಅಮೆರಿಕಾ ಪಾಲುದಾರವಾಗಿದೆ ಎಂದು ವಿಶ್ವದ ಬಹುತೇಖ ರಾಷ್ಟ್ರಗಳು ಖಂಡನೆಯನ್ನು ವ್ಯಕ್ತಪಡಿಸಿದೆ.

ಅಮೆರಿಕ ನಿನ್ನೆ ಪ್ಯಾಲೆಸ್ತೀನ್‌ ಎನ್‌ಕ್ಲೇವ್‌ನಿಂದ ಎಲ್ಲಾ ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಮತ್ತು ತಾತ್ಕಾಲಿಕ ಕದನ ವಿರಾಮವನ್ನು ಬೆಂಬಲಿಸುವ ನಿರ್ಣಯವನ್ನು ಬೆಂಬಲಿಸಿತ್ತು. ಇದರ ಬೆನ್ನಲ್ಲಿ ಅಮೆರಿಕ ಮತ್ತೆ ಉಲ್ಟಾ ಹೊಡೆದಿದೆ. ಗಾಝಾದಲ್ಲಿ 29,000ಕ್ಕೂ ಅಧಿಕ ಜನರ ಹತ್ಯೆಯ ಬೆನ್ನಲ್ಲಿ ಸಂಘರ್ಷವನ್ನು ಕೊನೆಗೊಳಿಸಲು ಜಗತ್ತಿನಾದ್ಯಂತದ ದೇಶಗಳು ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದೆ. ಯುಎನ್‌ ‘ಕದನ ವಿರಾಮ’ದ ಕುರಿತ ನಿರ್ಣಯಕ್ಕೆ 15-ಸದಸ್ಯ ಮಂಡಳಿಯಲ್ಲಿನ ಮತವು 13-1 ಆಗಿದ್ದು, ಯುನೈಟೆಡ್ ಕಿಂಗ್‌ಡಮ್ ಮತಗಳಿಂದ ದೂರ ಉಳಿದಿತ್ತು. ಅಮೆರಿಕಾ ವೀಟೋ ಅಧಿಕಾರವನ್ನು ಬಳಸಿ ನಿರ್ಣಯಕ್ಕೆ ವಿರೋಧವನ್ನು ವ್ಯಕ್ತಪಡಿಸಿತ್ತು.

ಅಮೆರಿಕ ನಡೆಗೆ ಚೀನಾ ವಿರೋಧ:

ಯುಎಸ್‌ ಕದನ ವಿರಾಮವನ್ನು ಬೆಂಬಲಿಸದ ಹಿನ್ನೆಲೆ, ಚೀನಾದ ರಾಯಭಾರಿ ಜಾಂಗ್ ಜುನ್, ಯುಎಸ್‌ ಬಗ್ಗೆ ಬಲವಾದ ನಿರಾಶೆ ಮತ್ತು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ. ಯುಎಸ್‌ನ ವೀಟೋ ತಪ್ಪು ಸಂದೇಶವನ್ನು ಕಳುಹಿಸುತ್ತದೆ, ಗಾಝಾದಲ್ಲಿನ ಪರಿಸ್ಥಿತಿಯನ್ನು ಹೆಚ್ಚು ಅಪಾಯಕಾರಿ ಸ್ಥಿತಿಗೆ ತಳ್ಳುತ್ತದೆ ಎಂದು ಜಾಂಗ್ ಹೇಳಿದ್ದಾರೆ. ಗಾಝಾದಲ್ಲಿ ಕದನ ವಿರಾಮಕ್ಕೆ ಆಕ್ಷೇಪಣೆಯು ಮುಂದುವರಿದ ಹತ್ಯೆಗೆ ಹಸಿರು ನಿಶಾನೆ ತೋರುವುದಕ್ಕಿಂತ ಭಿನ್ನವಾಗಿಲ್ಲ. ಗಾಝಾದಲ್ಲಿನ ಯುದ್ಧವನ್ನು ತಡೆಯುವ ಮೂಲಕ  ಮಾತ್ರ ಇಡೀ ಪ್ರದೇಶವನ್ನು ಆವರಿಸಿರುವ ನರಕದ ಬೆಂಕಿಯನ್ನು ಜಗತ್ತು ತಡೆಯಬಹುದು ಎಂದು ಚೀನಾ ಹೇಳಿದೆ.

ರಷ್ಯಾ 

ಗಾಝಾದಲ್ಲಿ ಕದನ ವಿರಾಮಕ್ಕೆ ಯುಎಸ್ ವೀಟೋ ಅಧಿಕಾರವನ್ನು ಬಳಕೆ ಮಾಡಿ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಕ್ಕೆ ರಷ್ಯಾದ ರಾಯಭಾರಿ ವಾಸಿಲಿ ನೆಬೆಂಜಿಯಾ ಅವರು ಯುಎಸ್ ವೀಟೋ ಅಧಿಕಾರ ಬಳಕೆ ಭದ್ರತಾ ಮಂಡಳಿಯ ಇತಿಹಾಸದಲ್ಲಿ ಮತ್ತೊಂದು ಕಪ್ಪು ಚುಕ್ಕಿ ಎಂದು ಹೇಳಿದ್ದಾರೆ. ಇಸ್ರೇಲ್ ಗಾಝಾದಲ್ಲಿ  ಅಮಾನವೀಯ ಯೋಜನೆಗಳನ್ನು ಪೂರ್ಣಗೊಳಿಸಲು ಅಮೆರಿಕ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಫ್ರಾನ್ಸ್‌

ಫ್ರಾನ್ಸ್‌ನ ಯುಎನ್ ರಾಯಭಾರಿ ನಿಕೋಲಸ್ ಡಿ ರಿವಿಯೆರ್ ಅವರು ಗಾಝಾದಲ್ಲಿನ ವಿನಾಶಕಾರಿ ಪರಿಸ್ಥಿತಿಯನ್ನು ಗಮನಿಸಿದರೂ,  ಯುಎಸ್‌ ಕದನ ವಿರಾಮ ನಿರ್ಣಯವನ್ನು ಅಂಗೀಕರಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ನಿರ್ಣಯಕ್ಕೆ ಮತ ಹಾಕಿದ ಫ್ರಾನ್ಸ್, ಎಲ್ಲಾ ಬಂಧಿತರನ್ನು ಬಿಡುಗಡೆ ಮಾಡಲು ಮತ್ತು ಕದನ ವಿರಾಮವನ್ನು ತಕ್ಷಣ ಕಾರ್ಯಗತಗೊಳಿಸಲು ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದೆ.

ಅಲ್ಜೀರಿಯಾ

ಅಲ್ಜೀರಿಯಾದ ರಾಯಭಾರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯುಎನ್‌ಎಸ್‌ಸಿ ಮತ್ತೊಮ್ಮೆ ವಿಫಲವಾಗಿದೆ. ಈ ಕ್ರಮವು ಒಟ್ಟಾರೆಯಾಗಿ ಮಧ್ಯಪ್ರಾಚ್ಯಕ್ಕೆ ಆಳವಾದ ಪರಿಣಾಮಗಳನ್ನು ಉಂಟುಮಾಡಬಹುದು. ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆಯನ್ನು ಕೊನೆಗೊಳಿಸಲು ಅಂತರಾಷ್ಟ್ರೀಯ ಸಮುದಾಯವು ತಕ್ಷಣದ ಕದನ ವಿರಾಮಕ್ಕೆ ಕರೆ ನೀಡುವ ಮೂಲಕ ಪ್ರತಿಕ್ರಿಯಿಸಬೇಕು. ಅಂತಹ ಕರೆಗಳಿಗೆ ಅಡ್ಡಿಪಡಿಸುವವರೆಲ್ಲರೂ ತಮ್ಮ ನೀತಿಗಳು  ಪರಿಶೀಲಿಸಬೇಕು. ಏಕೆಂದರೆ ಇಂದಿನ ತಪ್ಪು ನಿರ್ಧಾರಗಳು ನಾಳೆ ಬೆಲೆ ತೆರವುಂತೆ ಮಾಡುತ್ತದೆ. ಆದ್ದರಿಂದ ನಿಮ್ಮನ್ನು ಕೇಳಿಕೊಳ್ಳಿ, ನಿಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಿ. ಇಂದು ನಿಮ್ಮ ನಿರ್ಧಾರಗಳು ಏನನ್ನು ಉಂಟುಮಾಡುತ್ತವೆ? ಇತಿಹಾಸವು ನಿಮ್ಮನ್ನು ಏನೆಂದು ಹೇಳುತ್ತದೆ ಎಂದು ಅಮೆರಿಕದ ನಿರ್ಧಾರವನ್ನು ಉಲ್ಲೇಖಿಸಿ ಅಲ್ಜೀರಿಯಾ ಹೇಳಿದೆ.

ಹಮಾಸ್‌

ಅಲ್ಜೀರಿಯಾದ ಕರಡು ನಿರ್ಣಯವನ್ನು ನಿರ್ಬಂಧಿಸುವ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ನಿರ್ಧಾರವು,   ಇಸ್ರೇಲ್‌ ಆಕ್ರಮಣದ ಮುಂದುವರಿಕೆಗೆ ಸಹಾಯವನ್ನು ಮಾಡುತ್ತದೆ. ಇದು ಪ್ಯಾಲೇಸ್ತೀನ್‌ ನಾಗರಿಕರನ್ನು  “ಕೊಲ್ಲುವ ಮತ್ತು ಸ್ಥಳಾಂತರಿಸುವ” ಗುರಿಯನ್ನು ಹೊಂದಿದೆ ಎಂದು ಹಮಾಸ್‌ ಹೇಳಿದೆ.

ಪ್ಯಾಲೆಸ್ತೀನ್‌

ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರ ಕಚೇರಿಯು ಯುಎಸ್ ವೀಟೋ ಅಂತರಾಷ್ಟ್ರೀಯ ಸಮುದಾಯವನ್ನು ಧಿಕ್ಕರಿಸಿರುವ ಬೆಳವಣಿಗೆಯಾಗಿದೆ ಮತ್ತು ಇಸ್ರೇಲ್‌ಗೆ ಗಾಝಾದ ಜನರ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರೆಸಲು ಮತ್ತು ರಫಾಹ್ ಮೇಲಿನ ದಾಳಿಗೆ ಹಸಿರು ನಿಶಾನೆ ತೋರಿದಂತಾಗಿದೆ ಎಂದು ಹೇಳಿದೆ.

ಗಾಝಾದಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರ ವಿರುದ್ಧ ಇಸ್ರೇಲ್‌ನ “ಅನಾಗರಿಕ ದಾಳಿ” ಗಳಿಗೆ “ಬೆಂಬಲಿಸುವ ಮತ್ತು ರಕ್ಷಣೆ ನೀಡುವ” ಜವಾಬ್ದಾರಿಯನ್ನು US ಆಡಳಿತ ಹೊಂದಿದೆ. ಈ ನೀತಿಯು ನರಮೇಧ ಮತ್ತು ಜನಾಂಗೀಯ ಹತ್ಯಾಕಾಂಡದ ಅಪರಾಧಗಳಲ್ಲಿ ಇಸ್ರೇಲ್‌ ಪಡೆಗಳು ಮಾಡುತ್ತಿರುವ ಯುದ್ಧ ಅಪರಾಧಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ ಪಾಲುದಾರನನ್ನಾಗಿ ಮಾಡುತ್ತದೆ ಎಂದು ಹೇಳಿದೆ.

ಕತಾರ್‌

ಕತಾರ್‌ನ ಯುಎನ್ ರಾಯಭಾರಿ ಅಲ್ಯಾ ಅಹ್ಮದ್ ಸೈಫ್ ಅಲ್ ಥಾನಿ ಅವರು ಅಲ್ಜೀರಿಯಾ-ಕರಡು ನಿರ್ಣಯವನ್ನು ಅಂಗೀಕರಿಸುವಲ್ಲಿ ಯುಎನ್‌ಎಸ್‌ಸಿ ವಿಫಲವಾದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಗಾಝಾದಲ್ಲಿ ಕದನ ವಿರಾಮಕ್ಕೆ ಪ್ರಯತ್ನಗಳನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದೆ.

ಸೌದಿ ಅರೇಬಿಯಾ
ಸೌದಿ ಅರೇಬಿಯಾದ ವಿದೇಶಾಂಗ ಸಚಿವಾಲಯವು ಅಮೆರಿಕ ವೀಟೋದ ಅಧಿಕಾರ ಬಳಸಿ ನಿರ್ಣಯವನ್ನು ವಿರೋಧಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದೆ. ನಾರ್ವೆ ಕೂಡ ತಕ್ಷಣದ ಮಾನವೀಯ ಕದನ ವಿರಾಮದ ಕುರಿತು ನಿರ್ಣಯವನ್ನು ಅಂಗೀಕರಿಸಲು ಯುಎನ್‌ ಕೌನ್ಸಿಲ್‌ಗೆ ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದೆ ಮತ್ತು  ಗಾಜಾದಲ್ಲಿ ಭಯಾನಕತೆಯನ್ನು ಕೊನೆಗೊಳಿಸುವುದು ಅತ್ಯಗತ್ಯ ಎಂದು  ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಬ್ಲಾಕ್‌ಮೇಲ್‌ ಮಾಡಿದ ಕೇಂದ್ರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...