Homeಮುಖಪುಟಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಕರ್ನಾಟಕದಲ್ಲಿ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ.

- Advertisement -
- Advertisement -

ಪ್ರತಿ ವರ್ಷ ಸೆ.10ರಂದು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ. ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ. ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ (ಐಎಎಸ್ಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆಯು ಸೆಪ್ಟೆಂಬರ್ 10, 2003 ರಂದು ಈ ದಿನವನ್ನು ಜಾರಿಗೆ ತಂದವು. ಮೊದಲ ಬಾರಿ ವಿಶ್ವ ಆತ್ಮಹತ್ಯೆ ವರದಿಯನ್ನು 2014 ರಲ್ಲಿ ವಿಶ್ವಸಂಸ್ಥೆ ಬಿಡುಗಡೆ ಮಾಡಿತು.

ಆತ್ಮಹತ್ಯೆ ಪ್ರಕರಣಗಳು ಪ್ರತಿವರ್ಷ ಹೆಚ್ಚಾಗುತ್ತಲೇ ಸಾಗುತ್ತಿವೆ. ಆದರೆ ಸೆಲೆಬ್ರಟಿಗಳು ಆತ್ಮಹತ್ಯೆ ಮಾಡಿಕೊಂಡಾಗ ಹೆಚ್ಚು ಚರ್ಚೆಗೆ ಬರುತ್ತವೆ. ಆತ್ಮಹತ್ಯೆ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ.

ಓಡುತ್ತಿರುವ ಈ ಜಗತ್ತಿನಲ್ಲಿ ಯಾರಿಗೂ ಸಮಯವೇ ಇಲ್ಲ ಎಂಬ ಮಾತಿದೆ. ಬಯಸಿದ್ದು ಸಿಗದಿರುವುದು, ಅವಮಾನ ಸಹಿಸಿಕೊಳ್ಳದಿರುವುದು, ಕೆಲಸದ ಒತ್ತಡ, ಖಿನ್ನತೆ, ಕುಟುಂಬದಿಂದ ದೂರದಲ್ಲಿರುವುದು, ಸ್ನೇಹಿತರ ಚಿಂತೆ, ಆರೋಗ್ಯದ ಕಡೆ ಗಮನ ಕೊಡದಿರುವುದು ಹಣಕಾಸು ಮತ್ತು ಕೆಲಸದ ಹೊರೆ, ಜೊತೆಗೆ ಭವಿಷ್ಯದ ಅನಿಶ್ಚಿತತೆಯ ಬಗ್ಗೆ ಚಿಂತೆ ಒಂದಾ, ಎರಡಾ… ಸಮಸ್ಯೆಗಳ ಆಗರವನ್ನೇ ಮನುಷ್ಯ ತಾನಾಗಿಯೇ ಕಟ್ಟಿಕೊಂಡಿದ್ದಾನೆ ಇವುಗಳಿಂದ ಹೊರ ಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಾನೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಹಾಗಾದರೇ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಪರಿಹಾರವೇ..? ಖಂಡಿತ ಇಲ್ಲ. ಮನುಷ್ಯ ಹುಟ್ಟಲೂ ಸಹ ಹೋರಾಟ ನಡೆಸಿರುತ್ತಾನೆ. ಅಂತಹದರಲ್ಲಿ ಜೀವನದ ಸಮಸ್ಯೆಗಳು ಎಂದಿಗೂ ದೊಡ್ಡದಲ್ಲ. ಪ್ರತಿ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ ಕೋಪ, ಖಿನ್ನತೆಯಲ್ಲಿ ನಿರ್ಧಾರ ತೆಗೆದುಕೊಳ್ಳಬಾರದು ಅಷ್ಟೇ. ಇಂದು ದೊಡ್ಡ ಬೆಟ್ಟವಾಗಿ ಕಾಣುವ ಸಮಸ್ಯೆ, ನಾಳೆ ಕುಳಿತು ಯೋಚಿಸಿದರೇ ಅದು ಸಮಸ್ಯೆಯೇ ಅಲ್ಲ ಎನ್ನಿಸಬಹುದು.

ಇತ್ತಿಚೆಗೆ ಭಾರಿ ಸದ್ದು ಮಾಡಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಲ್ಲವೋ ಎಂಬುದರ ಕುರಿತು ದೊಡ್ಡ ಚರ್ಚೆಯೆಬ್ಬಿಸಿದೆ. ಆತ ತಾನು ಖಿನ್ನತೆಯಿಂದ ಬಳಲುತ್ತಿದೆ ಎಂದು ಆತನೇ ಹೇಳಿದರೂ ಕೂಡ ಪ್ರಕರಣ ಬೇರೆಡೆಗೆ ಹಾದಿ ತಪ್ಪುತ್ತಿದೆ. ಇಲ್ಲಿ ನಾವು ಪ್ರಾಮುಖ್ಯತೆ ನೀಡಬೇಕಾಗಿದದ್ದು, ಮಾನಸಿಕ ಖಿನ್ನತೆ ಜನರ ಜೀವವನ್ನು ಹೇಗೆ ಸಾವಿನೆಡೆಗೆ ತಳ್ಳುತ್ತದೆ ಎಂಬ ವಿಚಾರದ ಬಗ್ಗೆ. ನಾವು ಈ ಪ್ರಕರಣದಿಂದ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬಹುದಾಗಿತ್ತು. ಮಾನಸಿಕ ಖಿನ್ನತೆಗೆ ಬಡವ, ಶ್ರೀಮಂತ ಎಂಬ ಭೇದವಿಲ್ಲ ಎಂಬುದನ್ನು ಅರಿಯಬೇಕು. ಯಾವುದೇ ಜಾತಿ, ವಯಸ್ಸು, ವರ್ಗ, ವರ್ಣಗಳ ಭೇದವಿಲ್ಲದೆ ಮುಂದುವರಿದ ಹಾಗೆ ಜಗತ್ತೇ ಎದುರಿಸುತ್ತಿರುವ ಅತೀ ಅಪಾಯಕಾರಿ ಪಿಡುಗು ಈ ಆತ್ಮಹತ್ಯೆ.

ಕೊವೀಡ್ ಸಾಂಕ್ರಾಮಿಕದಿಂದಾಗಿ ಈ ವರ್ಷ ವಿಶ್ವ ಆತ್ಮಹತ್ಯೆ ತಡೆ ದಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಮಾನಸಿಕ ಖಿನ್ನತೆಯನ್ನು ತಪ್ಪಿಸಲು, ನಿಯಂತ್ರಿಸಲು ಈ ಪರಿಸ್ಥಿತಿ ಮತ್ತೊಮ್ಮೆ ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ಸ್ಥಳೀಯ ಮಟ್ಟದಲ್ಲೂ ಜಾಗೃತಿ ಮೂಡಿಸುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳುತ್ತದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿಗೆ ಕಾರಣ ತಿಳಿಯಬೇಕಾದರೆ ಬಾಲಿವುಡ್ ಎಂಬ ಚಕ್ರವ್ಯೂಹ ಅರಿಯಿರಿ..

ಕೊರೊನಾದ ಭಾವನಾತ್ಮಕ ಪರಿಣಾಮವನ್ನು ತಿಳಿಯಲು ಮಾನಸಿಕ ಆರೋಗ್ಯ ಮತ್ತು ವರ್ತನೆಯ ವಿಜ್ಞಾನ ಇಲಾಖೆ, ಮ್ಯಾಕ್ಸ್ ಹೆಲ್ತ್‌ಕೇರ್ (ನವದೆಹಲಿ) ನಡೆಸಿದ ವೆಬ್ ಆಧಾರಿತ ಅಧ್ಯಯನದ ಪ್ರಕಾರ, ಭಾರತದಾದ್ಯಂತ ಒಟ್ಟು 1,069 ಪ್ರತಿಕ್ರಿಯೆಗಳಲ್ಲಿ 25 ಪ್ರತಿಶತದಷ್ಟು ಜನರಲ್ಲಿ ಸಾವು ಮತ್ತು ಆತ್ಮಹತ್ಯೆಯ ಕಲ್ಪನೆ ಇದ್ದರೆ, ಇನ್ನು ಶೇಕಡಾ 10 ರಷ್ಟು ಜನರಿಗೆ ಆಗ್ಗಾಗ್ಗೆ ಆತ್ಮಹತ್ಯೆ ಬಗ್ಗೆ ಆಲೋಚನೆ ಬರುತ್ತದೆ ಎಂದು ತಿಳಿದುಬಂದಿದೆ.

ದೇಶದಲ್ಲಿ 2015ರಿಂದ 2019ರ 5 ವರ್ಷಗಳ ತುಲನಾತ್ಮಕ ವರದಿ ಪ್ರಕಾರ ಪ್ರತಿವರ್ಷ 1.33 ಲಕ್ಷ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ ತಿಳಿಸಿದೆ. 2019ರಲ್ಲಿ ದೇಶದಲ್ಲಿ 1.36 ಲಕ್ಷ ಆತ್ಮಹತ್ಯೆ ಸಂಭವಿಸಿವೆ. ಅತ್ಯಧಿಕ ಆತ್ಮಹತ್ಯೆ ಪ್ರಕರಣಗಳು ಸಂಭವಿಸಿರುವುದು ಮಹಾರಾಷ್ಟ್ರದಲ್ಲಿ.

ಇನ್ನು ರಾಜ್ಯದಲ್ಲಿ ನೋಡುವುದಾದರೇ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ. ಅನಾರೋಗ್ಯ ಜನರ ಆತ್ಮಹತ್ಯೆಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ.

PC: Rastriya Khabars

ಇದನ್ನೂ ಓದಿ: ಸಾವಿಗೆ ಮುನ್ನ ತಾಯಿ ನೆನೆದು, ಕ್ಷಣಿಕ ಜೀವನ ಎಂದಿದ್ದ ಸುಶಾಂತ್ ಸಿಂಗ್ ರಜಪೂತ್

ಆತ್ಮಹತ್ಯೆ ತಡೆಗಟ್ಟುವಲ್ಲಿ ನಮ್ಮ ಪಾತ್ರವೇನು..?

  • ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ, ಸಾವಿನ ಕುರಿತು ಮಾತಾಡುತ್ತಿದ್ದಾನೆಂದರೆ ಅವರನ್ನು ಒಂದೆರಡು ಗಂಟೆ, ಒಂದೆರಡು ದಿನಗಳ ಮಟ್ಟಿಗೆ ನಮ್ಮ ಆಪ್ತ ಪರಿಧಿಯೊಳಗೆ ಇಟ್ಟುಕೊಳ್ಳುವುದು.
  • ಖಿನ್ನತೆಯಲ್ಲಿರುವವರಿಗೆ ಆಪ್ತ ಸಮಾಲೋಚನೆ ಕೊಡಿಸಲು ಪ್ರಯತ್ನಿಸುವುದು.
  • ಅತಿಯಾಗಿ ಒಂಟಿತನ ಬಯಸುವವರ ಮೇಲೆ ನಿಗಾ ಇಡುವುದು
  • ಇನ್ನೊಬ್ಬರ ಸಮಸ್ಯೆಗೆ, ನೋವಿಗೆ ಕಿವಿಯಾಗುವ ಕನಿಷ್ಠ ಹೃದಯವಂತಿಕೆ ತೋರಿಸೋದು
  • ಸಮಸ್ಯೆ ತಿಳಿದು, ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡುವುದು. ಚಿಕಿತ್ಸೆ ಪಡೆಯಲು ಅವರನ್ನು ಓಲೈಸುವುದು.
  • ಜೀವನದಲ್ಲಿ ಗೆಲ್ಲುವುದೇ ಮುಖ್ಯವಲ್ಲ ಎಂಬುದನ್ನು ಅರ್ಥ ಮಾಡಿಸಿದರೇ ಆತ್ಮಹತ್ಯೆಯೆಂಬ ಯೋಚನೆಯಿಂದ ಮುಕ್ಕಾಲು ಭಾಗ ಗೆದ್ದಂತೆಯೇ.
  • ಜೀವದ ಮಹತ್ವವನ್ನು ಅರ್ಥ ಮಾಡಿಸುವುದು.
  • ತನ್ನ ಕುಟುಂಬ, ಸ್ನೇಹ ಬಳಗದ ಜೊತೆ ಆದಷ್ಟು ಸಂಪರ್ಕದಲ್ಲಿರುವಂತೆ ಮಾಡುವುದು
  • ಉತ್ತಮ ಹವ್ಯಾಸಗಳನ್ನು, ಸೃಜನಾತ್ಮಕ ಚಟುವಟಿಕೆಗಳನ್ನು ಪರಿಚಯಿಸುವುದು. ಇದರಿಂದ ಮನಸ್ಸು ಬೇರೆಡೆಗೆ ಹರಿಯುತ್ತದೆ.
  • ಆತ್ಮಹತ್ಯೆ ಬಗ್ಗೆ ತಿಳಿದಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು.

ಮನುಷ್ಯ ತನ್ನ ಜೀವಿತಾವಧಿಯಲ್ಲಿ ಕನಿಷ್ಠ 5 ಬಾರಿಯಾದರೂ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಾನೆ ಎಂದು ಸಂಶೋಧನೆಯೊಂದು ತಿಳಿಸುತ್ತದೆ. ಇಂದಿನ ಯುಗದಲ್ಲಿ ಮನುಷ್ಯ ಸಂಬಂಧಗಳಿಂದ ಕೊಂಡಿ ಕಳಚಿಕೊಂಡು ಓಡುತ್ತಿರುವವರಿಗೆ ಈ ದಿನದ ಅಗತ್ಯತೆಯ ಅರಿವಾಗಬೇಕಿದೆ.

ತನ್ನ ಹುಟ್ಟು ತನ್ನ ಆಯ್ಕೆ ಆಗದಿದ್ದಾಗ ಸಾವನ್ನು ತನ್ನಿಷ್ಟದಂತೆ ಆಯ್ಕೆ ಮಾಡುವುದು ಅಪರಾಧವೂ, ಪ್ರಕೃತಿಗೆ ವಿರೋದ್ಧವೂ ಹೌದು. ಹೀಗಾಗಿಯೇ ಆತ್ಮಹತ್ಯೆಯನ್ನು ಅಪರಾಧ ಎಂದು ಪರಿಗಣಿಸಲಾಗಿದೆ. ಆತ್ಮಹತ್ಯೆಗೆ ಮುಂದಾಗುವ ವ್ಯಕ್ತಿ ಯಾವುದಾದರೂ ರೂಪದಲ್ಲಿ ಸೂಚನೆ ನೀಡಿಯೇ ಇರುತ್ತಾನೆ. ಅದನ್ನು ಗಮನಿಸುವ ತಾಳ್ಮೆ, ಸೂಕ್ಷ ಮನಸ್ಸು, ತಮ್ಮ ಸುತ್ತಲಿನವರ ಬಗ್ಗೆ ಕೊಂಚ ಕಾಳಜಿ ಇದ್ದರೂ ಸಾಕು ಅದೇಷ್ಟೋ ಆತ್ಮಹತ್ಯೆಗಳು ತಪ್ಪುತ್ತವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...