Homeಮುಖಪುಟಕ್ರಿಮಿನಲ್ ಮಾನನಷ್ಟ ಪ್ರಕರಣ: ಕುಸ್ತಿಪಟು ಬಜರಂಗ್ ಪುನಿಯಾಗೆ ಜಾಮೀನು

ಕ್ರಿಮಿನಲ್ ಮಾನನಷ್ಟ ಪ್ರಕರಣ: ಕುಸ್ತಿಪಟು ಬಜರಂಗ್ ಪುನಿಯಾಗೆ ಜಾಮೀನು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಹಾಗೂ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥರಾಗಿರುವ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧದ ಪ್ರತಿಭಟನೆಯ ವೇಳೆ ತಮ್ಮ ಪ್ರತಿಷ್ಠೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಕೋಚ್‌ ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯಲ್ಲಿ ಕುಸ್ತಿಪಟು ಬಜರಂಗ್‌ ಪುನಿಯಾ ಅವರಿಗೆ ಗುರುವಾರ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕುಸ್ತಿಪಟುಗಳ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡುವ ವೇಳೆ ಭಜರಂಗ್ ಅವರು, ದಹಿಯಾ ಸ್ವತಃ ಅತ್ಯಾಚಾರ ಪ್ರಕರಣವನ್ನು ಎದುರಿಸುತ್ತಿರುವ ಕಾರಣ ಅವರಿಗೆ ಆಂದೋಲನವನ್ನು ವಿರೋಧಿಸುವ ಯಾವುದೇ ನೈತಿಕತೆ ಇಲ್ಲ” ಎಂದು ಹೇಳಿದ್ದರು.

ಈ ಹೇಳಿಕೆಯ ನಂತರ ದಹಿಯಾ ಅವರು, ನ್ಯಾಯಾಲಯದ ಮೊರೆ ಹೋಗಿದ್ದರು. ಈ ವಿಚಾರವಾಗಿ ಬಜರಂಗ್‌ಗೆ ಸಮನ್ಸ್ ನೀಡಲಾಗಿತ್ತು.

”ಭಜರಂಗ್ ಅವರು ಹಾಜರಾತಿಯಿಂದ ವಿನಾಯಿತಿ ಕೋರಿದ್ದರು ಮತ್ತು ಮೊದಲ ಮೂರು ವಿಚಾರಣೆಗಳನ್ನು ತಪ್ಪಿಸಿಕೊಂಡರು. ಅವರು ಇಂದು ದೈಹಿಕವಾಗಿ ಹಾಜರಾಗಿದ್ದರು ಮತ್ತು ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಮುಂದಿನ ವಿಚಾರಣೆಯ ಪ್ರಕ್ರಿಯೆಗಳು ದಿನಾಂಕ ಮಾರ್ಚ್ 5 ಆಗಿದೆ” ಎಂದು ದಹಿಯಾ ಪರ ವಕೀಲ ರಾಜೇಶ್ ಕುಮಾರ್ ರೆಕ್ಸ್ವಾಲ್ ಅವರು ಪಿಟಿಐಗೆ ತಿಳಿಸಿದರು.

”ಭಜರಂಗ್ ಹೇಳಿದ ಅತ್ಯಾಚಾರ ಪ್ರಕರಣದಲ್ಲಿ ನಾನು ಖುಲಾಸೆಗೊಂಡಿದ್ದೇನೆ. ಅವರ ಹೇಳಿಕೆಗಳು ನನ್ನ ಹೆಸರಿಗೆ ಕಳಂಕ ತಂದಿದೆ” ಎಂದು ದಹಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.

ಕುಸ್ತಿಪಟುಗಳಾದ ಬಜರಂಗ್, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಹಲವು ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದರು.

ಈ ವಿಚಾರದಲ್ಲಿ ಇದೀಗ ನ್ಯಾಯಾಲಯದ ಮೊಕದ್ದಮೆ ಎದುರಿಸುತ್ತಿರುವ ಸಿಂಗ್, ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಟಿಕೆಟ್‌ ರದ್ದುಗೊಳಿಸುವ ಧೈರ್ಯ ಯಾರಿಗಿದೆ?’: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read