Homeಮುಖಪುಟಉದ್ಘಾಟನಾ ದಿನದಂದೇ ಹೊಸ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲು ಕುಸ್ತಿಪಟುಗಳ ನಿರ್ಧಾರ

ಉದ್ಘಾಟನಾ ದಿನದಂದೇ ಹೊಸ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲು ಕುಸ್ತಿಪಟುಗಳ ನಿರ್ಧಾರ

- Advertisement -
- Advertisement -

ಮೇ 28 ರಂದು ಹೊಸ ಸಂಸತ್‌ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಅದೇ ದಿನದಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಹೊಸ ಸಂಸತ್‌ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು ಸಾಕ್ಷಿ ಮಲಿಕ್ ಅವರು, ”ನಾವು ಮೇ 28ರಂದು ಹೊಸ ಸಂಸತ್ ಭವನದ ಮುಂದೆ ‘ಮಹಿಳಾ ಸಮ್ಮಾನ್ ಮಹಾಪಂಚಾಯತ್’ ನಡೆಸುತ್ತಿದ್ದೇವೆ. ನಾವು ಶಾಂತಿಯುತವಾಗಿ ಇರುತ್ತೇವೆ ಮತ್ತು ಯಾವುದೇ ರೀತಿಯ ಹಿಂಸಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ನಾವು ಖಚಿತಪಡಿಸುತ್ತೇವೆ ” ಎಂದು ಹೇಳಿದ್ದಾರೆ.

ಅಪ್ರಾಪ್ತ ವಯಸ್ಕ ಮಹಿಳೆ ಸೇರಿದಂತೆ ಏಳು ಮಹಿಳಾ ಕ್ರಿಡಾಪಟುಗಳು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಸಂತ್ರಸ್ತ ಕ್ರಿಡಾಪಟುಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ದೇಶದ ಪ್ರಮುಖ ಕುಸ್ತಿಪಟುಗಳು ಒಂದು ತಿಂಗಳಿನಿಂದ ಜಂತರ್ ಮಂತರ್‌ನಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ಒಂದು ತಿಂಗಳಲ್ಲಿ, ಪ್ರತಿಭಟನಾ ನಿರತ ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧದ ತಮ್ಮ ಚಳುವಳಿಗೆ ಬೆಂಬಲವನ್ನು ಪಡೆಯಲು ರಾಜ್‌ಘಾಟ್ ಬಾಂಗ್ಲಾ ಸಾಹಿದ್ ಗುರುದ್ವಾರ ಸೇರಿದಂತೆ ರಾಷ್ಟ್ರ ರಾಜಧಾನಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಕುಸ್ತಿಪಟುಗಳ ಆಂದೋಲನ ಮೇ 23 ರಂದು ಒಂದು ತಿಂಗಳು ಪೂರ್ಣಗೊಂಡಿತು. ಆ ದಿನ ಕ್ರಿಡಾಪಟುಗಳು ಹಾಗೂ ಬೆಂಬಲ ನೀಡುತ್ತಿರುವವರು ಕ್ಯಾಂಡಲ್‌ಲೈಟ್ ಮೆರವಣಿಗೆಯನ್ನು ಸಹ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರ ಭಾನುವಾರದಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಹೊಸ ಸಂಸತ್ತಿನ ಕಟ್ಟಡದ ಹೊರಗೆ ಪ್ರತಿಭಟನೆ ನಡೆಸಲಾಗುತ್ತದೆ.

ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುವ ಮೂಲಕ WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಹೋರಾಟದಲ್ಲಿ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಧರಣಿ ಆರಂಭಿಸಿ ತಿಂಗಳು ಕಳೆದರು ಇನ್ನೂ ಸಿಗದ ನ್ಯಾಯ!: ಕುಸ್ತಿಪಟುಗಳ ಪ್ರತಿಭಟನೆಗೆ ವ್ಯಾಪಕ ಬೆಂಬಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...