Homeಮುಖಪುಟಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

ಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

- Advertisement -
- Advertisement -

ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಭೆಯನ್ನು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಮುಂದೆ ಕುಸ್ತಿಪಟುಗಳ 5 ಬೇಡಿಕೆಗಳನ್ನು ಇಟ್ಟಿದ್ದಾರೆ. ಅದರಲ್ಲಿ ಒಂದು ಮಹಿಳಾ ಫೆಡರೇಶನ್ ಮುಖ್ಯಸ್ಥರು ಬೇಕು ಎಂದು ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ನಿನ್ನೆ ರಾತ್ರಿ 12:47 ಕ್ಕೆ ಟ್ವೀಟ್ ಮಾಡಿದ್ದು, ”ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ” ಎಂದು ಹೇಳಿದ್ದರು.

ಅದರಂತೆ ಇಂದು (ಬುಧವಾರ) ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಬೇಕೆಂದು ಬಯಸುತ್ತಾರೆ. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಪ್ರತಿಭಟನೆಯ ಪ್ರಮುಖ ಮುಖವಾದ ವಿನೇಶ್ ಫೋಗಟ್ ಅವರು ಪೂರ್ವ ನಿಗದಿತ ‘ಪಂಚಾಯತ್’ ನಲ್ಲಿ ಪಾಲ್ಗೊಳ್ಳಲು ಹರಿಯಾಣದ ಬಲಾಲಿ ಗ್ರಾಮದಲ್ಲಿರುವ ಕಾರಣ ಸಭೆಗೆ ಹಾಜರಾಗುತ್ತಿಲ್ಲ.

ಐದು ದಿನಗಳಲ್ಲಿ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವೆ ನಡೆದ ಎರಡನೇ ಸಭೆಯಾಗಿದೆ. ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳಲು ಕುಸ್ತಿಪಟುಗಳು ಶನಿವಾರ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸರ್ಕಾರ ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳ ನಡುವಿನ ಎರಡನೇ ಸುತ್ತಿನ ಸಭೆ ಇದಾಗಿದೆ. ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ ಠಾಕೂರ್ ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಬಿಕ್ಕಟ್ಟು ಮುರಿಯಲು ಸಭೆ ಕರೆದಿದ್ದರು.

ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ, ಏಳು ಮಹಿಳಾ ಕುಸ್ತಿಪಟುಗಳಿರ್ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಶನಿವಾರ ತಡ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಕ್ರೀಡಾಪಟುಗಳು ಮಾಧ್ಯಮದವರೊಂದಿಗೆ ಯಾವುದೇ ಮಾತುಗಳನ್ನಾಡಲಿಲ್ಲ. ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು. ಸರ್ಕಾರದೊಂದಿಗೆ ಕ್ರೀಡಾಪಟುಗಳೊಂದಿಗೆ ಡೀಲ್ ಮಾಡಿಕೊಂಡಿದ್ದಾರೆ ಎನ್ನುವ ಮಾಧ್ಯಮವರದಿಗಳು ಪ್ರಸಾರಗೊಂಡವು.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಅವರು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ. ”ಅಮಿತ್ ಶಾ ಅವರೊಂದಿಗೆ ಕುಸ್ತಿಪಟುಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಪುನಿಯಾ ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಪ್ರತಿಭಟನಾ ಚಳವಳಿಯು ಸತ್ತು ಹೋಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ” ಎಂದು ಪುನಿಯಾ ಹೇಳಿದರು.

”ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದೊಂದಿಗೆ ‘ಡೀಲ್’ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಾವು ಸಭೆಯಲ್ಲಿನ ಚಚೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸರ್ಕಾರ ಕೇಳಿಕೊಂಡಿತ್ತು. ಹಾಗಾಗಿ ನಾವುಗಳು ಮಾತನಾಡಿರಲಿಲ್ಲ. ಆದರೆ, ಆನಂತರ ಸರ್ಕಾರದೊಳಗಿನವರೇ ಚರ್ಚೆಯ ವಿಚಾರವನ್ನು ಸೋರಿಕೆ ಮಾಡಿದ್ದಾರೆ” ಎಂದು ಪುನಿಯಾ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಅವರ ಬೇಡಿಕೆಗಳಿಗೆ ಸರ್ಕಾರವು ಮನ್ನಣೆ ನೀಡುತ್ತಿಲ್ಲ ಎಂದು ಪುನಿಯಾ ಅಸಮಧಾನ ಹೊರಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...