Homeಮುಖಪುಟಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಕುಸ್ತಿಪಟುಗಳು ಎರಡು ದಿನಗಳಿಂದ ಮತ್ತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಇದೀಗ ಪ್ರತಿಭಟನಾನಿರತರನ್ನು ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಪ್ರತಿನಿಧಿಗಳು ಭೇಟಿ ಮಾಡಿ ಸಂವಾದ ನಡೆಸಿದ್ದಾರೆ.

ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಎಸ್‌ಎಐ ಅಧಿಕಾರಿಯೊಬ್ಬರು ”ನಾನು ಕುಸ್ತಿಪಟುಗಳನ್ನು ಭೇಟಿ ಮಾಡಲು ಮತ್ತು ಅವರ ಮಾತುಗಳನ್ನು ಕೇಳಲು ಬಂದಿದ್ದೇನೆ. ಅವರ ಬೇಡಿಕೆಗಳ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಜನವರಿಯಲ್ಲಿ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು, ಡಬ್ಲ್ಯುಎಫ್‌ಐ ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ತರಬೇತುದಾರರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ‘ಮೇಲ್ವಿಚಾರಣಾ ಸಮಿತಿ’ ರಚನೆ ಮಾಡಲು ಘೋಷಿಸಿತ್ತು.

ಈ ವರ್ಷದ ಆರಂಭದಲ್ಲಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಆದರೆ ಈ ಬಾರಿ ಕುಸ್ತಿಪಟುಗಳು ಮಾಡಿರುವ ಆರೋಪಗಳನ್ನು ಸಮಿತಿಯು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತದೆ ಎಂದು ಭರವಸೆ ನೀಡಿದ ನಂತರ ಮತ್ತು ಬ್ರಿಜ್ ಭೂಷಣ್ ವಿರುದ್ಧ ಪೊಲೀಸರು ದೂರು ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಿಂದ ಹೊರಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

ಈ ಬಗ್ಗೆ ಮಾತನಾಡಿದ್ದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದರು.

”ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.

”ಸುಳ್ಳು ಆಶ್ವಾಸನೆ”ಯಿಂದ ನಾವು ಜನವರಿಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

”ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಫುಟ್‌ಪಾತ್‌ನಲ್ಲಿ ರಾತ್ರಿ ಕಳೆದ ನಂತರ ಫೋಗಟ್ ಹೇಳಿದರು.

”ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ದೂರಿನ ಮೇರೆಗೆ ಜನವರಿಯಲ್ಲಿ ಕ್ರೀಡಾ ಸಚಿವಾಲಯವು ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಆದರೆ ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹತಾಶೆ ವ್ಯಕ್ತಪಡಿಸಿದರು.

”ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ದೂರುದಾರರ ಹೆಸರನ್ನು ಸೋರಿಕೆ ಮಾಡಬಾರದು ಏಕೆಂದರೆ ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಇದ್ದಾರೆ” ಎಂದು ಅವರು ಹೇಳಿದರು.

ಸರ್ಕಾರದ ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ, ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...