Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

- Advertisement -
- Advertisement -

ಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿ ಕುಸ್ತಿಪಟುಗಳ ಗುಂಪು ಪ್ರತಿಭಟನೆ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರದ ನಡೆ ಬಗ್ಗೆ ಹರಿಯಾಣದ ಬಿಜೆಪಿ ಘಟಕದಲ್ಲಿ ಅಸಮಾಧಾನ ಮೂಡಿದೆ.

ಬಿಜೆಪಿ ಸಂಸದ ಮತ್ತು ಭಾರತೀಯ ಫೆಡರೇಶ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕಳದ ಆರೋಪಗಳು ಕೇಳಿಬಂದಿರುವ ಹಿನ್ನೆಲೆ ಪ್ರತಿಭಟನೆಗಳನ್ನು ಮಾಡಲಾಗುತ್ತಿದೆ. ಈ ಆರೋಪಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿ ಹರ್ಯಾಣದ ಮೂವರು ಪ್ರಮುಖ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ  ಅವರು ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದಾರೆ.

ಪ್ರತಿಭಟನಾಕಾರರು ಭಾನುವಾರ ಹೊಸ ಸಂಸತ್ತಿನ ಕಟ್ಟಡದತ್ತ ಮೆರವಣಿಗೆ ಮಾಡಲು ಪ್ರಯತ್ನಿಸಿದಾಗ ಅವರನ್ನು ತಡೆದು ಬಂಧನ ಮಾಡಲಾಯಿತು. ಮುಂದಿನ ವರ್ಷ ಲೋಕಸಭೆ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಈ ಘಟನೆಯು ಬಿಜೆಪಿಯೊಳಗೆ ಅಸಮಾಧಾನವನ್ನು ಉಂಟುಮಾಡಿದೆ. ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಮತ್ತು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಸೇರಿದಂತೆ ರಾಜ್ಯದ ಕೆಲವು ನಾಯಕರಿಂದ ಅನಿರೀಕ್ಷಿತ ಬೆಂಬಲವನ್ನು ಗಳಿಸಿದೆ.

”ನಮ್ಮ ಕುಸ್ತಿಪಟುಗಳು ಒಲಂಪಿಕ್ಸ್, ಸಿಡಬ್ಲ್ಯೂಜಿ, ಏಷ್ಯನ್ ಕ್ರೀಡಾಕೂಟಗಳಲ್ಲಿ ತಮ್ಮ ಜೀವಮಾನದ ಕಠಿಣ ಪರಿಶ್ರಮದಿಂದ ಗಳಿಸಿದ ಪದಕಗಳನ್ನು ಪವಿತ್ರ ಗಂಗೆಯಲ್ಲಿ ಎಸೆಯಲು ಮುಂದಾಗಿದ್ದು, ಅವರ ನೋವು ಮತ್ತು ಅಸಹಾಯಕತೆಯನ್ನು ತೋರಿಸುತ್ತದೆ. ಇದು ಸಂಪೂರ್ಣವಾಗಿ ಹೃದಯವಿದ್ರಾವಕ” ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳಿಗೆ ಹೆಚ್ಚುತ್ತಿರುವ ಬೆಂಬಲದ ಹೊರತಾಗಿಯೂ, ಹರಿಯಾಣ ಬಿಜೆಪಿ ನಾಯಕತ್ವವು ಈ ವಿಷಯದ ಬಗ್ಗೆ ಅಧಿಕೃತವಾಗಿ ನಿಲುವು ತಾಳಬೇಕಿದೆ. ಆದರೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಧ್ಯಪ್ರವೇಶ ಮಾಡದೇ ದೂರವಿದ್ದು ಉಳಿದಿದ್ದಾರೆ. ಅವರು, ”ಈ ಸಮಸ್ಯೆ ಹರಿಯಾಣಕ್ಕೆ ಸಂಬಂಧಿಸಿಲ್ಲ, ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದೆ” ಎಂದು ಹೇಳಿದ್ದಾರೆ ಎಂದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಬೃಹತ್ ಪ್ರತಿಭಟನೆಗೆ ರಾಜ್ಯದ ಪ್ರಬಲ ರೈತ ಸಂಘಗಳು ಬೆಂಬಲ ನೀಡಿರುವುದರಿಂದ ಕುಸ್ತಿಪಟುಗಳ ಪ್ರತಿಭಟನೆ ಬಲಪಡೆದಿದೆ. ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿ ಸೇರಿದಂತೆ ವಿರೋಧ ಪಕ್ಷಗಳು ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿವೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಇಂದು ರೈತ ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ ‘ಮಹಾಪಂಚಾಯತ್’

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಈ ವಿಷಯದ ಬಗ್ಗೆ ಧ್ವನಿಯೆತ್ತಿದ್ದಾರೆ, ಕುಸ್ತಿಪಟುಗಳನ್ನು ಭೇಟಿ ಮಾಡಿದ್ದಾರೆ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ, ಪಕ್ಷದ ವಿಶ್ವಾಸಾರ್ಹತೆ ಅಪಾಯದಲ್ಲಿದೆ ಎಂದು ಒತ್ತಿಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಷ್ಟು ಬೇಗ ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಬೇಕೆಂದು ಅವರು ಕರೆ ನೀಡಿದರು ಮತ್ತು ಕ್ರೀಡಾ ಒಕ್ಕೂಟಗಳನ್ನು ನಡೆಸುವ ರೀತಿಯಲ್ಲಿ ಸುಧಾರಣೆಗಳ ಅಗತ್ಯವನ್ನು ಒತ್ತಿ ಹೇಳಿದರು.

ಹರ್ಯಾಣ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧನಕರ್ ಅವರು, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದರು. ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು ಎಂದು ಒತ್ತಿ ಹೇಳಿದರು.

ಠಾಕೂರ್ ಅವರು ಕುಸ್ತಿಪಟುಗಳಿಗೆ ದೆಹಲಿ ಪೊಲೀಸ್ ತನಿಖೆಯಲ್ಲಿ ವಿಶ್ವಾಸವಿಡಿ, ತನಿಖೆಯ ವರದಿ ಹೊರುವವರೆಗೂ ”ತಾಳ್ಮೆಯಿಂದಿರಿ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...