Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ...

ಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ

- Advertisement -
- Advertisement -

ಕಳೆದ ಒಂದು ತಿಂಗಳಿಂದ ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಜ್ಯರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಧ್ಯ ಅವರ ಪ್ರತಿಭಟನೆ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯತ್ತ ರೈತರು ಮುನ್ನುಗ್ಗುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿರುವ ದೆಹಲಿ ಪೊಲೀಸರು ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ದೇಶದಲ್ಲಿ ಈ ಹಿಂದೆ ರೈತರ ಹೋರಾಟವನ್ನು ಈ ಕ್ರೀಡಾಪಟುಗಳ ಪ್ರತಿಭಟನೆಯು ನೆನಪಿಸುತ್ತಿದೆ.

ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳು ಮಾತನಾಡಿದ್ದು, ”ಭದ್ರತಾ ಸಿಬ್ಬಂದಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

”ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಾವು ದೆಹಲಿಯ ಗಡಿಗಳಲ್ಲಿ ಹೆಚ್ಚುವರಿ ಗುಂಪುಗಳನ್ನು ಸಹ ನಿಯೋಜಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ. ಇನ್ನು ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಮಾತೃಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಮಂಗಳವಾರ ಜೂನ್ 1 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.

ಈ ಪ್ರತಿಭಟನೆಯಲ್ಲಿ ಟ್ರೇಡ್ ಯೂನಿಯನ್‌ಗಳು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಮತ್ತು ಬುದ್ಧಿಜೀವಿಗಳು ಸೇರಿದಂತೆ ಇತರ ಎಲ್ಲಾ ವಿಭಾಗಗಳನ್ನು ಭಾಗವಹಿಸಬೇಕು ಎಂದು ಅದು ಹೇಳಿದೆ.

ಏಪ್ರಿಲ್ 23 ರಿಂದ ಕುಸ್ತಿಪಟುಗಳು ಆರೋಪಿ ಸಿಂಗ್ ಬಂಧನಕ್ಕೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅದೇ ದಿನ ಉದ್ಘಾಟನೆಗೊಂಡ ಹೊಸ ಸಂಸತ್ ಭವನದ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದ ನಂತರ ಭಾನುವಾರ ದೆಹಲಿ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...