Homeಮುಖಪುಟಚಂದ್ರಶೇಖರ್ ಆಜಾದ್‌ರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಕುಸ್ತಿಪಟುಗಳು: ಆರೋಪಿಗಳ ಬಂಧನಕ್ಕೆ ಒತ್ತಾಯ

ಚಂದ್ರಶೇಖರ್ ಆಜಾದ್‌ರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಕುಸ್ತಿಪಟುಗಳು: ಆರೋಪಿಗಳ ಬಂಧನಕ್ಕೆ ಒತ್ತಾಯ

- Advertisement -
- Advertisement -

ಆಜಾದ್ ಸಮಾಜ್ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಗುರುವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.

ಭೆಟಿ ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪುನಿಯಾ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ”ಇಂದು ಸತ್ಯಕ್ಕಾಗಿ ಹೋರಾಡುವವರ ಮೇಲೆ ಮಾತ್ರ ದಾಳಿ ಮಾಡಲಾಗುತ್ತಿದೆ. ದಾಳಿಕೋರರನ್ನು ಆದಷ್ಟು ಬೇಗ ಬಂಧಿಸಬೇಕು ಎಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ” ಎಂದರು.

”ಚಂದ್ರಶೇಖರ್ ಯಾವುದೇ ಒಂದು ಸಮಾಜದ ನಾಯಕನಲ್ಲ, ಅವರು ಇಡೀ ಸಮಾಜದ ನಾಯಕ. ಅದು ರೈತ ಚಳವಳಿಯಾಗಲಿ ಅಥವಾ ಕುಸ್ತಿಪಟುಗಳ ಹೋರಾಟವೇ ಆಗಿರಲಿ, ಅವರು ಸತ್ಯಕ್ಕಾಗಿ ಹೋರಾಡುವ ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ನಿಂತಿದ್ದಾರೆ. ಚಂದ್ರಶೇಖರ್ ಅವರ ಪ್ರತಿಭಟನೆಗೆ ಸಂಪೂರ್ಣ ಬೆಂಬಲವಿದೆ” ಎಂದು ಪುನಿಯಾ ಹೇಳಿದ್ದಾರೆ.

ಚಂದ್ರಶೇಖರ್ ಮೇಲಿನ ಹಲ್ಲೆಯನ್ನು ಖಂಡಿಸಿದ ಸಾಕ್ಷಿ ಮಲಿಕ್, ”ಭೀಮ್ ಆರ್ಮಿ ಮುಖ್ಯಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದು ಆಘಾತವಾಯಿತು. ಇದೀಗ ನಾವು ಅವರನ್ನು ಭೇಟಿಯಾಗಲು ಇಲ್ಲಿಗೆ ಬಂದಿದ್ದೇವೆ. ಇದು ನಾಚಿಕೆಗೇಡಿನ ಸಂಗತಿ. ಪೊಲೀಸರು ಕೂಡಲೇ ದಾಳಿಕೋರರನ್ನು ಗುರುತಿಸಿ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಚಂದ್ರಶೇಖರ್ ಆಜಾದ್ ಕೊಲೆಗೆ ಯತ್ನ

ಬುಧವಾರ ಸಂಜೆ ಸಹರಾನ್‌ಪುರ ಜಿಲ್ಲೆಯ ದಿಯೋಬಂದ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡು ಹಾರಿಸಿದ್ದು ಈ ದಾಳಿಯಲ್ಲಿ ಚಂದ್ರಶೇಖರ್ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶ ಪೊಲೀಸರು ಕೊಲೆ ಯತ್ನ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲೆಯ ಸಹರಾನ್‌ಪುರದ ದಿಯೋಬಂದ್ ಪ್ರದೇಶದಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಅಜ್ಞಾತ ದುಷ್ಕರ್ಮಿಗಳು ಆಜಾದ್ ಮೇಲೆ ಗುಂಡು ಹಾರಿಸಿದಾಗ ಆಜಾದ್ ಸಮಾಜ ಪಕ್ಷದ ಸದಸ್ಯ ಮನೀಶ್ ವಾಹನ ಚಲಾಯಿಸುತ್ತಿದ್ದರು.

ಆಜಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ದೇವಬಂದ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ನಂತರ ಅವರನ್ನು ಸಹರಾನ್‌ಪುರದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಜಾದ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಎಸ್‌ಯುವಿಯಲ್ಲಿ ಹಿಂತಿರುಗುತ್ತಿದ್ದಾಗ ದೇವಬಂದ್‌ನ ಗಾಂಧಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಆಜಾದ್, “ನನಗೆ ಸರಿಯಾಗಿ ನೆನಪಿಲ್ಲ ಆದರೆ ನನ್ನೊಟ್ಟಿಗೆ ಇದ್ದವರು ಅವರನ್ನ ಗುರುತಿಸಿದ್ದಾರೆ. ಅವರ ಕಾರು ಸಹರಾನ್‌ಪುರದ ಕಡೆಗೆ ಹೊರಟಿತು. ನಾವು ಯು-ಟರ್ನ್ ತೆಗೆದುಕೊಂಡೆವು. ಘಟನೆ ಸಂಭವಿಸಿದಾಗ ನನ್ನ ಕಿರಿಯ ಸಹೋದರ ಸೇರಿದಂತೆ ನಾವು ಐವರು ಕಾರಿನಲ್ಲಿದ್ದೆವು” ಎಂದಿದ್ದಾರೆ.

ದಾಳಿಕೋರರು ಕಾರಿನಲ್ಲಿದ್ದರು. ಅವರು ಬಲಭಾಗದಿಂದ ಬಂದು ಆಜಾದ್ ಅವರ ಎಸ್‌ಯುವಿ ಮೇಲೆ ಗುಂಡು ಹಾರಿಸಿದರು. ಗುಂಡು ಅವರ ಹೊಟ್ಟೆಯನ್ನು ತೂರಿಕೊಂಡಿದೆ ಎಂದು ಸಹರಾನ್‌ಪುರ (ನಗರ) ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...