Homeಮುಖಪುಟಕೇಂದ್ರದ 'ಸಹಯೋಗ್' ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

ಕೇಂದ್ರದ ‘ಸಹಯೋಗ್’ ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

- Advertisement -
- Advertisement -

ಕೇಂದ್ರದ ‘ಸಹಯೋಗ್’ ಪೋರ್ಟಲ್ ವಿರುದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್ ಹೇಳಿದೆ.

ಹೈಕೋರ್ಟ್ ಆದೇಶವನ್ನು ಒಪ್ಪುವುದಿಲ್ಲ ಎಂದು ಗೌರಯುತವಾಗಿ ಹೇಳುತ್ತಿದ್ದೇವೆ. ಇದರ ವಿರುದ್ದ ಮೇಲ್ಮನವಿಯ ಸಲ್ಲಿಸುತ್ತೇವೆ ಎಂದು ಎಕ್ಸ್‌ ಕಂಪನಿಯ ಗ್ಲೋಬಲ್ ಅಫೇರ್ಸ್ ವಿಭಾಗ ಸೋಮವಾರ ತಿಳಿಸಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿತ್ತು.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದರು.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಎಕ್ಸ್ ಕಂಪನಿಯು ಕರ್ನಾಟಕ ಹೈಕೋರ್ಟ್ ತೀರ್ಪು ಬಾಂಬೆ ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಬಾಂಬೆ ಹೈಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ ಸ್ಥಾಪಿಸಿದ್ದ ‘ಫ್ಯಾಕ್ಟ್ ಚೆಕ್ ಯೂನಿಟ್’ ಅನ್ನು ರದ್ದುಗೊಳಿಸಿತ್ತು.

ವಿದೇಶಿ ಕಂಪನಿಯೊಂದು ಭಾರತದ ಸಂವಿಧಾನದ ಆರ್ಟಿಕಲ್ 19(1)(a) ಅಡಿ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ಪಡೆಯಲು ಸಾಧ್ಯವಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಅಭಿಪ್ರಾಯವನ್ನು ಎಕ್ಸ್ ಒಪ್ಪಿಕೊಂಡಿಲ್ಲ.

ಹೈಕೋರ್ಟ್ ಸಂವಿಧಾನದ 19 ನೇ ವಿಧಿಯಡಿ ವಿದೇಶಿ ಕಂಪನಿಗಳು ಮೂಲಭೂತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸಲು ಸಾಧ್ಯವಿಲ್ಲ ಎಂದಿದೆ.

ಆ ರೀತಿಯ ಹಕ್ಕುಗಳು ಭಾರತದ ನಾಗರಿಕರಿಗೆ ಮಾತ್ರ ಮೀಸಲಾಗಿದ್ದುಎಕ್ಸ್ ಕಾರ್ಪ್ ರೀತಿಯ ಮಧ್ಯಸ್ಥ ಸಂಸ್ಥೆಗಳು ದೇಶದಲ್ಲಿ ಕಾರ್ಯನಿರ್ವಹಿಸಲು ಬಯಸಿದರೆ ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತೀರ್ಪು ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 79(3)(ಬಿ) ಅಡಿಯಲ್ಲಿ ಮಾಹಿತಿ ನಿರ್ಬಂಧಿಸುವ ಆದೇಶಗಳನ್ನು ಹೊರಡಿಸಲು ಸಹಯೋಗ್ ಪೋರ್ಟಲ್ ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಐಟಿ ಕಾಯ್ದೆಯ ಸೆಕ್ಷನ್ 69ಎ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ನೀಡಿದ ತೀರ್ಪಿನಂತೆ ಕಡ್ಡಾಯಗೊಳಿಸಲಾದ ಮಾರ್ಗಸೂಚಿ ಪಾಲಿಸಲು ಅಡ್ಡಿಯಾಗುತ್ತದೆ ಎಂದು ವಾದಿಸಿ ಎಕ್ಸ್ ಕಾರ್ಪ್ ನ್ಯಾಯಾಲಯದ ಮೆಟ್ಟಿಲೇರಿತ್ತು.

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಪ್ರಕಟವಾದ ಟ್ವೀಟ್‌ಗಳನ್ನು ತೆಗೆಯುವಂತೆ ರೈಲ್ವೆ ಸಚಿವಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.

ಹೀಗಾಗಿ, ಸೆಕ್ಷನ್ 79(3)(b) ಮಾಹಿತಿ ನಿರ್ಬಂಧ ಆದೇಶ ಮಾಡಲು ಸರ್ಕಾರಕ್ಕೆ ಅವಕಾಶವಿಲ್ಲ. ಇದು ವಿಶೇಷವಾಗಿ ಸೆಕ್ಷನ್ 69Aರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಆದೇಶಿಸಬೇಕು ಎಂದು ಎಕ್ಸ್ ಕೋರಿತ್ತು.

ತೀರ್ಪಿನ ಮೂಲಕ ನ್ಯಾಯಾಲಯ ನಿಸ್ಸಂದಿಗ್ಧವಾಗಿ 19ನೇ ವಿಧಿಯಡಿ ಒದಗಿಸಲಾದ ಹಕ್ಕುಗಳನ್ನು ವಿದೇಶಿಯರಿಗೆ ನೀಡಲಾಗದು ಎಂದಿದೆ. 19ನೇ ವಿಧಿಯ ಮೂಲಕ ದೇಶದ ಕಾನೂನನ್ನು ಪ್ರಶ್ನಿಸಲು ಯತ್ನಿಸುವುದನ್ನು ಸಹಿಸಲಾಗದು ಎಂದಿರುವ ತೀರ್ಪು, ಸಂವಿಧಾನದ 19(1)(ಎ) ವಿಧಿಯಡಿ ವಾಕ್ ಸ್ವಾತಂತ್ರ್ಯ ಸಮಂಜಸ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂಬುದಾಗಿ ಪುನರುಚ್ಚರಿಸಿದೆ.

ಅಲ್ಲದೆ ಯಾವುದೇ ಮಾಧ್ಯಮ ಕಾನೂನು ವ್ಯಾಪ್ತಿಯಿಂದ ಹೊರಗೆ ಇರುವಂತಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...