Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...