Homeಕರ್ನಾಟಕಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಜಿಲ್ಲೆಯ ಶಿಕ್ಷಕರನ್ನು ರಾಜಕೀಯ ಸಂಘಟನೆಯೊಂದರ ಸಭೆಗೆ ಕಳುಹಿಸುವ ಬಗ್ಗೆ ಜಿಲ್ಲಾ ಸಿಇಒ ಸುತ್ತೋಲೆ ಹೊರಡಿಸಿದ್ದರು

- Advertisement -
- Advertisement -

ಬಿಜೆಪಿ ಪರ ಸಂಘಟನೆಯಾದ ‘ಯುವಾ ಬ್ರಿಗೇಡ್’ ಗುರುವಾರ (ಇಂದು) ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರೇರಣಾ ಪ್ರವಾಹ ಕಾರ್ಯಕ್ರಮಕ್ಕೆ, ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರನ್ನು ಕಳುಹಿಸುವ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಬುಧವಾರ ರದ್ದು ಪಡಿಸಲಾಗಿದೆ. ಈ ಬಗ್ಗೆ ನಾನುಗೌರಿ.ಕಾಂ ಮಂಗಳವಾರದಂದು ರಾಜಕೀಯ ಸಂಘಟನೆಯೊಂದರ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿಯ ನೆಪದಲ್ಲಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ವರದಿ ಮಾಡಿತ್ತು.

ನವೆಂಬರ್‌ 6 ರ ಶನಿವಾರದಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದರು. ಸುತ್ತೋಲೆಯಲ್ಲಿ, “ಯುವಾ ಬ್ರಿಗೇಡ್  ನಡೆಸುವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು” ಎಂದು ಹೇಳಲಾಗಿತ್ತು.

ಇದನ್ನೂ ಓದಿ: BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಆಕ್ರೋಶ

ಆದರೆ, ಸಿಇಒ ಅವರು ಹೊರಡಿಸಿದ ಈ ಸುತ್ತೋಲೆಯನ್ನು ವಿರೋಧಿಸಿ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರದಂದು ಮತ್ತೆ ಸಿಇಒ ಶಿಲ್ಪಾ ಶರ್ಮಾ ಅವರು ಮೌಖಿಕವಾಗಿ ಸಂದೇಶ ನೀಡಿ ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಿರುವುದರಿಂದ, ಕಾರ್ಯಕ್ರಮಕ್ಕೆ ತೆರಳುವಂತೆ ನಿಯೋಜಿಸಲ್ಪಟ್ಟ ಶಿಕ್ಷಕರ ನಿಯೋಜನೆ ರದ್ದಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಇದರ ಉಪನಿರ್ದೇಶಕರು ಅತೀ ತುರ್ತು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಪತ್ರದಲ್ಲಿ, ವಿಧಾನ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ ಅವರ ಆಪ್ತ ಸಹಾಯಕ ಕಿಶನ್ ರಾಥೋಡ್, “ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸುತ್ತೋಲೆ ರದ್ದಾಗಿದೆ. ಯಾವುದೆ ಎನ್‌ಜಿಒಗಳು ಮುಂದೆ ಬಂದರೆ ಅವರಿಗೆ ಅವಕಾಶ ಕೊಡಬಾರದು ಎಂದು ನಿಯಮವೇನು ಇಲ್ಲ. ಅದು ಎನ್‌ಜಿಒ ಆಗಿದ್ದು, ಅದರಲ್ಲಿ ಶಿಕ್ಷಕರಿಗೆ ಓರಿಯಂಟೇಷನ್‌ ತರಬೇತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿತ್ತು” ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರಿ ಸಂಸ್ಥೆಗಳು ಇವೆ. ರಾಜಕೀಯ ಸಂಘಟನೆಯೊಂದರ ಅಡಿಯಲ್ಲಿ ತರಬೇತಿ ಯಾಕೆ ನೀಡಬೇಕು? ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದರು. ಅಲ್ಲದೆ ಯುವಾ ಬ್ರಿಗೇಡ್‌ ಎಂಬುವುದು ರಾಜಕೀಯ ಅಜೆಂಡಾ ರೂಪಿಸುವಂತಹಾ ರಾಜಕೀಯ ಸಂಘಟನೆಯಾಗಿದೆ. ಆ ಸಂಘಟನೆ ಈ ಹಿಂದೆ ನಮೋ ಬ್ರಿಗೇಡ್ ಎಂಬ ಹೆಸರಿನಿಂದ ಕಾರ್ಯಾಚರಣೆ ಮಾಡುತ್ತಿತ್ತು. ಅದರ ನಂತರ ಯುವಾ ಬ್ರಿಗೇಡ್‌ ಎಂದು ಹೆಸರು ಬದಲಾಯಿಸಿಕೊಂಡಿದೆ. ಅದು ಬಿಜೆಪಿ ಪಕ್ಷದ ಪ್ರಚಾರಕ್ಕೆಂದೇ ಹುಟ್ಟಿಕೊಂಡಿರುವ ಸಂಘಟನೆಯಾಗಿದ್ದು, ಪ್ರಸ್ತುತ ಕಾರ್ಯಕ್ರಮದಲ್ಲಿ ‘ಹೊಸ ಶಿಕ್ಷಣ ನೀತಿ’ ಎಂಬ ರಾಜಕೀಯ ವಿಷಯದ ಬಗ್ಗೆ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡುವುದಿತ್ತು.

ಒಟ್ಟಿನಲ್ಲಿ ರಾಜಕೀಯ ಕಾರ್ಯಕ್ರಮವೊಂದಕ್ಕೆ ಸರ್ಕಾರಿ ಶಿಕ್ಷಕರು ಭಾಗವಹಿಸುವಂತೆ ಎಂದು ಸಿಇಒ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಶನ್‌‌ ರಾಥೋಡ್, “ಆಯಿತು ಬಿಡಿ, ಈಗದು ರದ್ದಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಎಲ್ಲಾ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ನಾಯಕ ಭಾಸ್ಕರ್‌ ಪ್ರಸಾದ್‌, “ಸುತ್ತೋಲೆ ನಮ್ಮ ಗಮನಕ್ಕೆ ಬಂದ ಕೂಡಲೆ ನಾವು ಯಾದಗಿರಿ ಜಿಲ್ಲೆಯ ನಮ್ಮ ನಾಯಕರನ್ನು ಗಮನಕ್ಕೆ ತಂದೆವು. ಸೂಲಿಬೆಲೆ ಅವರ ಸಂಘಟನೆಯ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿ ಕಳುಹಿಸಿದರಲ್ಲಿ ಏನರ್ಥವಿದೆ? ನಾಳೆ ದಿನ ನಾವು ಕೂಡಾ ನಮ್ಮ ಸಭೆಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳಿದರೆ ಕೊಡುತ್ತೀರಾ ಎಂದು ನಾವು ಯಾದಗಿರಿ ಜಿಲ್ಲಾಧಿಕಾರಿ, ಸಿಇಒ ಮತ್ತು ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಪ್ರಶ್ನೆಗಳನ್ನು ಎತ್ತಿ, ನಮ್ಮ ಆಕ್ರೋಶಗಳನ್ನು ತಿಳಿಸಿದ್ದೆವು. ಇದರ ನಂತರ ಅವರು ಶಿಕ್ಷಕರ ನಿಯೋಜನೆಯನ್ನು ರದ್ದು ಮಾಡಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ” ಎಂದು ಹೇಳಿದರು.

“ಶಿಕ್ಷಕರ ಕೌಶಲ್ಯಾಭಿವೃದ್ದಿ ಹೆಚ್ಚಿಸಲು ಬೇಕಾಗಿ ಕೋಟ್ಯಾಂತರ ರೂ ಖರ್ಚು ಮಾಡಲಾಗುತ್ತದೆ. ಸರ್ಕಾರದ ಈ ದುಡ್ಡನ್ನು ದೂಚಲು ಬೇಕಾಗಿ ಯುವಾ ಬ್ರಿಗೇಡ್‌ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ರಾಜಕೀಯ ಸಭೆಗೆ ನಿಯೋಜಿಸಿದ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯುನಿಷ್ಟ್‌) ಪಕ್ಷದ ಅಂಗ ಸಂಘಟನೆಯಾದ ‘ಎಐಡಿವೈಒ’ ಯಾದಗಿರಿ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಇಒ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನೂ ಮೀರಿ ಆಡಳಿತ ಪಕ್ಷದೊಂದಿಗೆ ಸ್ಪಷ್ಟವಾಗಿ ಗುರುತಿಸಿ ಕೊಂಡಿದ್ದಾರೆ ಎಂದು ಅವರು ಹೇಳಿದ್ದು, “ಚುನಾವಣಾ ವೇಳೆಯಲ್ಲಿ ಬಿಜೆಪಿಗಾಗಿ ಪ್ರಚಾರ ಮಾಡುವ ಒಂದು ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಉದ್ಯೋಗಿಗಳನ್ನು ತೊಡಗಿಸುವುದು ಕರ್ನಾಟಕ ಆಡಳಿತ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...