Homeಕರ್ನಾಟಕBJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ...

BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಖಂಡನೆ

- Advertisement -
- Advertisement -

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಹಾಗೂ ಅದರ ಪರವಾಗಿ ಪ್ರೊಪಗಾಂಡಾ ಸೃಷ್ಟಿಸುವ ಗುಂಪಾದ ನಮೋ ಬ್ರಿಗೇಡ್‌ನ ಹೊಸ ರೂಪ ‘ಯುವಾ ಬ್ರಿಗೇಡ್‌‌’ ನಡೆಸುವ ಕಾರ್ಯಕ್ರಮವೊಂದಕ್ಕೆ, ಯಾದಗಿರಿಯ ಜಿಲ್ಲೆಯ ಶಾಲಾ ಶಿಕ್ಷಕರನ್ನು ಭಾಗವಹಿಸಲು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. ನವೆಂಬರ್‌ 6 ರ ಶನಿವಾರ ಹೊರಡಿಸಲಾಗಿರುವ ಈ ಸುತ್ತೋಲೆಗೆ ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸಿಇಒ ಶಿಲ್ಪಾ ಶರ್ಮಾ ಅವರು ಹೊರಡಿಸಿರುವ ಸುತ್ತೋಲೆಯಲ್ಲಿ, ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯಯ ಅವಧಿ ಎಂದು ಪರಿಗಣಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ನಮೋ ಬ್ರಿಗೇಡ್‌ ಹೆಸರಿನಲ್ಲಿ ಬಿಜೆಪಿಗೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ನೆರವಾಗಿದ್ದ ಸಂಘಟನೆಯು ನಾಲ್ಕು ವರ್ಷಗಳ ಹಿಂದೆ ಯುವಾ ಬ್ರಿಗೇಡ್‌‌ ಎಂದು ಹೆಸರು ಬದಲಿಸಿತ್ತು. ಈ ಸಂಘಟನೆಯು ಯಾದಗಿರಿ ನಗರದಲ್ಲಿ ಗುರುವಾರದಂದು ‘ಪ್ರೇರಣಾ ಪ್ರವಾಹ’ ಎಂಬ ಕಾರ್ಯಗಾರವನ್ನು ಶಿಕ್ಷಕ-ಶಿಕ್ಷಕಿಯರನ್ನು ಗುರಿಯಾಗಿಸಿ ನಡೆಸುತ್ತಿದೆ.

ವಿಶೇಷವೇನೆಂದರೆ ಯಾದಗಿರಿ ಜಿಲ್ಲಾಧಿಕಾರಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಿಕ್ಷಕರು ಭಾಗವಹಿಸಬೇಕು ಎಂದು ಸುತ್ತೋಲೆ ಹೊರಡಿಸಿರುವ ಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಶರ್ಮಾ ಅವರು ಕಾರ್ಯಕ್ರಮ ಸಮಾರೋಪದ ಮುಖ್ಯ ಅಥಿತಿಯಾಗಿದ್ದಾರೆ. ಜೊತೆಗೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ‘ಹೊಸ ಶಿಕ್ಷಣ ನೀತಿಗೆ ಸಜ್ಜಾಗೋಣ’ ಎಂಬ ರಾಜಕೀಯ ವಿಷಯದಲ್ಲಿ ಸಭೆಯಲ್ಲಿ ಮಾತನಾಡಲಿದ್ದಾರೆ.

ಈ ಕಾರ್ಯಗಾರಕ್ಕೆ ಜಿಲ್ಲೆಯ ಶಿಕ್ಷಕರನ್ನು ಕಳುಹಿಸಿಕೊಡಬೇಕು ಎಂದು ಯುವಾ ಬ್ರಿಗೇಡ್‌‌ ನ ಜಿಲ್ಲಾ ಸಂಚಾಲಕರಾದ ಶ್ರೀಕಾಂತ ಹಳ್ಳಿ ಎಂಬವರು ಜಿಲ್ಲಾ ಪಂಚಾಯತ್‌ಗೆ ಮನವಿ ಮಾಡಿದ್ದರಿಂದ, ಸಿಇಒ ಅದನ್ನು ಪರಿಗಣಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ರಾಜಕೀಯ ಕಾರ್ಯಕ್ರಮವೊಂದಕ್ಕೆ ಶಾಲೆಯ ಶಿಕ್ಷಕರು ತೆರಳಬೇಕು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಸುತ್ತೋಲೆ ಹೊರಡಿಸಿರುವ ಬಗ್ಗೆ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ, “ಕೊರೊನಾ ಮುಗಿದು ಈಗಷ್ಟೇ ಶಾಲೆಗಳು ಪ್ರಾರಂಭವಾಗಿದೆ. ಶಾಲೆಗಳು ನಡೆಯುವಾಗ ಶಿಕ್ಷಕರನ್ನು ತರಬೇತಿಗೆ ಹಾಕುವಂತಹದ್ದು ಸರಿಯಲ್ಲ ಎಂಬುವುದು ಶಿಕ್ಷಣ ಇಲಾಖೆಯ ಚರ್ಚೆ ನಡೆಯುವಾಗ ಬರುವ ಮಾತಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ, ಹಿರಿಯ ಪ್ರಾಥಮಿಕ ಶಾಲೆಗಳಾದರೆ ಕನಿಷ್ಠ 200 ಕಲಿಕಾ ಅವಧಿ, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 220 ಕಲಿಕಾ ಅವಧಿ ಇರಲೇ ಬೇಕಾಗುತ್ತದೆ. ಈಗಾಗಲೆ ಶಿಕ್ಷಕರನ್ನು ತರಬೇತಿಗೆ ಹಾಕಿ ಹಾಕಿ ಕಲಿಕಾ ದಿನಗಳು ಬಹಳ ಕಡಿಮೆಯಾಗಿದೆ. ಶಿಕ್ಷಣ ಇಲಾಖೆಯಲ್ಲಿ ಈಗಾಗಲೇ ಶಿಕ್ಷಕರ ತರಬೇತಿಗೆಂದೇ ಹಲವು ಸಂಸ್ಥೆಗಳಿವೆ. ಇಷ್ಟೆಲ್ಲಾ ಇದ್ದರೂ ಹೊರಗಡೆಯಿಂದ ಯಾಕೆ ತರಬೇತಿ ಕೊಡಬೇಕು? ಇದರ ಅವಶ್ಯಕತೆ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

“ಈಗ ಕಾರ್ಯಕ್ರಮ ಮಾಡುತ್ತಿರುವ ವ್ಯಕ್ತಿಯ ಬಗ್ಗೆ ಅನೇಕ ವಿರೋಧಗಳು ಇವೆ. ಅವರ ಹಿನ್ನಲೆ, ಅವರು ಪ್ರತಿನಿಧಿಸುವಂತಹ ಪಕ್ಷ ಸೇರಿದಂತೆ ಹಲವು ತಕರಾರುಗಳಿಗೆ ಇವೆ. ಪಕ್ಷ ರಾಜಕಾರಣವನ್ನು ಯಾಕೆ ಶಾಲಾ ಶಿಕ್ಷಣದಲ್ಲಿ ತರಬೇಕು? ಹಾಗಾಗಿ ಅದು ತಪ್ಪು ನಿರ್ಧಾರ. ಈಗ ಇವರ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸಿದರೆ, ಮುಂದೊಂದು ದಿನ ಬೇರೆ ಪಕ್ಷದವರೂ ಬಂದು ನಾವು ಕಾರ್ಯಕ್ರಮ ಮಾಡುತ್ತೇವೆ ನಮಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳುತ್ತಾರೆ. ಇದು ಬಹಳ ಕೆಟ್ಟ ಸಂಪ್ರದಾಯವಾಗುತ್ತದೆ, ಹಾಗಾಗಿ ಶಿಕ್ಷಕರನ್ನು ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ ಹೊರಡಿಸಿದ ಅಧಿಕಾರಿ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕು. ಜೊತೆಗೆ ಸುತ್ತೋಲೆಯನ್ನು ರದ್ದು ಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಮಾತನಾಡಿ, “ಚಕ್ರವರ್ತಿ ಸೂಲಿಬೆಲೆ ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಒಂದು ಪಕ್ಷದ ಬೆಂಬಲಕ್ಕಾಗಿ ಹಸಿ ಸುಳ್ಳುಗಳನ್ನು ಹೇಳಿ ಜನರ ತಲೆಕೆಡಿಸುತ್ತಿರುವ ವ್ಯಕ್ತಿ. ಹಾಗಾಗಿಯೆ ರಾಜ್ಯದ ಜನರು ಅವರಿಗೆ ‘ಹೆಂಗ್‌ಪುಂಗ್ಲಿ’ ಎಂಬ ಬಿರುದನ್ನೂ ನೀಡಿದ್ದಾರೆ. ಇಂತಹ ಜನರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕರಿಗೆ ಕಾರ್ಯಾಗಾರ ಮಾಡುವುದು ತುಂಬಾ ದೊಡ್ಡ ದುರಂತ. ಇಡೀ ಕಾರ್ಯಕ್ರಮ ರಾಜಕೀಯ ಪ್ರೊಪಗಾಂಡ ಕಾರ್ಯಕ್ರಮವಾಗಿದೆ. ಇದಕ್ಕೆ ಬೆಂಬಲ ನೀಡುತ್ತಿರುವಂತಹ ಸರ್ಕಾರಿ ಅಧಿಕಾರಿಗಳು ಯಾವುದೆ ಪ್ರಜ್ಞೆ ಇಲ್ಲದ ಮುಠ್ಠಾಳರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಹೊರಡಿಸಿರುವ ಸುತ್ತೋಲೆ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಶರ್ಮಾ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...