Homeಕರ್ನಾಟಕಯಾದಗಿರಿ | ‘ತನ್ನ ಸಾವಿಗೆ ಶಿಕ್ಷಕರೇ ಕಾರಣ’; ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ...

ಯಾದಗಿರಿ | ‘ತನ್ನ ಸಾವಿಗೆ ಶಿಕ್ಷಕರೇ ಕಾರಣ’; ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ವಿದ್ಯಾರ್ಥಿ

- Advertisement -
- Advertisement -

ಆರನೇ ತರಗತಿ ದಲಿತ ವಿದ್ಯಾರ್ಥಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಖಾಸಗಿ ಶಾಲೆಯಲ್ಲಿ ಇತ್ತೀಚೆಗೆ ನಡೆದಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ಕಾನೂನು ನಿಯಮಗಳನ್ನು ಪಾಲಿಸದ ಶಾಲೆಯ ಪರವಾನಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸರ್ವ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿದೆ.

ಪಟ್ಟಣದ ಆರಾಧನಾ ಶಾಲೆಯ ವಿದ್ಯಾರ್ಥಿ ‘ತನ್ನ ಸಾವಿಗೆ ಶಿಕ್ಷಕರೇ ಕಾರಣ’ವೆಂದು ಆರೋಪಿಸಿ ಪತ್ರ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಶರಣಬಸವ ರಾಣಪ್ಪ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಶಿಕ್ಷಕರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ. ಹಾಗಾಗಿ ತಪ್ಪಿತಸ್ಥರನ್ನು ಬಂಧಿಸಿ, ಜಾಮೀನು ನೀಡಿದರೆ ಸಾಕಾಗದು. ಶಾಲೆಯ ಪರವಾನಗಿ ರದ್ದುಗೊಳಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ 

ಸರ್ವ ಸಂಘಟನೆಗಳ ಒಕ್ಕೂಟ ಮುಖಂಡ ಭೀಮಶಪ್ಪ ಗುಡಿಸಿ ಮಾತನಾಡಿ, “ಶಿಕ್ಷಣ ಹಕ್ಕು ಕಾಯ್ದೆ-2005ರ ಅಡಿಯಲ್ಲಿ ಆಯ್ಕೆಯಾಗಿದ್ದ ವಿದ್ಯಾರ್ಥಿಯನ್ನು ಪ್ರತ್ಯೇಕವಾಗಿಸಿದ್ದರೋ ಅಥವಾ ಪರಿಶಿಷ್ಟ ಜಾತಿಯವನೆಂದು ಕಿರುಕುಳ ನೀಡಿದ್ದರೋ ಗೊತ್ತಿಲ್ಲ. ಆದರೆ ವಿದ್ಯಾರ್ಥಿ ಕಿರುಕುಳ ತಾಳಲಾರದೆ ಮನನೊಂದು ವಿಷ ಸೇವಿಸಿದ್ದಾರೆ. ಅವರಿಗೆ ಕಿರುಕುಳ ನೀಡದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಪಾಲನೆ, ಸಮಾನತೆ ಸೇರಿದಂತೆ ಹಲವು ಕಾನೂನುಗಳನ್ನು ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆ ಉಲ್ಲಂಘಿಸಿದೆ. ಶಾಲೆಯ ಆಡಳಿತ ಮಂಡಳಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಶಾಲೆ ಪರವಾನಿಗೆ ರದ್ದುಗೊಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ಕಾಯ್ದೆ ಅಡಿಯಲ್ಲಿ (ಆರ್‌ಟಿಐ) ಆಯ್ಕೆಯಾದ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡುವುದನ್ನು ಶಿಕ್ಷಣ ಸಂಸ್ಥೆಗಳು ನಿಲ್ಲಿಸಬೇಕು. ಪುಸ್ತಕ, ನೋಟ್ ಬುಕ್, ಸಮವಸ್ತ್ರದ ಹೆಸರಿನಲ್ಲಿ ಹಣ ವಸೂಲಿ ಮಾಡಬಾರದು. ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸುವ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅವರು ತಾಕೀತು ಮಾಡಿದ್ದಾರೆ.

ಇದನ್ನೂ ಓದಿ: ಯುಪಿ: ಲಖಿಂಪುರಖೇರಿಯ ಅಪ್ರಾಪ್ತ ದಲಿತ ಸಹೋದರಿಯರ ಅತ್ಯಾಚಾರ, ಹತ್ಯೆ – 6 ಮಂದಿ ಬಂಧನ

ಪ್ರತಿಭಟನೆಯಲ್ಲಿ ಚಂದಪ್ಪ ಕಟ್ಟಿಮನಿ, ಲಕ್ಷ್ಮಪ್ಪ ಲಿಕ್ಕಿ, ಲಾಲಪ್ಪ ತಲಾರಿ, ಗುರುನಾಥ ತಲಾರಿ, ಚಂದ್ರಪ್ಪ ಮುನಿಯಪ್ಪನವರ, ತಾಯಪ್ಪ ನಜರಾಪುರ, ಭೀಮಶಪ್ಪ ತಲಾರಿ, ಡಾ.ಬಾಲಪ್ಪ, ಬಾಬು ಭೀಮಶಪ್ಪ ಶನಿವಾರ, ಮುರುಳಿ ಹಾಗೂ ಹಲವು ಸಂಘಟನೆಗಳ ಮುಖ೦ಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ನಿಮಗೆ ನಾವು ಸುದ್ದಿಯನ್ನು ಹೇಗೆ ಕಲಿಸಬೇಕು sir ನಾವು ಬಹಳ ಇಷ್ಟ ಪಡುತಿವೆ ನಿಮ್ಮ ಸುದ್ದಿಗಳನ್ನ plzz

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...