Homeಕರ್ನಾಟಕಯಾದಗಿರಿ: ಅತ್ಯಾಚಾರ ವಿರೋಧಿಸಿದ ಮಹಿಳೆಯನ್ನು ಜೀವಂತ ಸುಟ್ಟ ದುಷ್ಕರ್ಮಿ

ಯಾದಗಿರಿ: ಅತ್ಯಾಚಾರ ವಿರೋಧಿಸಿದ ಮಹಿಳೆಯನ್ನು ಜೀವಂತ ಸುಟ್ಟ ದುಷ್ಕರ್ಮಿ

- Advertisement -
- Advertisement -

ಅತ್ಯಾಚಾರ ಯತ್ನವನ್ನು ವಿರೋಧಿಸಿದ ಮಹಿಳೆಯೊಬ್ಬರನ್ನು ಜೀವಂತವಾಗಿ ಸುಟ್ಟು ಹಾಕಿದ ಘಟನೆ ಭಾನುವಾರ ರಾತ್ರಿ ರಾಜ್ಯದ ಯಾದಗಿರಿಯಲ್ಲಿ ನಡೆದಿದೆ. ಘಟನೆ ನಡೆದ ನಂತರ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ. ‘ಆರೋಪಿ ಸುರಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು’ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಅಕ್ಟೋಬರ್ 3 ರ ಭಾನುವಾರ ರಾತ್ರಿ, ಸುರಪುರ ತಾಲೂಕಿನ ತನ್ನ ಮನೆಯಲ್ಲಿ ನಡೆದ ಅತ್ಯಾಚಾರ ಯತ್ನವನ್ನು ವಿರೋಧಿಸಿದ ಮಹಿಳೆಯನ್ನು ಸಜೀವವಾಗಿ ಸುಟ್ಟುಹಾಕಲಾಗಿತ್ತು. ಪೊಲೀಸರು ಆರೋಪಿಯನ್ನು ಚೌಡೇಶ್ವರಿಹಾಲ್ ಗ್ರಾಮದ ನಿವಾಸಿ ಗಂಗಪ್ಪ ಬಸಪ್ಪ ಆರೋಲಳ್ಳಿ ಎಂದು ಗುರುತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ಸುದ್ದಿಗಾರರೊಂದಿಗೆ ಮಾತನಾಡಿದ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ‘ಆರೋಪಿಯು ತಡರಾತ್ರಿ ಸಂತ್ರಸ್ತೆಯ ಮನೆಗೆ ನುಗ್ಗಿ, ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಇದನ್ನು ವಿರೋಧಿಸಿದ್ದರಿಂದ, ಆರೋಪಿಯು ತನ್ನ ಮೋಟಾರ್ ಬೈಕ್‌ನಿಂದ ಇಂಧನವನ್ನು ತಂದು ಮಹಿಳೆಯ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ” ಎಂದು ಹೇಳಿದ್ದಾರೆ.

ಸಂತ್ರಸ್ತೆಯನ್ನು ಅಕ್ಟೋಬರ್ 4 ರ ಬೆಳಿಗ್ಗೆ ಸುರಪುರ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚೇತರಿಸದೆ, ಅವರ ಪರಿಸ್ಥಿತಿ ಹದಗೆಟ್ಟ ಕಾರಣ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅದೇ ದಿನ ಸಂಜೆ ಅವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿಯಲ್ಲಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆಯನ್ನು ಬೆತ್ತಲಾಗಿಸಿ ಅವರ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿ ಮೃಗೀಯವಾಗಿ ವರ್ತಿಸಿದ್ದರು. ಈ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿ, ಭಾರಿ ಆಕ್ರೋಶ ಉಂಟುಮಾಡಿತ್ತು. ಈ ಹಿನ್ನಲೆಯಲ್ಲಿ ಪ್ರಕರಣದ ದಾಖಲಿಸಿದ್ದ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದರು.

ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನಯಾದಗಿರಿ - ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿ ಅವರೊಂದಿಗೆ ಮೃಗೀಯವಾಗಿ ವರ್ತಿಸಿರುವ ಘಟನೆ ರಾಜ್ಯದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...