Homeಕರ್ನಾಟಕಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

- Advertisement -
- Advertisement -

ಯಾದಗಿರಿಯ ಸರಕಾರಿ ಮೆಟ್ರಿಕ್ ನಂತರದ (ವೃತಿಪರ) ಬಾಲಕಿಯರ ವಸತಿ ನಿಲಯದಲ್ಲಿ, ದಲಿತ ಬಾಲಕಿರ ಮೇಲೆ ಹಾಸ್ಟೆಲ್ ವಾರ್ಡನ್‌‌‌ ನಡೆಸುತ್ತಿರುವ ದಬ್ಬಾಳಿಕೆ ವಿರುದ್ಧ ನೂರಾರು ವಿದ್ಯಾರ್ಥಿನಿಯರು ಶನಿವಾರ ಪ್ರತಿಭಟನೆ ನಡೆಸಿದ್ದು, ವಾರ್ಡನ್‌‌‌‌‌ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಹಾಸ್ಟೆಲ್ ವಾರ್ಡನ್‌ ಶಾಂತಾಬಾಯಿ ಅವರು ವಿಧ್ಯಾರ್ಥಿನಿಯರ ಮೇಲೆ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ವಸತಿ ನಿಲಯದ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಸ್ಟೆಲ್‌‌ನಲ್ಲಿ ಬಾಲಕಿಯರಿಗೆ ಸರಿಯಾದ ಸೌಲಭ್ಯ ನೀಡದೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಸರಿಯಾದ ರೀತಿಯ ಬೆಳಗಿನ ಉಪಹಾರ, ಊಟ, ಕಂಪ್ಯೂಟರ್, ಪುಸ್ತಕ, ಶೌಚಾಲಯ, ಫ್ಯಾನು, ಹಾಸಿಗೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಇಲ್ಲದೆ ಬಾಲಕಿಯರು ಕಾಲ ಕಳೆಯುತ್ತಿದ್ದಾರೆ” ಎಂದು ಜೈ ಭೀಮ್ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಅಧ್ಯಕ್ಷರಾಗಿರುವ ರಾಹುಲ್ ಕೊಲ್ಲೂರ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ವಾರ್ಡನ್‌‌ ಅನ್ನು ತಕ್ಷಣವೆ ಅಮಾನತು ಮಾಡಬೇಕು ಎಂದು ವಿದ್ಯಾರ್ಥಿನಿಯರು ಶನಿವಾರ ಬೆಳಿಗ್ಗೆ ಯಾದಗಿರಿ ಜಿಲ್ಲಾ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಗಾರ ವಿದ್ಯಾರ್ಥಿನಿಯರೊಂದಿಗೆ ಜಿಲ್ಲಾಧಿಕಾರಿ ಅವರು ಸಂಜೆ ಆರು ಗಂಟೆಗೆ ಹಾಸ್ಟೆಲ್‌ಗೆ ಬಂದು ಭೇಟಿಯಾಗುವುದಾಗಿ ಹೇಳಿದ್ದರು. ಅವರ ಮಾತಿನಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ಕೈಬಿಟ್ಟು ತೆರಳಿದ್ದರು.

ಆದರೆ ಸಂಜೆ ವೇಳೆ ಜಿಲ್ಲಾಧಿಕಾರಿ ಹಾಸ್ಟೆಲ್‌ಗೆ ಬರದೆ ಇರುವುದರಿಂದ ವಿದ್ಯಾರ್ಥಿನಿರು ತಹಶೀಲ್ದಾರ್‌ ಕಚೇರಿ ಮುಂದೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ ನಂತರ ರಾತ್ರಿ 8:45ಕ್ಕೆ ವಸತಿ ನಿಲಯಕ್ಕೆ ತೆರಳಿ ಬಾಲಕಿಯರ ಬೇಡಿಕೆ ಈಡೇರಿಸುವುದಾಗಿ ಹೇಳಿ ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ.

“ತಮ್ಮ ವಸತಿ ನಿಲಯದಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರು ಈ ಹಿಂದೆಯೆ ‘ತಾಲೂಕಿನ ಸಮಾಜ ಕಲ್ಯಾಣ ಇಲಾಖೆ’ ತೆರಳಿ ಮನವಿಯನ್ನು ನೀಡಿದ್ದರು. ಆದರೆ ಅಧಿಕಾರಿಗಳು ಅವರ ಮನವಿ ಪತ್ರವನ್ನು ವಿದ್ಯಾರ್ಥಿಗಳ ಮುಂದೆಯೇ ಹರಿದು ಹಾಕಿ ದರ್ಪ ಮರೆದಿದ್ದರು ಎಂದು ವಿಧ್ಯಾರ್ಥಿಗಳು ತಿಳಿಸಿದ್ದಾಗಿ” ರಾಹುಲ್ ಕೊಲ್ಲೂರ್‌ ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಹಾಸ್ಟೆಲ್ ವಾರ್ಡನ್‌ ಅಮಾನತಿನ ಬಗ್ಗೆ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರು ಮಾತನಾಡಿ, “ಜಿಲ್ಲಾಧಿಕಾರಿ ಅವರು ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈ ವರೆಗೆ ಅಧೀಕೃತ ಆದೇಶ ಪತ್ರ ಹೊರಡಿಸಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್. ಆರ್ ಅವರಿಗೆ ಕರೆ ಮಾಡಿತ್ತಾದರೂ ಅವರು ಕರೆಯನ್ನು ಸ್ವೀಕರಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...