Homeಕರ್ನಾಟಕಯಾದಗಿರಿ | ರಸ್ತೆಯ ಮಧ್ಯೆ ಅಡ್ಡಗಟ್ಟಿ ದಲಿತ ಯುವಕರಿಗೆ ಥಳಿತ; ಜಾತಿ ನಿಂದನೆ

ಯಾದಗಿರಿ | ರಸ್ತೆಯ ಮಧ್ಯೆ ಅಡ್ಡಗಟ್ಟಿ ದಲಿತ ಯುವಕರಿಗೆ ಥಳಿತ; ಜಾತಿ ನಿಂದನೆ

- Advertisement -
- Advertisement -

ದಲಿತ ಯುವಕರಿಬ್ಬರನ್ನು ರಸ್ತೆಯ ಮಧ್ಯೆ ಅಡ್ಡಗಟ್ಟಿ ಜಾತಿ ನಿಂದನೆ ಮಾಡಿರುವ ಘಟನೆ ಯಾದರಿಗಿ ಜಿಲ್ಲೆಯ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 17ರ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಇಬ್ಬರು ದುಷ್ಕರ್ಮಿಗಳ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ. ಅಲ್ಲದೆ, ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಯಾದಗಿರಿ | ರಸ್ತೆಯ ಮಧ್ಯೆ

ವೈರಲ್ ವಿಡಿಯೊದಲ್ಲಿ ದುಷ್ಕರ್ಮಿಗಳು ದಲಿತ ಯುವಕರಿಬ್ಬರನ್ನು ಅಡ್ಡಗಟ್ಟಿ, “ನಿನ್ ಜಾತಿ ಯಾವ್ದು..? ನಿನ್ನ ಜಾತಿ ಯಾವ್ದು ಹೇಳಲೇ? ನೀನು ಮಾದಾರನ್ (ಮಾದಿಗ) ಹೌದೋ, ಅಲ್ವೋ? ನಾವು ಕುರುಬರು” ಎಂದು ಹೇಳುವುದು ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ದಾಖಲಾದ ಎಫ್‌ಐಅರ್ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಆರೋಪಿಗಳನ್ನು ಕುರುಬ ಸಮುದಾಯದ ಮಲ್ಲಯ್ಯ ಮತ್ತು ಅರ್ಜಿನ ಎಂದು ಎಫ್‌ಐಆರ್‌ನಲ್ಲಿ ಗುರುತಿಸಲಾಗಿದೆ.

ಏನಿದು ಘಟನೆ?

ವೃತ್ತಿಯಲ್ಲಿ ವಕೀಲರಾಗಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ದುರ್ಗಪ್ಪ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಸುರಪುರ ತಾಲ್ಲೂಕಿನ ನಾಗರಾಳ ಗ್ರಾಮದ ನಿವಾಸಿಯಾದ ದುರ್ಗಪ್ಪ ಅವರು 17ನೇ ತಾರೀಖಿನಂದು ತಮ್ಮ ಗ್ರಾಮಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದುರ್ಗಪ್ಪ ಅವರ ಜೊತೆಗೆ ಅವರ ಮಾವ ವಿಜಯಕುಮಾರ್‌ ಕೂಡಾ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಲಾಗಿದೆ. “ಊರಿನ ಕ್ರಾಸ್ ಹತ್ತಿರದಲ್ಲಿನ ಬಲಭೀಮ ಎಂಬವರ ಅಂಗಡಿ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಕುರುಬ ಜಾತಿಗೆ ಸೇರಿದ ಮಲ್ಲಯ್ಯ ಮತ್ತು ಅರ್ಜುನ್ ಎಂಬವರು ತಮ್ಮನ್ನು ಕಂಡ ಕೂಡಲೇ ದಾರಿಗೆ ಅಡ್ಡಗಟ್ಟಿ ನಿಂತು ಜಾತಿ ನಿಂದನೆ ಮಾಡಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಯು, “ನಮ್ಮ ಎದುರಿಗೆ ಹೋಗುವುದಕ್ಕೆ ಎಷ್ಟು ಸೊಕ್ಕು? …. ಮಕ್ಕಳೇ ಇಲ್ಲಿ ತಿರುಗಾಡಿದರೆ ನಿಮ್ಮ ಕಾಲು ಕಡಿಯುತ್ತೇವೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ದುರ್ಗಪ್ಪ ಅವರು ಹೇಳಿದ್ದಾರೆ.

ಅಲ್ಲದೆ, ಆರೋಪಿ ಅರ್ಜುನ, ನನ್ನ ಶರ್ಟ್ ಹಿಡಿದು ದೈಹಿಕ ಹಲ್ಲೆ ಕೂಡಾ ಮಾಡಿದ್ದು, ಮತ್ತೊಬ್ಬ ಆರೋಪಿ ಮಲ್ಲಯ್ಯ ತನ್ನ ಎಡಗಾಲಿನ ಚಪ್ಪಲಿ ಬಿಚ್ಚಿ ತಲೆಗೆ ಹೊಡೆದಿದ್ದಾರೆ ಎಂದು ದುರ್ಗಪ್ಪ ಅವರು ಹೇಳಿದ್ದಾರೆ. ದುರ್ಗಪ್ಪ ಅವರ ಜೊತೆಯಲ್ಲಿದ್ದ ವಿಜಯಕುಮಾರ್ ಅವರು ಬಿಡಿಸಲು ಹೋದಾಗ, ಮಲ್ಲಯ್ಯ ಅವರು ವಿಜಯಕುಮಾರ್ ಅವರ ಶರ್ಟ್ ಹಿಡಿದು ಹರಿದು ಹಾಕಿದ್ದಾರೆ ಎಂದು ದುರ್ಗಪ್ಪ ಅವರು ದೂರಿದ್ದಾರೆ.

ಘಟನೆ ಬಳಿಕ ಸಂತ್ರಸ್ತರು ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಸಿಕೊಂಡ ನಂತರ ಸುರಪುರ ಠಾಣೆಗೆ ಹಾಜರಾಗಿ ದೂರು ಕೊಟ್ಟಿದ್ದಾರೆ. ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2), 118(1), 126(2), 133, 352, 351(2), 3(5) ಮತ್ತು ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1)(s), 3(2)(v-a) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

“ಇನ್ನೂ ಜಾತಿ ವೈಷಮ್ಯಗಳು ಭಾರತದಲ್ಲಿ ಜೀವಂತವಾಗಿವೆ ಎಂಬುದನ್ನು ಇಂತಹ ಘಟನೆಗಳು ತೋರಿಸುತ್ತವೆ. ಸರ್ಕಾರ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮತ್ತಷ್ಟು ಬಿಗಿಯಾದ ಕಾನೂನನ್ನು ತರಬೇಕು. ವಕೀಲನಾದ ನನಗೆಯೇ ಈ ರೀತಿ ಆಗುತ್ತಿದೆ ಅಂದರೆ, ಜನಸಾಮಾನ್ಯರ ಗತಿ ಏನಾಗಬಹುದು?” ಎಂದು ಸಂತ್ರಸ್ತ ದುರ್ಗಪ್ಪ ಹೇಳಿರುವುದಾಗಿ ‘ಈ ದಿನ ಡಾಟ್ ಕಾಮ್’ ವರದಿ ಮಾಡಿದೆ.

“ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಈ ಅಸ್ಪೃಶ್ಯತೆಯನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರ ಸಹಕಾರ ಬೇಕು. ಆರೋಪಿಗಳನ್ನು ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂಬ ಮಾಹಿತಿಯೂ ಇದೆ” ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ. ಯಾದಗಿರಿ | ರಸ್ತೆಯ ಮಧ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...