Homeಮುಖಪುಟಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

- Advertisement -
- Advertisement -

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ‘ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್’ (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಕಾರ್ಮಿಕರು ಸ್ಥಿತಿ ಚಿಂತಾಜನಕವಾಗಿದೆ.

ಮೃತರನ್ನು ಮಧ್ಯಪ್ರದೇಶದ ಕಟ್ನಿ ಮೂಲದ ವಿಕ್ರಂಸಿಂಗ್ (20-25 ವರ್ಷ) ಮತ್ತು ಸಂಜಯ್‌ಸಿಂಗ್ (20-25 ವರ್ಷ) ಹಾಗೂ ತೆಲಂಗಾಣದ ಮಹಬೂಬ್‌ನಗರ ಮೂಲದ ಕಟ್ಲ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಆಂಧ್ರಪ್ರದೇಶದ ಅನಂತಪುರ ಮೂಲದ ಮಂಚಾಲ ಹೇಮಂತ್ ಮತ್ತು ಮಂಚಾಲ ಶಿವಕುಮಾರ್ ಅವರನ್ನು ನೆರೆಯ ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದುರಂತ ಸಂಭವಿಸಿದ್ದು ಹೇಗೆ?

ಜಿಲ್ಲಾಧಿಕಾರಿ ಡಾ. ರಾಹುಲ್ ಪಾಂಡ್ವೆ ಮತ್ತು ಎಸ್‌ಪಿ ಪೃಥ್ವಿಕ್ ಶಂಕರ್ ಅವರು ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ದುರಂತದ ತಾಂತ್ರಿಕ ವಿವರಗಳನ್ನು ನೀಡಿದ್ದಾರೆ.

ಕಾರ್ಖಾನೆಯಲ್ಲಿ ಸ್ಟೇನ್‌ಲೆಸ್ ಸ್ಟೀಲ್ ರಿಯಾಕ್ಟರ್‌ನಲ್ಲಿ ಥಿಯೋನಿಲ್ ಕ್ಲೋರೈಡ್ (Thionyl Chloride) ರಾಸಾಯನಿಕವನ್ನು ಬಳಸಲಾಗುತ್ತಿತ್ತು. ಈ ಪ್ರಕ್ರಿಯೆಯ ಸಮಯದಲ್ಲಿ ಉಂಟಾಗುವ ಲ್ಫರ್ ಡೈಆಕ್ಸೈಡ್ (Sulphur Dioxide) ವಿಷಾನಿಲವನ್ನು ಪೈಪ್‌ಲೈನ್ ಮೂಲಕ ಸ್ಕ್ರಬ್ಬರ್‌ಗೆ ಸಾಗಿಸಲಾಗುತ್ತಿತ್ತು. ಆದರೆ, ಬುಧವಾರ ಮುಂಜಾನೆ 1 ರಿಂದ 2 ಗಂಟೆಯ ಸುಮಾರಿಗೆ ಪೈಪ್‌ಲೈನ್‌ನಲ್ಲಿ ಇದ್ದಕ್ಕಿದ್ದಂತೆ ಸೋರಿಕೆ ಉಂಟಾಗಿ, ನೈಟ್‌ಶಿಫ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅನಿಲವನ್ನು ಸೇವಿಸಿ ಉಸಿರುಗಟ್ಟಿದ್ದಾರೆ.

ಎಫ್‌ಐಆರ್ ದಾಖಲು
  • ಕಾರ್ಖಾನೆ ಮ್ಯಾನೇಜ್‌ಮೆಂಟ್ ವಿರುದ್ಧ ದೂರು: ಸುರಕ್ಷತಾ ಮಾನದಂಡಗಳನ್ನು ಗಾಳಿಗೆ ತೂರಿದ ಆರೋಪದ ಮೇಲೆ ಸಿಲ್ ಲ್ಯಾಬೊರೇಟರೀಸ್ ಸಂಸ್ಥೆ, ಅದರ ಮ್ಯಾನೇಜರ್ ಹಾಗೂ ಉಸ್ತುವಾರಿ ಅಧಿಕಾರಿಗಳ ವಿರುದ್ಧ ಸೈದಾಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.

    ಅಹಿತಕರ ಘಟನೆಯ ನಡೆಯಲು ಕಾರಣ ಹಾಗೂ ಕಾರ್ಖಾನೆಯ ತಾಂತ್ರಿಕ ಲೋಪಗಳನ್ನು ಪತ್ತೆಹಚ್ಚಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ವಿಧಿವಿಜ್ಞಾನ (Forensic) ತಂಡಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಕಂಪನಿಯ ಮಾಲೀಕರಿಗೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಮೃತಪಟ್ಟ ಮತ್ತು ಅಸ್ವಸ್ಥಗೊಂಡಿರುವ ಕಾರ್ಮಿಕರ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಸುರಕ್ಷತಾ ನಿಯಮಗಳ ಉಲ್ಲಂಘನೆಯಿಂದ ಇಂತಹ ದುರಂತಗಳು ಪದೇ ಪದೇ ಮರುಕಳಿಸುತ್ತಿದ್ದು, ಕಾರ್ಖಾನೆಗಳ ಕಠಿಣ ತಪಾಸಣೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...