Homeಕರ್ನಾಟಕಯಡಿಯೂರಪ್ಪನವರ ಎದುರೆ ಖರ್ಗೆಗೆ ಜೈಕಾರ : ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಗದ್ದಲ

ಯಡಿಯೂರಪ್ಪನವರ ಎದುರೆ ಖರ್ಗೆಗೆ ಜೈಕಾರ : ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಗದ್ದಲ

- Advertisement -
- Advertisement -

ಕಲಬುರಗಿಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ಇರುವ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಗದ್ದಲ ಉಂಟಾಗಿದ್ದು ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ.

ಇಂದು ಯಡಿಯೂರಪ್ಪನವರು ವಿಮಾನ ನಿಲ್ದಾಣ ಉದ್ಘಾಟನೆ ಮಾಡಲು ಬಂದಾಗ ವಿಮಾನ ನಿಲ್ದಾಣದ ಒಳಗೆಯೆ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆ ಪರ ಘೋಷಣೆ ಕೂಗಿ ಅಚ್ಚರಿ ಮೂಡಿಸಿದ್ದಾರೆ. ಇದರಿಂದ ಕುಪಿತಗೊಂಡ ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ ಎಂದು ಪ್ರತಿ ಘೋಷಣೆ ಕೂಗುವ ಮೂಲಕ ಗದ್ದಲ ಉಂಟುಮಾಡಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಗುಂಪುಗಳನ್ನು ನಿಯಂತ್ರಿಸಿದ್ದಾರೆ. ಕೆಲ ಕಾಲ ಉಂಟಾಗಿದ್ದ ಉದ್ವಿಗ್ನತೆ ಶಮಯಗೊಂಡಿದೆ.

ಕಲಬುರಗಿಗೆ ವಿಮಾನ ನಿಲ್ದಾಣ ತರುವಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆಯವರ ಪ್ರಯತ್ನ ಬಹಳಷ್ಟಿದೆ. ಅವರಿಲ್ಲದಿದ್ದರೆ ಇಲ್ಲಿ ವಿಮಾನ ನಿಲ್ದಾಣ ಸಾಧ್ಯವೇ ಇರಲಿಲ್ಲ. ಅವರು ಕಟ್ಟಿದ ವಿಮಾನ ನಿಲ್ದಾಣವನ್ನು ಯಡಿಯೂರಪ್ಪನವರು ಉದ್ಘಾಟಿಸಿತ್ತಿರುವುದರಿಂದ ಅಸಮಾಧಾನಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ಆ ರೀತಿ ಘೋಷಣೆ ಕೂಗಿದ್ದಾರೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...