Homeಮುಖಪುಟ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಭಯೋತ್ಪಾದಕರಾದರೆ 1 ಕೋಟಿ ಮತ್ತು ಒಂದು ವರ್ಷದವರೆಗೆ ಅದೇ ಕೆಲಸ ಮಾಡುವುದಾದರೆ 100 ಕೋಟಿ ಸಂಗ್ರಹಿಸಿ ನೀಡುತ್ತೇನೆ ಎಂದಿರುವ ಅವರ ವಿರುದ್ದ ಯಾವುದೇ ಪ್ರಕರಣ ದಾಖಲಾಗಿಲ್ಲ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರಗಾಮಿ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಈ ಯುವಕರು ಒಂದು ವರ್ಷ ಹಾಗೆಯೆ ಮುಂದುವರೆಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗಾಗಿ ಸಂಗ್ರಹಿಸುವುದಾಗಿ ಅವರು ಹೇಳಿದ್ದಾರೆ.

ಇದು ನರಸಿಂಗಾನಂದ ಅವರ ಎರಡನೇ ಧರಂ ಸಂಸದ್ ಆಗಿದ್ದು, ಮೊದಲನೇ ಧರಂ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು ಮತ್ತು ಇದರ ನಂತರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳು ನಡೆದಿದ್ದು. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಡಿಸೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ, “ನಮಗೆ ಸಹಾಯ ಬೇಕಾದಾಗ, ಹಿಂದೂ ಸಮುದಾಯವು ನಮಗೆ ಸಹಾಯ ಮಾಡಲಿಲ್ಲ. ಆದರೆ ಯಾವುದೇ ಯುವ ಕಾರ್ಯಕರ್ತ ‘ಹಿಂದೂ ಪ್ರಭಾಕರನ್’ ಆಗಲು ಸಿದ್ಧರಾಗಿದ್ದರೆ, ಬೇರೆಯವರಿಗಿಂತ ಮೊದಲು ನಾನು ಅವನಿಗೆ 1 ಕೋಟಿ ನೀಡುತ್ತೇನೆ…ಯಾರಾದರೂ ‘ಹಿಂದೂಗಳ ಪ್ರಭಾಕರನ್’ ಆಗುವ ಜವಾಬ್ದಾರಿಯನ್ನು ತೆಗೆದುಕೊಂಡರೆ, ನಾನು 1 ಕೋಟಿ ನೀಡುತ್ತೇನೆ ಮತ್ತು ಅವರು ಒಂದು ವರ್ಷ ಹಾಗೆ ಮುಂದುವರಿಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗೆ ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಶ್ರೀಲಂಕಾ ತಮಿಳರಿಗೆ ಸ್ವತಂತ್ರ ರಾಜ್ಯವನ್ನು ಬಯಸಿ ಅಲ್ಲಿನ ಸರ್ಕಾರದ ವಿರುದ್ದ ಕಟ್ಟಿದ ಸಶಸ್ತ್ರ ಸಂಘಟನೆಯಾದ ಎಲ್‌ಟಿಟಿಇ ಸಂಸ್ಥಾಪಕರಾಗಿದ್ದಾರೆ ವೇಲುಪಿಳ್ಳೈ ಪ್ರಭಾಕರನ್‌. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿಗೆ ಪ್ರಭಾಕರನ್ ಮತ್ತು ಎಲ್‌ಟಿಟಿಇ ಕಾರಣವಾಗಿದೆ. ಈ ಸಂಘಟನೆಯನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ನಿಷೇಧಿಸಲಾಗಿದೆ.

ಹಿಂದೂ ಧರ್ಮದ ‘ರಕ್ಷಣೆ’ಗಾಗಿ ದೊಡ್ಡ ಪ್ರಮಾಣದ ಹಿಂಸಾತ್ಮಕ ಉಗ್ರಗಾಮಿ ಚಳುವಳಿಗೆ ನರಸಿಂಗಾನಂದರ ಕರೆದಿದ್ದಾರೆ. ನರಸಿಂಗಾನಂದ ಅವರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಇದುವೇ ಮೊದಲ ಬಾರಿಯಲ್ಲ. ಆದರೆ, ಶಸ್ತ್ರ ಎತ್ತುವವರಿಗೆ ಬಹಿರಂಗವಾಗಿ ಬಹುಮಾನವನ್ನು ಘೋಷಿಸುತ್ತಿವುದು ಇದು ಮೊದಲ ಬಾರಿಯಾಗಿದೆ.

ಇದನ್ನೂ ಓದಿ:ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಅದೇ ಸಮಾರಂಭದಲ್ಲಿ ಅವರು ಮುಸ್ಲಿಂ ವಿರೋಧಿ ಚಾನೆಲ್‌ ಸುದರ್ಶನ್‌ ನ್ಯೂಸ್‌ಗೆ ಸಂದರ್ಶನ ನೀಡಿದ್ದರು. ಇದರಲ್ಲಿ ಧರಂ ಸಂಸದ್‌ನಲ್ಲಿ ಪ್ರಭಾಕರನ್‌ ಅವರ ಹೇಳಿಕೆಯನ್ನು ಚರ್ಚಿಸಿದ ಅವರು, “ನಮ್ಮ ಧರಂ ಸಂಸದ್‌ನಲ್ಲಿ, ಹತ್ ಯೋಗಿಜಿ ಮಹಾರಾಜ್ ನಮಗೆ ಪ್ರಭಾಕರನ ಅವಶ್ಯಕತೆಯಿದೆ ಎಂದು ಹೇಳಿದರು. ನಮಗೆ ಪ್ರಭಾಕರನ್, ಭಿಂದ್ರನ್‌ವಾಲೆ ಮತ್ತು ಜನರಲ್ ಶಾಬೇಗ್ ಸಿಂಗ್ ಅವರ ಅವಶ್ಯಕತೆಯಿದೆ ಎಂದು ನಾನು ಹೇಳುತ್ತೇನೆ. ಪ್ರತಿ ಹಿಂದೂ ಮಂದಿರದಲ್ಲಿ ಒಬ್ಬ ಪ್ರಭಾಕರನ್, ಒಬ್ಬ ಭಿಂದ್ರನ್ವಾಲೆ ಮತ್ತು ಒಬ್ಬ ಶಾಬೇಗ್ ಸಿಂಗ್ ಇರುವವರೆಗೂ ಹಿಂದೂ ಧರ್ಮವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನರಸಿಂಗಾನಂದ ಅವರು ಪ್ರಭಾಕರನ್‌ ಜೊತೆಗೆ ಉಲ್ಲೇಖಿಸಿದ ಭಿಂದ್ರನ್‌ವಾಲೆ ಮತ್ತು ಜನರಲ್‌ ಶಾಬೇಗ್‌ ಸಿಂಗ್‌‌ ಅವರು ತಮಗೆ ಬೇರೆಯೇ ದೇಶ ಬೇಕು ಎಂದು ಹೋರಾಟಡುತ್ತಿರುವ ಖಾಲಿಸ್ತಾನ್ ಭಯೋತ್ಪಾದಕ ಸಂಘಟನೆಯ ನಾಯಕರಾಗಿದ್ದಾರೆ.

ಇಷ್ಟೇ ಅಲ್ಲದೆ ನರಸಿಂಗಾನಂದ ಅವರು ‘ಶಸ್ತ್ರಮೇವ ಜಯತೇ'(ಆಯುಧದಿಂದ ಮಾತ್ರ ವಿಜಯ) ಎಂಬ ಘೋಷಣೆಯನ್ನು ಮುಂದಿಟ್ಟಿದ್ದು, ಹಿಂಸಾಚಾರಕ್ಕೆ ಕರೆನೀಡಿದ್ದಾರೆ

ನರಸಿಂಗಾನಂದ ಅವರು ತಮ್ಮ ಭಾಷಣ ಮತ್ತು ಸಂದರ್ಶನದಲ್ಲಿ ಸ್ಪಷ್ಟವಾಗಿ ಹಿಂದೂ ಯುವಕರಿಗೆ ಭಯೋತ್ಪಾದಕರಾಗಿ ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ‘ಭಯೋತ್ಪಾದನೆ’ ಎಂದು ಪರಿಗಣಿಸಲ್ಪಟ್ಟಿರುವ ಹಿಂಸಾತ್ಮಕ ಕ್ರಮಕ್ಕೆ ಅವರು ಸ್ಪಷ್ಟವಾಗಿ ಕರೆ ನೀಡುತ್ತಿದ್ದರೂ, ಸ್ಥಳೀಯ ಪೋಲೀಸ್ ಅಥವಾ ಯಾವುದೇ ಕೇಂದ್ರ ಕಾನೂನು ಜಾರಿ ಸಂಸ್ಥೆ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ದಿ ವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ:ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...