Homeಮುಖಪುಟಎಪಿಜೆ ಅಬ್ದುಲ್ ಕಲಾಂ ಕುರಿತು ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹನಾಡ್ ವಿರುದ್ಧ FIR ದಾಖಲು

ಎಪಿಜೆ ಅಬ್ದುಲ್ ಕಲಾಂ ಕುರಿತು ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹನಾಡ್ ವಿರುದ್ಧ FIR ದಾಖಲು

- Advertisement -
- Advertisement -

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹನಾಡ್ ಸರಸ್ವತಿ ಅವರು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಗಾಝಿಯಾಬಾದ ಪೊಲೀಸರು ತಿಳಿಸಿದ್ದಾರೆ.

ಅರ್ಚಕ ಯತಿ ನರಸಿಂಹನಾಡ್ ಸರಸ್ವತಿ ಅವರು ಮಾತನಾಡಿರುವ ವಿಡಿಯೋವೊಂದು ಶುಕ್ರವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆ ವಿಡಿಯೋ ಕ್ಲಿಪ್ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

”16 ಸೆಕೆಂಡ್‌ಗಳ ವೀಡಿಯೊ ಕ್ಲಿಪ್‌ನಲ್ಲಿ ಯತಿ ಅವರು ಮಾಜಿ ರಾಷ್ಟ್ರಪತಿಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಮುಸ್ಲಿಮರಿಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸುತ್ತಿದ್ದಾರೆ, ಇದು ದ್ವೇಷ ಹರಡಲು ಮತ್ತು ಕೋಮು ಸೌಹಾರ್ದತೆ ಹಾಳುಮಾಡುತ್ತದೆ” ಎಂದು ಮಿಶ್ರಾ ಹೇಳಿದ್ದಾರೆ.

ಕ್ಲಿಪ್ ಆಧರಿಸಿ, ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಕುಮಾರ್ ಗೌತಮ್ ಅವರು ಇಲ್ಲಿನ ವೇವ್ ಸಿಟಿ ಪೊಲೀಸ್ ಠಾಣೆಯಲ್ಲಿ ಯತಿ ವಿರುದ್ಧ ದೂರು ದಾಖಲಿಸಿದ್ದಾರೆ ಮತ್ತು ನಂತರ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಟಿಐಗೆ ಪ್ರತಿಕ್ರಿಯಿಸಿದ ಯತಿ ನರಸಿಂಹನಾಡ್ ಸರಸ್ವತಿ, ”ಈ ವೀಡಿಯೊ ಕ್ಲಿಪ್ ಹಳೆಯದಾಗಿದೆ. ಪೊಲೀಸರು ಪದೇ ಪದೇ ಅದೇ ವಿಷಯದ ಬಗ್ಗೆ ಎಫ್‌ಐಆರ್‌ಗಳನ್ನು ದಾಖಲಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...